ಬಾಗಲಕೋಟೆ | ಸರ್ಕಾರಿ ಶಾಲೆಗಳಲ್ಲಿ ಶೇ.100 ಫಲಿತಾಂಶ ಸಾಧನೆಗೆ ಜಿ.ಪಂ ಗುರಿ

Date:

ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿ ಶಾಲೆಯೂ ಶೇ.100ರಷ್ಟು ಫಲಿತಾಂಶ ಸಾಧಿಸುವಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಸೂಚಿಸಿದರು.

- Advertisement -

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಪರೀಕ್ಷೆಯ ಕೊನೆಯ ಹಂತದವರೆಗೆ ಕಾಯದೇ, ಶೈಕ್ಷಣಿಕ ವರ್ಷದ ಆರಂಭದಿಂದಲೇ ಸಮಗ್ರ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಪ್ರತಿ ವಿದ್ಯಾರ್ಥಿಯೂ ಕನಿಷ್ಠ 60ಕ್ಕೂ ಅಧಿಕ ಅಂಕ ಗಳಿಸುವಂತಾಗಬೇಕು. ಈ ಗುರಿ ಸಾಧಿಸಲು ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಗುರುತಿಸಬೇಕು. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ವಿಶೇಷ ಬೋಧನೆ, ಪುನರ್‌ಬೋಧನೆ ಹಾಗೂ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

ಕಲಿಕಾ ಗುಣಮಟ್ಟ ಸುಧಾರಣೆ ಹಾಗೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸುವ ಉದ್ದೇಶದಿಂದ ಈಗಾಗಲೇ ಪ್ರತಿ ತಾಲ್ಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಶಾಲೆಗಳ ಶೈಕ್ಷಣಿಕ ಪ್ರಗತಿಯ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಸೂಚಿಸಿದರು.

ನೋಡಲ್ ಅಧಿಕಾರಿಗಳು ತಮಗೆ ಹಂಚಿಕೆ ಮಾಡಿರುವ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತರಗತಿ ಬೋಧನೆ, ಮಕ್ಕಳ ಕಲಿಕಾ ಮಟ್ಟ, ಹಾಜರಾತಿ ಹಾಗೂ ಶಿಕ್ಷಕರ ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕು. ಶಿಕ್ಷಕರು ಮಕ್ಕಳ ಕಲಿಕೆಯಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾ ವಹಿಸುವುದರ ಜತೆಗೆ, ಅಗತ್ಯವಿರುವ ಕಡೆಗಳಲ್ಲಿ ಮಾರ್ಗದರ್ಶನ ನೀಡಿ ಶೈಕ್ಷಣಿಕ ಪ್ರಗತಿಗೆ ಕ್ರಮಕೈಗೊಳ್ಳಬೇಕು ಎಂದರು.

ನಿಗದಿಪಡಿಸಿರುವ ಗುರಿ ಸಾಧನೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಸಮನ್ವಯದಿಂದ ತಂಡವಾಗಿ ಕಾರ್ಯನಿರ್ವಹಿಸಬೇಕು. ಪ್ರತಿ ಶಾಲೆಗೆ ಶೇ.100 ಫಲಿತಾಂಶ, ಪ್ರತಿ ವಿದ್ಯಾರ್ಥಿಗೆ 60ಕ್ಕೂ ಅಧಿಕ ಅಂಕ ಎಂಬ ಗುರಿಯನ್ನು ಸಾಕಾರಗೊಳಿಸಲು ಎಲ್ಲ ಅಧಿಕಾರಿಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗಜಾನನ ಬಾಲೆ ಹೇಳಿದರು.

ಈಗಾಗಲೇ ವಸತಿ ಶಾಲೆಗಳು ಹಾಗೂ ಅರಿವು ಕೇಂದ್ರಗಳ ಮೂಲಕ ಮಕ್ಕಳಿಗೆ ‘ವಿಷನ್ 90+’ ಆನ್‌ಲೈನ್ ತರಬೇತಿ ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಸಹ-ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಆನ್ ಅಲ್ಲಾಪೂರ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೀತಾರಾಮು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಕಾಂಬಳೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....