ಬಸವಕಲ್ಯಾಣದಲ್ಲಿ ಜೂ.28ರಂದು ಬಸವಾದಿ ಶರಣರ ಲಿಂಗಾಯತ ಧರ್ಮದ ಸಮಾಲೋಚನಾ ಸಭೆ

Date:

ಬಸವ ಧರ್ಮ ಪೀಠದ ರಾಷ್ಟ್ರೀಯ ಬಸವ ದಳ ಹಾಗೂ ವಿವಿಧ ಬಸವ ಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 28ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಸವ ಮಹಾಮನೆ, ಬಸವ ಧರ್ಮ ಪೀಠ ಬಸವಕಲ್ಯಾಣದಲ್ಲಿ ಬಸವಾದಿ ಶರಣರ ಲಿಂಗಾಯತ ಧರ್ಮದ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ತಿಳಿಸಿದ್ದಾರೆ.

- Advertisement -

ಈ ಸಮಾಲೋಚನಾ ಸಭೆಯಲ್ಲಿ ಲಿಂಗಾಯತ ಧರ್ಮದ ಸ್ವತಂತ್ರ ಧರ್ಮ ಹೋರಾಟದ ಮುಂದಿನ ರೂಪುರೇಷೆಗಳ ಕುರಿತು ಚರ್ಚೆ ನಡೆಸಲಾಗುವುದು. ಜೊತೆಗೆ ಬಸವ ತತ್ವ ಮತ್ತು ಸಿದ್ಧಾಂತಗಳ ಪರಿಣಾಮಕಾರಿ ಪ್ರಚಾರಕ್ಕಾಗಿ ರಾಜ್ಯಾದ್ಯಂತ ಯಾವ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬ ಕುರಿತು ಸಮಗ್ರವಾಗಿ ವಿಚಾರ ವಿನಿಮಯ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಸಭೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಬಸವಾದಿ ಶರಣರು, ಲಿಂಗಾಯತ ಧರ್ಮದ ಮಠಾಧಿಪತಿಗಳು, ಪೂಜ್ಯರು, ಮಾತಾಜಿಯವರು, ಧಾರ್ಮಿಕ ಮುಖಂಡರು ಹಾಗೂ ಅನುಯಾಯಿಗಳು ಭಾಗವಹಿಸಿ ತಮ್ಮ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲಿದ್ದಾರೆ.

ಬೀದರ ಜಿಲ್ಲೆಯ ಸಮಸ್ತ ಬಸವಾದಿ ಶರಣರು, ಪೂಜ್ಯರು, ಮಠಾಧಿಪತಿಗಳು, ಮಾತಾಜಿಯವರು, ಸಮಾಜದ ಮುಖಂಡರು ಹಾಗೂ ಲಿಂಗಾಯತ ಧರ್ಮದ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾಲೋಚನಾ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

ಇದನ್ನೂ ಓದಿ : ಭಾಲ್ಕಿ | ಅರ್ಹ ಮತದಾರರ ಹೆಸರು ಡಿಲೀಟ್ ಆಗದಂತೆ ನೋಡಿಕೊಳ್ಳಿ : ಈಶ್ವರ ಖಂಡ್ರೆ

ಸಮಾಲೋಚನಾ ಸಭೆಯಲ್ಲಿ ಚೆನ್ನಬಸವಾನಂದ ಸ್ವಾಮೀಜಿ, ಡಾ.ಸಿದ್ಧರಾಮ ಶರಣರು ಬೆಲ್ದಾಳ, ಬೀದರ್‌ ಬಸವ ಮಂಟಪದ ಸತ್ಯಾದೇವಿ ಮಾತಾಜಿ, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ ಬುಳ್ಳಾ ಸೇರಿದಂತೆ ಪ್ರಮುಖರಾದ ಚೆನ್ನಬಸವ ಹಂಗರಗಿ, ಬಸವರಾಜ ಪಾಟೀಲ ಹಾರೂರಗೇರಿ, ಜಗದೀಶ್ವರ ಬಿರಾದಾರ, ಓಂಪ್ರಕಾಶ ರೊಟ್ಟಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಪೂಜ್ಯರು, ಮಠಾಧಿಪತಿಗಳು, ಧಾರ್ಮಿಕ ಮುಖಂಡರು ಹಾಗೂ ಬಸವಾಭಿಮಾನಿಗಳು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್‌ನಲ್ಲಿ ಚಳಿಗಾಲದ ಚುನಾವಣೆ ವಿರೋಧಿಸಿ ಪ್ರತಿಭಟನೆಗೆ ಕರೆ; ಲೇಹ್-ಕಾರ್ಗಿಲ್‌ನಲ್ಲಿ ಧರಣಿ ಬ್ಯಾನ್ ಮಾಡಿದ ಸಿಇಒ

ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮುಂಬರುವ ಸಾಲು ಸಾಲು ಚುನಾವಣೆಗಳ ಬೆನ್ನಲ್ಲೇ ರಾಜಕೀಯ...

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು...