ಮಾಜಿ ಶಾಸಕರಿಗೆ ಲಕ್ಷಾಂತರ ರೂ. ಸೌಲಭ್ಯ: ಜನಸಾಮಾನ್ಯರ ಬೇಡಿಕೆಗಳಿಗೆ ಮಾತ್ರ ಆರ್ಥಿಕ ಹೊರೆಯ ನೆಪ!

Date:

ಮಾಜಿ ಶಾಸಕರಿಗೆ ಪಿಂಚಣಿ, ವೈದ್ಯಕೀಯ ನೆರವು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು ಹಾಗೂ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಸಂದರ್ಭದಲ್ಲಿ ಮಾತ್ರ ಆರ್ಥಿಕ ಹೊರೆಯ ನೆಪ ಹೇಳುತ್ತಿರುವುದು ಸರ್ಕಾರದ ಇಬ್ಬಗೆಯ ನೀತಿಯನ್ನು ತೋರಿಸುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರಿಗೆ ಮಾಸಿಕ 75 ಸಾವಿರ ರೂಪಾಯಿ ಪಿಂಚಣಿ ಹಾಗೂ 20 ಸಾವಿರ ರೂಪಾಯಿ ವೈದ್ಯಕೀಯ ನೆರವು ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಅಲ್ಲದೆ, ಮಾಜಿ ಶಾಸಕರ ನಿಧನದ ನಂತರ ಅವರ ಪತ್ನಿಗೂ ಪಿಂಚಣಿ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಮುಂದುವರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಸಮಾಜದ ಅಭಿವೃದ್ಧಿಗೆ ಶ್ರಮಿಸುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು ಹಾಗೂ ರೈತರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿದಾಗ ಸರ್ಕಾರದ ಬಳಿ ಹಣದ ಕೊರತೆಯ ನೆಪ ಕೇಳಿಬರುತ್ತದೆ. ಆದರೆ ಮಾಜಿ ಜನಪ್ರತಿನಿಧಿಗಳಿಗೆ ನೀಡುವ ಸೌಲಭ್ಯಗಳ ವಿಚಾರದಲ್ಲಿ ಸರ್ಕಾರ ಉದಾರ ಧೋರಣೆ ಅನುಸರಿಸುತ್ತಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

ಜನಸಾಮಾನ್ಯರ ತೆರಿಗೆ ಹಣದಿಂದ ಆಡಳಿತ ನಡೆಸುವ ಸರ್ಕಾರ, ಜನಪ್ರತಿನಿಧಿಗಳ ಸೌಲಭ್ಯಗಳಿಗೂ ಹಾಗೂ ದುಡಿಯುವ ವರ್ಗದ ಬೇಡಿಕೆಗಳಿಗೂ ಸಮಾನ ನ್ಯಾಯದ ಮಾನದಂಡ ಅನುಸರಿಸಬೇಕು. ಜನಪ್ರತಿನಿಧಿಗಳಿಗೆ ನೀಡುವ ಸೌಲಭ್ಯಗಳ ಬಗ್ಗೆ ಮರುಪರಿಶೀಲನೆ ನಡೆಸಿ, ದುಡಿಯುವ ವರ್ಗದ ಜನರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು ಎಂದು ಭೀಮಪ್ಪ ಗಡಾದ ಆಗ್ರಹಿಸಿದರು.

ಜನಪ್ರತಿನಿಧಿಗಳ ಸೌಲಭ್ಯಗಳಿಗೆ ಹಣದ ಕೊರತೆಯಿಲ್ಲ, ಜನಸಾಮಾನ್ಯರ ಬೇಡಿಕೆ ಬಂದಾಗ ಮಾತ್ರ ಆರ್ಥಿಕ ಹೊರೆಯ ನೆಪ ಏಕೆ? ಎಂಬ ಪ್ರಶ್ನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು ಮಹಿಳೆಯರ ಆರೋಗ್ಯಕ್ಕೆ ಸವಾಲು

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ...

ಜನನುಡಿ 2026 | ಶಿಕ್ಷಣಕ್ಕಾಗಿ ನಡೆದ ಹೋರಾಟವನ್ನು ಕೇವಲ ಜೆನ್-ಜಿ ಚಳವಳಿಯೆಂದು ಕರೆಯಬಾರದು: ಶರಣ್ಯ ವರ್ಮ

ಜನನುಡಿ 2026ರ ಉದ್ಘಾಟನಾ ಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ವಿದ್ಯಾರ್ಥಿ ಚಳವಳಿಯ ಪ್ರತಿನಿಧಿ...

‘ಪ್ರಣಾಮ್ ಮಹೋದಯ್’ ರ‍್ಯಾಗಿಂಗ್ ಪ್ರಕರಣ: ಲಖನೌದ ಕೆಜಿಎಂ ವಿವಿಯ 38 ಎಂಬಿಬಿಎಸ್ ವಿದ್ಯಾರ್ಥಿಗಳು ಅಮಾನತು

ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಹಾಗೂ ಕಿರುಕುಳ ನೀಡಿದ ಆರೋಪದ ಮೇಲೆ ಇಲ್ಲಿನ...

ಜಿಲ್ಲಾಧಿಕಾರಿಯಿಂದ ಅಗೌರವ ಆರೋಪ : ಸಭೆಯಲ್ಲಿ ನೆಲದ ಮೇಲೆ ಕುಳಿತ ಭೀಮಶಕ್ತಿ ಸಂಘಟನೆ ಸದಸ್ಯರು

ಭೀಮಶಕ್ತಿ ಸಂಘಟನೆ ಪದಾಧಿಕರಿಗಳಿಗೆ ಜಿಲ್ಲಾಧಿಕಾರಿಯಿಂದ ಅಗೌರವ ತೋರಿಸಲಾಗಿದೆ ಎಂದು ವಿರೋಧಿಸಿ...