ಬಾಗಲಕೋಟೆ | ಬರದ ನೈಜ ಚಿತ್ರಣ ಅರಿಯಲು ಕ್ಷೇತ್ರಕ್ಕಿಳಿಯಿರಿ: ಶಾಸಕ ಉಮೇಶ್ ಮೇಟಿ ಸೂಚನೆ

Date:

ಬಾಗಲಕೋಟೆ ತಾಲೂಕಿನಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಗ್ರಾಮಗಳಿಗೆ ತೆರಳಿ ಪರಿಸ್ಥಿತಿಯ ನೈಜ ಚಿತ್ರಣ ಅರಿತುಕೊಳ್ಳಬೇಕು. ಬೆಳೆಹಾನಿ ಸೇರಿದಂತೆ ಬರದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ ವರದಿ ನೀಡುವುದರ ಜೊತೆಗೆ, ಅಗತ್ಯ ಪರಿಹಾರ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಶಾಸಕ ಉಮೇಶ್ ಮೇಟಿ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಬಾಗಲಕೋಟೆ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, “ಬರದಿಂದ ಬೆಳೆ ಹಾನಿಗೊಳಗಾಗಿರುವ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿಸುವ ಬರಗಾಲ ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು. ರೈತರು ಹಾಗೂ ಗ್ರಾಮೀಣ ಜನರು ಉದ್ಯೋಗ ಅರಸಿ ಬೇರೆಡೆ ಗುಳೆ ಹೋಗುವುದನ್ನು ತಡೆಯಲು ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸಬೇಕು. ಅಗತ್ಯವಿರುವ ಗ್ರಾಮಗಳಲ್ಲಿ ವಿಬಿಜಿ-ರಾಮ್ ಜಿ ಯೋಜನೆಯಡಿ ಹೆಚ್ಚಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಮನೆ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸಿದ್ದರೂ ಹಲವು ಗ್ರಾಮಗಳಲ್ಲಿ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಯೋಜನೆಯ ನಿರ್ವಹಣೆಯಲ್ಲಿಯೂ ಲೋಪಗಳು ಕಂಡುಬರುತ್ತಿವೆ. ಕೇವಲ ನಲ್ಲಿ ಸಂಪರ್ಕ ಕಲ್ಪಿಸುವುದಷ್ಟೇ ಅಲ್ಲದೆ, ಜನರಿಗೆ ನಿರಂತರ ಹಾಗೂ ಸಮರ್ಪಕ ಕುಡಿಯುವ ನೀರು ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನೀರಲಕೇರಿ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದ ಶಾಸಕ ಉಮೇಶ್ ಮೇಟಿ, ಕಾಮಗಾರಿ ವಿಳಂಬವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಕೂಡಲೇ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು.

ಬೇವೂರ, ದೇವನಾಳ, ಮುರನಾಳ, ಆರ್ಸಿ ರಾಂಪುರ ಹಾಗೂ ಚಟಗಿನಿಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸದ್ಯ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಪಿ.ಎಚ್ ಪೂಜಾರ, ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಹಾಗೂ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಟಿ.ಎಸ್. ರುದ್ರೇಶಪ್ಪ, ಉಪವಿಭಾಗಾಧಿಕಾರಿ ಮಹೇಶಕುಮಾರ ಮಾಲಗಿತ್ತಿ, ತಹಸೀಲ್ದಾರರಾದ ವಾಸುದೇವಸ್ವಾಮಿ, ಪ್ರದೀಪ್‌ಕುಮಾರ್ ಹಿರೇಮಠ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಭಾಷ್ ಸಂಪಗಾವಿ, ಮುರಳೀಧರ ದೇಶಪಾಂಡೆ, ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲೂಕು ಅಧ್ಯಕ್ಷ ರಾಮಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...