ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್ ಗ್ರಂಥಾಲಯಕ್ಕೆ ʼಬೀಗ ಭಾಗ್ಯʼ!

Date:

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ ಈ ಜ್ಞಾನ ದೇಗುಲದ ಬಾಗಿಲುಗಳು ಸದಾ ಮುಚ್ಚಿಕೊಂಡಿದ್ದು, ಒಳಗಿರುವ ಸಾವಿರಾರು ಅಮೂಲ್ಯ ಪುಸ್ತಕಗಳು ಧೂಳಿನ ಪದರದಡಿ ಕಣ್ಮರೆಯಾಗುತ್ತಿವೆ. ಸೂಕ್ತ ನಿರ್ವಹಣೆಯ ಕೊರತೆಯಿಂದಾಗಿ ಬೆಲೆಬಾಳುವ ಪುಸ್ತಕಗಳು ಗೆದ್ದಲು ಪಾಲಾಗುವ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಬಾಗಲಕೋಟೆಯ ಅಂಬೇಡ್ಕರ್ ಭವನದ ಆವರಣದಲ್ಲಿರುವ ಈ ಗ್ರಂಥಾಲಯದಲ್ಲಿ ಓದುಗರ ಅನುಕೂಲಕ್ಕಾಗಿ ಅಗತ್ಯ ಪೀಠೋಪಕರಣಗಳು, ಮೇಜು-ಕುರ್ಚಿಗಳು ಹಾಗೂ ಆಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಆದರೆ ಕಟ್ಟಡ ಮತ್ತು ಪುಸ್ತಕಗಳು ಸಿದ್ಧವಾಗಿದ್ದರೂ ಗ್ರಂಥಾಲಯವನ್ನು ನಿರಂತರವಾಗಿ ನಡೆಸುವ ಸೂಕ್ತ ವ್ಯವಸ್ಥೆಯನ್ನೇ ಮಾಡಲಾಗಿಲ್ಲ. ಖಾಯಂ ಗ್ರಂಥಪಾಲಕರ ನೇಮಕಾತಿ ಇಲ್ಲದಿರುವುದು ಮತ್ತು ನಗರಸಭೆಯ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ಹಣದಲ್ಲಿ ನಿರ್ಮಾಣಗೊಂಡ ಮೂಲಸೌಕರ್ಯ ಸಂಪೂರ್ಣವಾಗಿ ವ್ಯರ್ಥವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಈ ನಿರ್ಲಕ್ಷ್ಯವು ವಿಶೇ‍ಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದ ಯುವಜನತೆಗೆ ದೊಡ್ಡ ಹೊಡೆತ ನೀಡಿದೆ. ಯುಪಿಎಸ್‌ಸಿ, ಕೆಪಿಎಸ್‌ಸಿ, ಪಿಎಸ್‌ಐ, ಎಫ್‌ಡಿಎ ನಂತಹ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಖಾಸಗಿ ಸ್ಟಡಿ ಸೆಂಟರ್‌ಗಳ ದುಬಾರಿ ಶುಲ್ಕ ಭರಿಸಲು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಗ್ರಂಥಾಲಯಗಳು ಅವರಿಗೆ ಪ್ರಮುಖ ಆಸರೆಯಾಗಬೇಕಿತ್ತು. ಆದರೆ ಒಂದು ಕಡೆ ಯುವಜನರು ಓದಲು ಸೂಕ್ತ ಸ್ಥಳ ಸಿಗದೆ ಪರದಾಡುತ್ತಿದ್ದರೆ, ಇನ್ನೊಂದೆಡೆ ಸಿದ್ಧವಿರುವ ಗ್ರಂಥಾಲಯ ಬೀಗ ಹಾಕಿಕೊಂಡು ಮೌನವಾಗಿರುವುದು ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಜ್ಞಾನ ಪಡೆಯುವ ಸಾರ್ವಜನಿಕ ಹಕ್ಕಿನ ಉಲ್ಲಂಘನೆಯಾಗಿದೆ.

