ಬಾಗಲಕೋಟೆ | ಡಿ.1 ರಂದು ಜಿಲ್ಲೆಗೆ ಸಿಎಂ : ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ

Date:

ಬೀಳಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಕಾಡರಕೊಪ್ಪ, ಅನವಾಲ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಿ. 1 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದರು.

- Advertisement -

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಮಹತ್ವದ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸತ್ತಿನ ಈ ವಿಶೇಷ ಅಧಿವೇಶನ ಮಹಿಳೆಯರಿಗಾಗಿ ಅಲ್ಲ; ಕ್ಷೇತ್ರ...

ಮಹಿಳಾ ಮೀಸಲಾತಿಯನ್ನು ಯಾರೂ ವಿರೋಧಿಸಲು ಧೈರ್ಯ ಮಾಡುವುದಿಲ್ಲ ಎಂಬುದು ಸರ್ಕಾರದ ಲೆಕ್ಕವಾಗಿದೆ. ಹೀಗಾಗಿ ಕ್ಷೇತ್ರ ಮರುವಿಂಗಡಣೆಯ ಪ್ರಸ್ತಾವನೆಯನ್ನು ಮಹಿಳಾ ಮೀಸಲಾತಿಯ ಸೆರಗಿಗೆ ಗಂಟುಹಾಕುವ ಪ್ರಯತ್ನ ನಡೆದಿದೆ. ಭಾರತದ ಚುನಾವಣಾ ನಕ್ಷೆಯನ್ನೇ ಮರುರೂಪಿಸಬಲ್ಲ ಮಸೂದೆಯೊಂದನ್ನು ಬಹಳ...

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಕಾರ್ಯಕ್ರಮಕ್ಕೆ 25 ಸಾವಿರಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಸಮರ್ಪಕ ಆಸನ, ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಬೇಕು. ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಅಲ್ಲದೇ, ಸುಮಾರು 15 ಸಾವಿರ ಮಹಿಳಾ ಫಲಾನುಭವಿಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಹಿಳಾ ಫಲಾನುಭವಿಗಳ ಅನುಕೂಲಕ್ಕಾಗಿ ವಿವಿಧ ಸ್ಥಳಗಳಿಂದ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಲು ಸೂಕ್ತ ವಾಹನಗಳ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣ, ಪಾರ್ಕಿಂಗ್‌, ಭದ್ರತೆ, ವಿದ್ಯುತ್, ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅನೀಕುಮಾರ ದಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಮಂಜುನಾಥ ಡೊಂಬರ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುಖ್ಯ ಅಭಿಯಂತರ ಲಕ್ಷ್ಮಣ ನಾಯಕ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ಥಳ‌ ಪರಿಶೀಲಿಸಿದ‌ ಸಚಿವರು : ಪೂರ್ವಭಾವಿ ಸಭೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹಾಗೂ ಬೀಳಗಿ ಶಾಸಕ ಜೆ.ಟಿ.ಪಾಟೀಲ ಅವರು ಅಧಿಕಾರಿಗಳೊಂದಿಗೆ ಕಾರ್ಯಕ್ರಮ ನಡೆಯಲಿರುವ ಹೂಲಗೇರಿ ಗ್ರಾಮಕ್ಕೆ ಭೇಟಿ ನೀಡಿ ವೇದಿಕೆ, ಪಾರ್ಕಿಂಗ್ ವ್ಯವಸ್ಥೆಗೆ ಬೇಕಾದ ಸ್ಥಳವನ್ನು ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಿದ ಎನ್‌ಸಿಪಿ (ಎಸ್‌ಪಿ) ವಿರುದ್ಧ ಕಾಂಗ್ರೆಸ್ ಆಕ್ರೋಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾವಿಸಿರುವ ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಎನ್‌ಸಿಪಿ...

ವಿಜಯಪುರ |ಕಳ್ಳರ ಕಾಟ ;ಎರಡು ದಿನಗಳಲ್ಲಿ ಏಳು ಮನೆಗಳಿಗೆ ಕನ್ನ

ವಿಜಯಪುರ ಜಿಲ್ಲೆಯ ಆಲಮಟ್ಟಿ ಪಟ್ಟಣದಲ್ಲಿ ಕಳ್ಳರ ಕಾಟ ದಿನದಿಂದ ದಿನಕ್ಕೆ...

ಕನಕದಾಸರ ಕೀರ್ತನೆಗಳು ಸಾಮಾಜಿಕ ಪರಿವರ್ತನೆಯ ದಾರಿದೀಪ: ಜಯಲಕ್ಷ್ಮಿ ರಾಯಕೋಡ್

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಜೊತೆಗೆ ಸಾಮಾಜಿಕ...

2051ರವರೆಗೆ ರಾಜ್ಯಗಳ ಲೋಕಸಭಾ ಸ್ಥಾನ ಪಾಲು ಸ್ಥಗಿತಗೊಳಿಸಲು ಕೇಂದ್ರ ಪ್ರಸ್ತಾವ

ರಾಜ್ಯಗಳ ನಡುವಿನ ಲೋಕಸಭಾ ಕ್ಷೇತ್ರಗಳ ಹಂಚಿಕೆಯಲ್ಲಿ ಪ್ರಸ್ತುತ ಇರುವ ಯಥಾಸ್ಥಿತಿಯನ್ನು ಇನ್ನೂ...