ಬಾಗಲಕೋಟೆ | ಸರ್ವರ್‌ ಸಮಸ್ಯೆ : ಪಡಿತರಕ್ಕಾಗಿ ನಡುರಾತ್ರಿವರೆಗೂ ಕಾದ ಗ್ರಾಮಸ್ಥರು

Date:

ಬಡ ಕುಟುಂಬಗಳಿಗೆ ಸಿಗಬೇಕಾದ ಪಡಿತರ ಪಡೆಯುವುದೇ ಗ್ರಾಮಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನ್ಯಾಯಬೆಲೆ ಅಂಗಡಿಯಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದಲ್ಲಿ ಪಡಿತರ ಚೀಟಿದಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

- Advertisement -

ಪಡಿತರ ಪಡೆಯಲು ಸಾರ್ವಜನಿಕರು ನಸುಕಿನ ಜಾವ 4 ಗಂಟೆಗೆ ನ್ಯಾಯಬೆಲೆ ಅಂಗಡಿ ಮುಂದೆ ಬಂದರೂ, ರಾತ್ರಿ 12 ಗಂಟೆಯಾದರೂ ಪಡಿತರ ಪಡೆಯಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ವರ್ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಪಡಿತರ ವಿತರಣೆ ವಿಳಂಬವಾಗುತ್ತಿದ್ದು, ಒಂದೇ ಕೆಲಸಕ್ಕಾಗಿ ಜನರು ದಿನವಿಡೀ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ ಕೂಲಿ ಕೆಲಸಕ್ಕೆ ಹೋಗುವವರು, ರೈತರು, ಮಹಿಳೆಯರು ಹಾಗೂ ವೃದ್ಧರು ತಮ್ಮ ದೈನಂದಿನ ಕೆಲಸಗಳನ್ನು ಬದಿಗಿಟ್ಟು ಪಡಿತರಕ್ಕಾಗಿ ಸಮಯ ಕಳೆಯುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಸರ್ಕಾರದ ಪಡಿತರ ಸೌಲಭ್ಯ ಪಡೆಯಲು ಸಾರ್ವಜನಿಕರು ಇಷ್ಟೊಂದು ಸಂಕಷ್ಟ ಅನುಭವಿಸಬೇಕೇ ಎಂಬ ಪ್ರಶ್ನೆ ಗ್ರಾಮಸ್ಥರಲ್ಲಿ ಮೂಡಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಜನಸಾಮಾನ್ಯರು ಅನಗತ್ಯವಾಗಿ ತೊಂದರೆ ಅನುಭವಿಸುತ್ತಿದ್ದು, ಪಡಿತರ ವಿತರಣೆಯಲ್ಲಿನ ಅವ್ಯವಸ್ಥೆಗೆ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಧಿಕಾರಿಗಳು ಗಮನಹರಿಸಲಿ : ನ್ಯಾಯಬೆಲೆ ಅಂಗಡಿಗಳಲ್ಲಿ ಪದೇಪದೆ ಎದುರಾಗುತ್ತಿರುವ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಪಡಿತರ ವಿತರಣೆಗೆ ಅಗತ್ಯ ತಾಂತ್ರಿಕ ವ್ಯವಸ್ಥೆ ಕಲ್ಪಿಸಿ, ಸಾರ್ವಜನಿಕರು ರಾತ್ರಿ ಹಾಗೂ ನಸುಕಿನ ಜಾವ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿಯನ್ನು ತಪ್ಪಿಸಬೇಕು. ಸಂಬಂಧಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ತುರ್ತಾಗಿ ಈ ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರಾದ ಬಸವರಾಜ ಗಣಿ, ಮಹೇಶ ಚಿಂಚಖಂಡಿ, ಮಂಜು ಕಾಂತಿ, ಜಗದೀಶ ಪಾಟೀಲ, ಹಣಮಂತ ಮಗದು ದ್ಯಾನಪ್ಪ ಆಸಂಗಿ, ಶಿವಪ್ಪ ವಾಲಿ., ಆನಂದ ಕಂಪು ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...