ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಗರಿಷ್ಠ 80 ಡೆಸಿಬಲ್ ಶಬ್ದಮಿತಿ ಪಾಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ರಾಣಿ ಚನ್ನಮ್ಮ ವೃತ್ತದ ಸಮೀಪ ಆಸ್ಪತ್ರೆ ಇರುವುದರಿಂದ ಹೆಚ್ಚಿನ ಶಬ್ದದಿಂದ ರೋಗಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ನಿಗದಿತ ಶಬ್ದಮಿತಿಯನ್ನು ಮೀರಿ ಡಿಜೆ ಬಳಸಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಣಿ ಚನ್ನಮ್ಮ ವೃತ್ತದ ಸಮೀಪ ಆಸ್ಪತ್ರೆ ಇರುವುದರಿಂದ ಹೆಚ್ಚಿನ ಶಬ್ದದಿಂದ ರೋಗಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ನಿಗದಿತ ಶಬ್ದಮಿತಿಯನ್ನು ಮೀರಿ ಡಿಜೆ ಬಳಸಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯೋತ್ಸವದ ಮೆರವಣಿಗೆ, ರೂಪಕ ವಾಹನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವೇದಿಕೆ ಸಿದ್ಧತೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ನಗರ ಪೋಲಿಸ್ ಆಯುಕ್ತರಾದ ಪ್ರಕಾಶ ನಿಕಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕನ್ನಡಪರ ಸಂಘಟನೆಗಳು, ಪದಾಧಿಕಾರಿಗಳು ಹಾಜರಿದ್ದರು.