ಅಲ್ಪಸಂಖ್ಯಾತರ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳು ವಿವಿಧ ಯೋಜನೆಗಳ ಪ್ರಯೋಜನ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯವು ನಗರ ಪ್ರದೇಶದಲ್ಲಿ ₹1.03 ಲಕ್ಷ ಹಾಗೂ ಗ್ರಾಮೀಣ ಪ್ರದೇಶದಲ್ಲಿ ₹81 ಸಾವಿರ ಮೀರಿರಬಾರದು. 18ರಿಂದ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸೆ.17ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರಿವು, ಶ್ರಮಶಕ್ತಿ ಸಾಲ, ವೃತ್ತಿ ಪ್ರೋತ್ಸಾಹ ಸಾಲ, ಗಂಗಾ ಕಲ್ಯಾಣ, ಏತ ನೀರಾವರಿ, ಮಹಿಳಾ ಸ್ವ-ಸಹಾಯ ಗುಂಪುಗಳ ಸಾಲ ಹಾಗೂ ಸ್ವಾವಲಂಬಿ ಸಾರಥಿ ವಾಹನ ಖರೀದಿಗೆ ಸಹಾಯಧನ ಸೇರಿದಂತೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಬಹುದಾಗಿದೆ.
ಅರ್ಹ ಅಭ್ಯರ್ಥಿಗಳು kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08354-236255 ಸಂಪರ್ಕಿಸಬಹುದು.




