ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ನೆರವಾಗುವ ಉದ್ದೇಶದಿಂದ ರಿಶೈನ್ ಆರ್ಗನೈಸೇಷನ್ ವತಿಯಿಂದ 2026–27ನೇ ಸಾಲಿನ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ವರ್ಷದ ಇಂಜಿನಿಯರಿಂಗ್ ಹಾಗೂ ಎಂಬಿಬಿಎಸ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಸಂಸ್ಥೆಯು ಸಹಕರಿಸಲಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಹಾಗೂ ಅಂತಿಮ ಅನುಮೋದನೆಗೆ ಒಳಪಟ್ಟು ₹40 ಸಾವಿರದಿಂದ ₹50 ಸಾವಿರದವರೆಗೆ ಆರ್ಥಿಕ ನೆರವು ದೊರೆಯುವ ಸಾಧ್ಯತೆ ಇದೆ ಎಂದು ರಿಶೈನ್ ಆರ್ಗನೈಸೇಷನ್ ಸಂಸ್ಥಾಪಕ ರೋಹನಕುಮಾರ ತಿಳಿಸಿದ್ದಾರೆ.
ಅರ್ಹತೆ-ದಾಖಲೆಗಳೇನು
- ಪ್ರಥಮ ವರ್ಷದ ಇಂಜಿನಿಯರಿಂಗ್ ಅಥವಾ ಎಂಬಿಬಿಎಸ್ ಕೋರ್ಸ್‌ಗೆ ಹೊಸದಾಗಿ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
- ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ 6 ಸಾವಿರ ಒಳಗಿನ ರ‍್ಯಾಂಕ್ ಹೊಂದಿರಬೇಕು. ನೀಟ್ ಪರೀಕ್ಷೆಯಲ್ಲಿ 40 ಸಾವಿರ ಒಳಗಿನ ರ‍್ಯಾಂಕ್ ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯ ₹3 ಲಕ್ಷಕ್ಕಿಂತ ಕಡಿಮೆ ಇರಬೇಕು. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.70 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು.
ದ್ವಿತೀಯ ಪಿಯು ಅಂಕಪಟ್ಟಿ, ಪ್ರವೇಶ ಪರೀಕ್ಷೆಯ ರ‍್ಯಾಂಕ್ ಪ್ರಮಾಣಪತ್ರ, ಕೌನ್ಸೆಲಿಂಗ್/ಸೀಟ್ ಅಲಾಟ್‌ಮೆಂಟ್ ಪತ್ರ, ಕುಟುಂಬದ ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಟ್ಯೂಷನ್/ಹಾಸ್ಟೆಲ್/ಮೆಸ್ ಶುಲ್ಕದ ರಸೀದಿಗಳು, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಕಾಲೇಜಿನ ಬೋನಾಫೈಡ್ ಪ್ರಮಾಣಪತ್ರ, ಕಾಲೇಜು ಶುಲ್ಕದ ವಿವರ ಹಾಗೂ ಪೋಷಕರು/ಪಾಲಕರ ಘೋಷಣಾ ಪತ್ರ ಸಲ್ಲಿಸಬೇಕು.
ಇದನ್ನೂ ಓದಿ : ಬೀದರ್ | ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಿಕೊಳ್ಳಲು ʼಅನ್ನ ಸೇವೆʼ ಮೊಬೈಲ್ ಆ್ಯಪ್
ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಬೀದರ್ ನಗರದಲ್ಲಿರುವ ರಿಶೈನ್ ಆರ್ಗನೈಸೇಷನ್ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಹತೆ ಹಾಗೂ ದಾಖಲೆಗಳ ಪರಿಶೀಲನೆಯ ಬಳಿಕ ವಿದ್ಯಾರ್ಥಿವೇತನಕ್ಕಾಗಿ ಶಿಫಾರಸು ಮಾಡುವ ಪ್ರಕ್ರಿಯೆಯಲ್ಲಿ ಸಂಸ್ಥೆಯ ತಂಡ ಸಹಕರಿಸಲಿದೆ. ಹೆಚ್ಚಿನ ಮಾಹಿತಿಗಾಗಿ ರಿಶೈನ್ ಆರ್ಗನೈಸೇಷನ್ ಮುಖ್ಯಸ್ಥರ ಈ ಸಂಖ್ಯೆಗೆ 99066616858) ಕರೆ ಮಾಡಬಹುದು