“ಶಿಕ್ಷಣ ಪಡೆಯಿರಿ, ಸಂಘಟಿತರಾಗಿ, ಹೋರಾಡಿ” ಎಂದು ಸಮಾಜಕ್ಕೆ ಕರೆ ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನ ಭವನದಲ್ಲೇ ಪುಸ್ತಕಗಳಿಗೆ ಬೀಗ ಹಾಕಿರುವುದು ದೊಡ್ಡ ವಿಪರ್ಯಾಸ. ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆ ತರುವ ಅಂಬೇಡ್ಕರ್ ಅವರ ಆಶಯಕ್ಕೆ ಪೂರಕವಾಗಬೇಕಿದ್ದ ಈ ಕೇಂದ್ರ ಇಂದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಸಂಕೇತವಾಗಿ ಮಾರ್ಪಟ್ಟಿದೆ. ಕೇವಲ ಕಟ್ಟಡಗಳನ್ನು ನಿರ್ಮಿಸಿ ಉದ್ಘಾಟಿಸುವುದಷ್ಟೇ ಅಭಿವೃದ್ಧಿಯಲ್ಲ, ಆ ಸೌಲಭ್ಯಗಳು ಸಾರ್ವಜನಿಕರಿಗೆ ನಿರಂತರವಾಗಿ ಸಿಗುವಂತೆ ನೋಡಿಕೊಳ್ಳುವುದೇ ನಿಜವಾದ ಆಡಳಿತದ ಜವಾಬ್ದಾರಿಯಾಗಿದೆ.

ಇದನ್ನೂ ಓದಿ: ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಈ ಕುರಿತು ಪ್ರತಿಕ್ರಿಯಿಸಿರುವ ನಗರಸಭೆ ಆಯುಕ್ತ ರಿಜ್ವಾನ್ ಸಾರವಾಡ ಅವರು, ಕಳೆದ ಉಪಚುನಾವಣೆಯ ಸಂದರ್ಭದಲ್ಲಿ ಅಂಬೇಡ್ಕರ್ ಭವನವನ್ನು ಮತಗಟ್ಟೆಯಾಗಿ ಬಳಸಿದ್ದರಿಂದ ವ್ಯವಸ್ಥೆಯಲ್ಲಿ ಸ್ವಲ್ಪ ಅಸ್ತವ್ಯಸ್ತತೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲೇ ಈ ಡಿಜಿಟಲ್ ಗ್ರಂಥಾಲಯವನ್ನು ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಿ, ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ ಈ ಹಸ್ತಾಂತರ ಪ್ರಕ್ರಿಯೆ ಮತ್ತು ಗ್ರಂಥಪಾಲಕರ ನೇಮಕಾತಿ ಯಾವಾಗ ಪೂರ್ಣಗೊಳ್ಳಲಿದೆ ಎಂಬುದಕ್ಕೆ ಸ್ಪಷ್ಟ ಉತ್ತರವಿಲ್ಲ.

ರ್ಕಾರಿ ಅನುದಾನದಲ್ಲಿ ನಿರ್ಮಿಸಿ ಮೂಲೆಗುಂಪಾಗುವ ಯೋಜನೆಗಳ ಕುರಿತು ಜಿಲ್ಲಾಡಳಿತವು ‘ಸಾಮಾಜಿಕ ಲೆಕ್ಕಪರಿಶೋಧನೆ’ ನಡೆಸಬೇಕು. ಯೋಜನೆ ಪೂರ್ಣಗೊಂಡು 6 ತಿಂಗಳಾದರೂ ಸಾರ್ವಜನಿಕ ಬಳಕೆಗೆ ಸಿಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡುವ ನಿಯಮ ಜಾರಿಯಾಗಬೇಕಿದೆ.

