ಬಾಗಲಕೋಟೆ | ರಸಗೊಬ್ಬರ ಮಾರಾಟ ಪರವಾನಿಗೆ ಅಮಾನತ್ತು

Date:

ರಸಗೊಬ್ಬರ ನಿಯಂತ್ರಣ ಆದೇಶ 1985ರ ಉಲ್ಲಂಘನೆಯಡಿ ತಾಲೂಕಿನ ಗದ್ದನಕೇರಿ ಕ್ರಾಸ್‌ನಲ್ಲಿರುವ ಬಸವೇಶ್ವರ ಟ್ರೇಡ್ಸ್ ರಸಗೊಬ್ಬರ ಮಳಿಗೆಯ ಮಾರಾಟ ಪರವಾನಿಗೆಯನ್ನು ಅಮಾನತ್ತು ಮಾಡಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಕ್ಷಮ ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ತಿಳಿಸಿದ್ದಾರೆ.

ಕಲಾದಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಇತ್ತೀಚೆಗೆ ಗದ್ದನಕೇರಿ ಕ್ರಾಸ್‌ನಲ್ಲಿರುವ ಬಸವೇಶ್ವರ ಟ್ರೇಡ್ಸ್ ಮಳಿಗೆಯನ್ನು ತಪಾಸಣೆ ಮಾಡಿ, ರಸಗೊಬ್ಬರ ನಿಯಂತ್ರಣ ಆದೇಶ 1985ರ ಉಲ್ಲಂಘಿಸಿರುವುದಾಗಿ ಸಹಾಯಕ ಕೃಷಿ ನಿರ್ದೇಶಕರಿಗೆ ವರದಿ ಸಲ್ಲಿಸಿದ್ದರು. ಸದರಿ ವರದಿ ಮೇರೆಗೆ ಸಹಾಯಕ ಕೃಷಿ ನಿರ್ದೇಶಕರು ಹಾಗೂ ರಸಗೊಬ್ಬರ ಪರವಾನಿಗೆಯ ಸಕ್ಷಮ ಪ್ರಾಧಿಕಾರಿಗಳು ಪರವಾನಿಗೆ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

ಇದನ್ನೂ ಓದಿ>ಬೆಳಗಾವಿ | ಮುಂಗಾರು ಹಂಗಾಮಿಗೆ ಸಜ್ಜು: ರಸಗೊಬ್ಬರ-ಬಿತ್ತನೆ ಬೀಜ ಕೊರತೆ ತಪ್ಪಿಸಲು ಕ್ರಮ

ಜಿಲ್ಲೆಯ ಕೃಷಿ ಪರಿಕರ ಮಾರಾಟಗಾರರು ರಸಗೊಬ್ಬರ ವಿತರಣೆಯನ್ನು ರಸಗೊಬ್ಬರ ನಿಯಂತ್ರಣ ಆದೇಶದ ಮತ್ತು ಕೃಷಿ ಇಲಾಖೆಯ ನಿರ್ದೇಶನಗಳನ್ವಯ ಕೈಗೊಳ್ಳಲು ವಿನಂತಿಸಲಾಗಿತ್ತು. “ರಸಗೊಬ್ಬರದ ವಿತರಣೆಗೆ ರೈತರ ಎಫ್‌ಐಡಿ ಕಡ್ಡಾಯಗೊಳಿಸಲಾಗಿದ್ದು, ಎಲ್ಲ ರೈತ ಬಾಂಧವರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಎಫ್‌ಐಡಿಗೆ ಎಲ್ಲ ಸರ್ವೆ ನಂಬರ್‌ಗಳನ್ನು ಜೋಡಣೆ ಮಾಡಿಟ್ಟುಕೊಳ್ಳುವಂತೆ ಈ ಮೂಲಕ ಕೋರಿಲಾಗಿದೆ. ರಸಗೊಬ್ಬರ ಮಾರಾಟದಲ್ಲಿ ಯಾವದೇ ಅಕ್ರಮಗಳು ಮತ್ತು ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬAದಲ್ಲಿ ಕೃಷಿ ಇಲಾಖೆಯ ಗಮನಕ್ಕೆ ತರಲು ರೈತ ಬಾಂಧವರಿಗೆ ವಿನಂತಿಸಿದೆ. ರಸಗೊಬ್ಬರದ ಅಕ್ರಮ ದಾಸ್ತಾನು, ಸಾಗಾಣಿಕೆ ಮತ್ತು ಬಳಕೆ ಕಂಡುಬಂದಲ್ಲಿ ಅಂತಹವರ ವಿರುದ್ಧ ರಸಗೊಬ್ಬರ ನಿಯಂತ್ರಣ ಆದೇಶ 1985 ಮತ್ತು ಅಗತ್ಯ ವಸ್ತುಗಳ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...