ಔರಾದ್‌ | ಹೆಡಗಾಪೂರ ಗ್ರಾಮದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ

Date:

ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಆಯೋಜಿಸಲಾಗಿದ್ದ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು ಚಾಲನೆ ನೀಡಿದರು.

- Advertisement -

ಬಳಿಕ ಮಾತನಾಡಿದ ಅವರ, “ಗ್ರಾಮೀಣ ಪ್ರದೇಶದ ಅರ್ಹ ಕೂಲಿಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ಹೊಸದಾಗಿ ಜಾಬ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು, ಈಗಾಗಲೇ ಇರುವ ಜಾಬ್ ಕಾರ್ಡ್‌ಗಳ ಪರಿಶೀಲಿಸಿ, ಉದ್ಯೋಗದ ಬೇಡಿಕೆ ಸಲ್ಲಿಸುವ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಿಬಿ-ಜಿ ರಾಮ್ ಜಿ ಯೋಜನೆಯಡಿ ಅನುಮತಿಸಲಾದ 318 ವಿವಿಧ ಕಾಮಗಾರಿಗಳಿದ್ದು, ಕೂಲಿಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯಡಿ ದಿನಗೂಲಿ ₹370 ರಿಂದ ₹382ಕ್ಕೆ ಹೆಚ್ಚಳ, ವಾರ್ಷಿಕ ಮಾನವ ದಿನಗಳ ಮಿತಿ 100 ರಿಂದ 125 ದಿನಗಳಿಗೆ ಹೆಚ್ಚಳ, ಒಂದು ಗ್ರಾಮೀಣ ರೋಜ್‌ಗಾರ್ ಗ್ಯಾರಂಟಿ ಕಾರ್ಡ್ ಮೂಲಕ ವಾರ್ಷಿಕವಾಗಿ ₹47,750ರವರೆಗೆ ಕೂಲಿ ಪಡೆಯುವ ಅವಕಾಶವಿದೆ” ಎಂದು ವಿವರಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ಹದತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ!

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರಣಪ್ಪ ಗಾದಗೆ, ಡಿಇಒ ದತ್ತು ಭೋಸ್ಲೆ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಕಾರ್ಯದರ್ಶಿ ರಜನೀಶ್, ಗ್ರಾಮ ಪಂಚಾಯತಿ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...