ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

Date:

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡೂ ಪಕ್ಷಗಳು ಪರಸ್ಪರ ಶಾಮೀಲಾಗಿ ಭ್ರಷ್ಟಾಚಾರದಲ್ಲಿ ಮುಳುಗಿವೆ ಎಂದು ದೆಹಲಿಯ ಆಮ್ ಆದ್ಮಿ ಪಕ್ಷದ (ಆಪ್) ಶಾಸಕ ಅನಿಲ್ ಝಾ ಆರೋಪಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಉತ್ತರ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಬೀದರ್, ರಾಯಚೂರು, ಬೆಳಗಾವಿ ಸೇರಿದಂತೆ ಸುಮಾರು 10 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಈಶಾನ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಯಾಗಿ ಸಾಯಿಬಣ್ಣ ಜಮಾದಾರ್ ಅವರು ಸ್ಪರ್ಧಿಸುತ್ತಿದ್ದಾರೆ. ಮೊದಲ ಆದ್ಯತೆ ಮತ ಚಲಾಯಿಸಿ ಗೆಲ್ಲಿಸಬೇಕೆಂದು ಹೇಳಿದರು.

WhatsApp Image 2026 10 10 at 7.46.08 PM 5
ಜಾಹೀರಾತು

“ರಾಜ್ಯದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ವಕ್ಫ್ ಆಸ್ತಿ ಹಾಗೂ ಭೂ ಹಗರಣಗಳು ನಡೆದಿವೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ಕೇವಲ ಮತಬ್ಯಾಂಕ್‌ಗಳಾಗಿ ಬಳಸಿಕೊಳ್ಳುತ್ತಿದೆ. ಕಳೆದ 12 ವರ್ಷಗಳಲ್ಲಿ ಎಷ್ಟು ಮಂದಿ ಬಾಂಗ್ಲಾದೇಶಿಯರನ್ನು ದೇಶದಿಂದ ಹೊರಹಾಕಲಾಗಿದೆ ಎಂಬುದನ್ನು ಕೇಂದ್ರ ಬಿಜೆಪಿ ಸರ್ಕಾರ ಸ್ಪಷ್ಟಪಡಿಸಬೇಕು. ಶಾಸಕರನ್ನು ಖರೀದಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹತ್ತಿಕ್ಕಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ, ಸಿಎಂ ಡಿ.ಕೆ.ಶಿವಕುಮಾರ ನೇತ್ರತ್ವದ ರಾಜ್ಯ ಸರ್ಕಾರ ಪ್ರತಿ ಎಕರೆಗೆ ಕೇವಲ ₹2,500 ಪರಿಹಾರ ನೀಡುತ್ತಿರುವುದು ಸರಿಯಲ್ಲ. ಇಷ್ಟು ಕಡಿಮೆ ಮೊತ್ತದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ಪ್ರಶ್ನಿಸಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅಲ್ಪಸಂಖ್ಯಾತರು, ದಲಿತರು, ಲಿಂಗಾಯತರು ಸೇರಿದಂತೆ ಎಲ್ಲ ವರ್ಗಗಳ ಜನರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ತಿರಸ್ಕರಿಸಿ, ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

WhatsApp Image 2026 10 10 at 6.59.42 PM 3
ಜಾಹೀರಾತು

ಇದನ್ನೂ ಓದಿ : ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಪತ್ರಿಕಾಗೋಷ್ಠಿಯಲ್ಲಿ ಎಎಪಿ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ, ಉಪಾಧ್ಯಕ್ಷ ವಿಜಯ್ ಶರ್ಮಾ, ಬೀದರ್ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ. ಜಾವೇದ್, ಬೀದರ್, ಕಲಬುರಗಿ, ಯಾದಗಿರಿ ಉಸ್ತುವಾರಿ ಸೈಯದ್ ಜಮೀಲ್, ಹುಮ್ನಾಬಾದ್‌ನ ಬ್ಯಾಕ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಫಾರ್ಮ್‌ 6 ಸುಳ್ಳು ಘೋಷಣೆಗೆ ಒತ್ತು ನೀಡುತ್ತಿದೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ಮತದಾರರ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...