ಜಿಲ್ಲಾಡಳಿತ ಹಾಗೂ ನಗರಸಭೆ ಅಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಂಥಾಲಯವನ್ನು ಶೀಘ್ರವಾಗಿ ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಿ, ಅಗತ್ಯ ಸಿಬ್ಬಂದಿ ನೇಮಿಸಿ, ಪ್ರತಿದಿನ ನಿಗದಿತ ಸಮಯದಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ಪುಸ್ತಕಗಳನ್ನು ಸ್ವಚ್ಛಗೊಳಿಸಿ ಸಂರಕ್ಷಿಸುವುದರ ಜತೆಗೆ ಡಿಜಿಟಲ್ ಸೌಲಭ್ಯಗಳನ್ನೂ ಸಾರ್ವಜನಿಕರ ಬಳಕೆಗೆ ಒದಗಿಸಬೇಕು.ಇಲ್ಲದಿದ್ದರೆ ಲಕ್ಷಾಂತರ ರೂಪಾಯಿ ವೆಚ್ಚದ ಈ ಯೋಜನೆ ಮತ್ತೊಂದು ನಿರುಪಯುಕ್ತ ಸರ್ಕಾರಿ ಆಸ್ತಿಯಾಗಿ ಉಳಿಯುವ ಅಪಾಯವಿದೆ. ಗ್ರಂಥಾಲಯದ ಬಾಗಿಲು ತೆರೆಯದಿದ್ದರೆ ಅದರೊಳಗಿನ ಪುಸ್ತಕಗಳಿಗೆ ಬೆಲೆಯಿದ್ದರೂ ಸಾರ್ವಜನಿಕರಿಗೆ ಪ್ರಯೋಜನವಿಲ್ಲ. ಅಂಬೇಡ್ಕರ್ ಅವರ ಹೆಸರಿನ ಭವನದಲ್ಲಿ ಪುಸ್ತಕಗಳಿಗೆ ಬೀಗ ಹಾಕಿರುವುದು ಬದಲಾಗಬೇಕು. ಕಟ್ಟಡಕ್ಕೆ ಬಣ್ಣ ಬಳಿಯುವುದಕ್ಕಿಂತ ಜ್ಞಾನದ ಬಾಗಿಲು ತೆರೆಯುವುದು ಮುಖ್ಯ. ಸಾರ್ವಜನಿಕರ ಹಣದಲ್ಲಿ ನಿರ್ಮಿಸಿದ ಗ್ರಂಥಾಲಯ ಸಾರ್ವಜನಿಕರಿಗಾಗಿಯೇ ಬಳಕೆಯಾಗಲಿ ಎಂಬುದು ಪ್ರಜ್ಞಾವಂತ ನಾಗರಿಕರ ಒತ್ತಾಯ.

WhatsApp Image 2025 02 05 at 18.09.20 1
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊನೆ ಉಸಿರಿರೊವರೆಗೂ ದೇಶಸೇವೆ ನಿಲ್ಲಲ್ಲ: ʼಬಾಪ್‌ ಭೀ ಜಾಯೇಗಾʼ ಟ್ರೋಲ್‌ ಬಳಿಕ ಮೋದಿ ಮಾತು

ದೇಶದ ಜನರ ಸೇವೆ ಮಾಡುವುದೇ ನನ್ನ ಜೀವನದ ಗುರಿ. ಕೊನೆಯ ಉಸಿರಿರುವವರೆಗೂ...

ಕೊಪ್ಪಳ | ಕೊಪ್ಪಳ ಜಿಲ್ಲೆಯ ಇಬ್ಬರು ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ಕನ್ನಡ ನಾಡು, ನುಡಿ ಹಾಗೂ ಜಾನಪದ ಕಲೆಯ ಉಳಿವು ಮತ್ತು ಬೆಳವಣಿಗೆಗೆ...

ಚಿಟಗುಪ್ಪ | ಆರೋಗ್ಯವಂತ ಬದುಕಿಗೆ ಯೋಗವೇ ಮದ್ದು: ಚಂದ್ರಕಾಂತ ಗಂಗಶೆಟ್ಟಿ

ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವಲ್ಲಿ ಯೋಗಾಭ್ಯಾಸ ಮಹತ್ವದ...

‘ಕದನ ವಿರಾಮ ಎಂಬುದು ಬರಿ ಕಣ್ಣೊರೆಸುವ ತಂತ್ರ’; ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆ ಆಕ್ರೋಶ

ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದಲ್ಲಿ ಇಸ್ರೇಲ್ ಪಡೆಗಳು ನಡೆಸುತ್ತಿರುವ ಹಿಂಸಾಚಾರ ಮತ್ತು ಮಾನವಹಕ್ಕುಗಳ...