ಬೆಂಗಳೂರು ಕೌಂಪೌಂಡ್‌ ಕುಸಿತ ಪ್ರಕರಣ- ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು ದಾಖಲು

Date:

ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಶಿವಾಜಿನಗರ ಬಳಿಯ ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುವೋಮೊಟೋ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

- Advertisement -

ಮಾಧ್ಯಮಗಳ ಜೊತೆಗೆ ಮಾತನಾಡಿದ ಲೋಕಾಯುಕ್ತರು, “ಈ ದುರಂತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೂ ಕಾರಣ. ಈ ಹಿಂದೆಯೂ ನಗರವ್ಯಾಪ್ತಿಯಲ್ಲಿ ಇಂತಹ ಘಟನೆಗಳು ನಡೆದಿತ್ತು. ಹೊಸ ಕಾಂಪೌಂಡ್‌ ಅರ್ಧಕ್ಕೆ ನಿಲ್ಲಿಸಲಾಗಿದೆ. ಗೋಡೆಗೆ ಒತ್ತಿಕೊಂಡು ಮಣ್ಣು ತುಂಬಲಾಗಿದೆ. ಎಂಜಿನಿಯರ್‌ಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಆಸ್ಪ್ರತ್ರೆ ಮುಖ್ಯಸ್ಥರೂ ನಿಗಾ ವಹಿಸಬೇಕಿತ್ತು. ಜಿಬಿಎ ಅಧಿಕಾರಿಗಳು ಗಮನಿಸಬೇಕಿತ್ತು. ಯಾರು ಈ ಗೋಡೆ ಕಟ್ಟಿದ್ದಾರೆ, ಕಾಮಗಾರಿ ಹೇಗೆ ನಡೆದಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ದೂರು ದಾಖಲಿಸಿ ತನಿಖೆ ನಡೆಸುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದ ಮೂಲಕ ಆಕ್ರೋಶ ಹೊರಹಾಕಿ: ಕಾಂಗ್ರೆಸ್ ಕರೆ

ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ, ಇದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಸಾಮಾನ್ಯ...

ಮೋದಿ ಸರ್ಕಾರದಿಂದ ‘ಮತ ಕಳ್ಳತನ’ದ ನಂತರ ‘ಹಕ್ಕುಗಳ ಕಳ್ಳತನ’ ಶುರು: ರಾಹುಲ್ ಗಾಂಧಿ ಆಕ್ರೋಶ

ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...