ಬಾಗಲಕೋಟೆ | ಬಿಜೆಪಿಗರು ಕನ್ನಡಿಗರ ಜತೆ ನಿಲ್ಲುತ್ತಾರೋ, ಇಲ್ಲವೋ ಸ್ಪಷ್ಟಪಡಿಸಲಿ: ಬಸವರಾಜ ಧರ್ಮಂತಿ

Date:

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿ ವಿಷಯಕ್ಕೆ ಅಂಕಗಳನ್ನು ನೀಡುವ ಬದಲು ಶ್ರೇಣಿ(ಗ್ರೇಡ್) ನೀಡಿ 625 ಅಂಕಗಳ ಬದಲು 525 ಅಂಕಗಳಿಗೆ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ. ಆದರೆ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ, ಮಾಜಿ ಸಚಿವ ಬಿ. ಶ್ರೀರಾಮುಲುಗಳಾದಿಯಾಗಿ ಹಿಂದಿವಾಲಾಗಳನ್ನು ಮೆಚ್ಚಿಸುವ ಸಲುವಾಗಿ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹೇಳಿಕೆ ನೀಡುವ ಮೂಲಕ ಕನ್ನಡಿಗರ ವಿರೋಧಿಗಳಾಗಿದ್ದಾರೆ ಎಂದು ಬಾಗಲಕೋಟೆ ಜಿಲ್ಲಾ ಕರವೇ(ಶಿವರಾಮೇಗೌಡ ಬಣ) ಅಧ್ಯಕ್ಷ ಬಸವರಾಜ ಧರ್ಮಂತಿ ಆರೋಪಿಸಿದರು.

- Advertisement -

ಬಾಗಲಕೋಟೆಯ ನವನಗರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ತಮ್ಮದೇ ಬಿಜೆಪಿ ಆಡಳಿತ ಇರುವ ಪಕ್ಕದ ಮಹಾರಾಷ್ಟ್ರ ಸರ್ಕಾರ ಕೂಡ ಹಿಂದಿ ಭಾಷೆಯನ್ನು ಶಿಕ್ಷಣದಿಂದ ತೆಗೆದು ಹಾಕಿ ದ್ವಿಭಾಷಾ ನೀತಿ ಜಾರಿಗೆ ತಂದಿದೆ. ಈ ಕುರಿತು ಕರ್ನಾಟಕ ಬಿಜೆಪಿ ನಾಯಕರು ಏಕೆ ವಿರೋಧ ಮಾಡಲಿಲ್ಲ? ತಮಿಳುನಾಡು, ಕೇರಳ ಮತ್ತು ಉತ್ತರ ಭಾರತದ ಬಹುತೇಕ ರಾಜ್ಯಗಳ ವಿದ್ಯಾರ್ಥಿಗಳು ಐದು ವಿಷಯಗಳನ್ನು ಮಾತ್ರ ಕಲಿಯುತ್ತಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಆರನೇ ವಿಷಯವನ್ನಾಗಿ ಹಿಂದಿ ಭಾಷೆಯನ್ನು ಹೇರುವುದರಿಂದ ಪ್ರಮುಖ ವಿಷಯಗಳ ಕಲಿಕೆಗೆ ಹಿನ್ನಡೆಯಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ: ಸಿದ್ದರಾಮಯ್ಯ ತಿರುಗೇಟು

“ಸದ್ಯ ಬಾಗಲಕೋಟೆ ಉಪಚುನಾವಣೆ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಅನೇಕ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತ ಭಾಷಣ ಮಾಡುತ್ತಿರುವ ಭಾರತೀಯ ಜನತಾ ಪಕ್ಷದ ಎಲ್ಲ ನಾಯಕರು, ಪದಾಧಿಕಾರಿಗಳು ಹಾಗೂ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರು ಹಿಂದಿ ಪರವಾಗಿ ಇರುತ್ತಾರೋ ಅಥವಾ ತಮ್ಮ ಹೇಳಿಕೆಗಳನ್ನು ಹಿಂಪಡೆದು ಕನ್ನಡಿಗರ ಪರವಾಗಿ ನಿಲ್ಲುತ್ತಾರೋ ಎಂಬುದನ್ನು ಎರಡು ದಿನಗಳಲ್ಲಿ ಸಾರ್ವಜನಿಕವಾಗಿ ಸ್ಪಷ್ಟಪಡಿಸಲಿ. ಇಲ್ಲದಿದ್ದರೆ ಬಿಜೆಪಿ ಪ್ರಚಾರ, ಸಭೆ, ಸಮಾರಂಭಗಳು ನಡೆಯುವ ಸ್ಥಳದಲ್ಲೇ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡರ ಬಣ) ಬಾಗಲಕೋಟೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಗುವುದು” ಎಂದು ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಎಚ್ಚರಿಕೆ ನೀಡಿದರು.

ಕರವೇ ಬಾಗಲಕೋಟೆ ಜಿಲ್ಲಾ ಪ್ರಧಾನ ಸಂಚಾಲಕ ಗಣೇಶ ನಾಯಕ, ಬಾಗಲಕೋಟೆ ನಗರ ಘಟಕದ ಅಧ್ಯಕ್ಷ ಮಹಿಬೂಬ ಭೀಮನೂರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...