ಬೀದರ್‌ | ಭಿಕ್ಷಾಟನೆ ಮುಕ್ತ ನಗರ‌ವನ್ನಾಗಿಸಲು ಜಿಲ್ಲಾಡಳಿತ ಸಹಕಾರ ಅಗತ್ಯ

Date:

ಬೀದರ್‌ ನಗರದ ಟ್ರಾಫಿಕ್ ಸಿಗ್ನಲ್‌, ಧಾರ್ಮಿಕ ಕೇಂದ್ರ, ಸಾರ್ವಜನಿಕ ಸ್ಥಳ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಭಿಕ್ಷಾಟನೆ ನಿಯಂತ್ರಣ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುತ್ತಿದ್ದು, ಬೀದರ್ ಭಿಕ್ಷಾಟನೆ ಮುಕ್ತ ನಗರ‌ವನ್ನಾಗಿಸಲು ಜಿಲ್ಲಾಡಳಿತದ ಸಹಕಾರ ಮತ್ತು ಮಾರ್ಗದರ್ಶನ ನೀಡಬೇಕೆಂದು ಮನವಿ ಮಾಡಲಾಗಿದೆ.

- Advertisement -

ಈ ಸಂಬಂಧ ಗುರುವಾರ ಬೆಟರ್ಮೆಂಟ್ ಫೌಂಡೇಶನ್ ಹಾಗೂ ಬೀದರ್ ನಾಗರಿಕ ಸನ್ಮಾರ್ಗ ಸಮಿತಿಯ ಪ್ರಮುಖರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಬೀದರ್ ನಗರವನ್ನು ಭಿಕ್ಷಾಟನೆ ಮುಕ್ತ ಸಮಾಜವನ್ನಾಗಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಬೀದರ ಜಿಲ್ಲೆಯ ವಿವಿಧ ಪ್ರದೇಶಗಳು, ಧರ್ಮಗಳು, ಜಾತಿಗಳು ಹಾಗೂ ಎಲ್ಲಾ ಸಮುದಾಯಗಳನ್ನು ಪ್ರತಿನಿಧಿಸುವ 40ಕ್ಕೂ ಹೆಚ್ಚು ಸಾಮಾಜಿಕ ಸಂಘಟನೆಗಳು ಈ ಮಾನವೀಯ ಕಾರ್ಯಕ್ಕೆ ಬೆಂಬಲ ನೀಡುತ್ತಿವೆ. ಭಿಕ್ಷಾಟನೆ ನಿರ್ಮೂಲನೆ ಮತ್ತು ಪುನರ್ವಸತಿ ಕಾರ್ಯಕ್ರಮಗಳ ಜಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಉತ್ತಮ ಕಾರ್ಯವನ್ನು ನಾವು ಹೃತೂರ್ವಕವಾಗಿ ಅಭಿನಂದಿಸುತ್ತೇವೆʼ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ʼಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆ, 1975 ರ ಕಲಂ 3ರ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಭಿಕ್ಷಾಟನೆ ನಿಷೇಧಿಸಲಾಗಿದೆ. ಇದೇ ಕಾಯ್ದೆಯ ಕಲಂ 11(1) ಅನ್ವಯ, ಸರ್ಕಾರದಿಂದ ಅಧಿಕಾರ ಪಡೆದ ಅಧಿಕಾರಿಗಳು ಅಥವಾ ಪೊಲೀಸ್ ಅಧಿಕಾರಿಗಳು ಭಿಕ್ಷಾಟನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಅಂತಹವರನ್ನು ತಾಲ್ಲೂಕು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಕಾನೂನು ಪ್ರಕಾರ ಪುನರ್ವಸತಿ ಕೇಂದ್ರಗಳಲ್ಲಿ ಇರಿಸಲು ಅವಕಾಶವಿದೆʼ ಎಂದು ತಿಳಿಸಿದರು.

ʼರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯು ರಾಜ್ಯದಾದ್ಯಂತ ಪುನರ್ವಸತಿ ಕೇಂದ್ರಗಳನ್ನು ನಡೆಸುತ್ತಿದ್ದು. ಭಿಕ್ಷಾಟನೆಯಲ್ಲಿ ತೊಡಗಿರುವವರಿಗೆ ಗೌರವಯುತ ಜೀವನೋಪಾಯ ಕಲ್ಪಿಸಲು ಕೈಗೊಂಡಿರುವ ಯೋಜನೆಗಳನ್ನು ನಾವು ಪ್ರಶಂಸಿಸುತ್ತೇವೆʼ ಎಂದರು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಕಾನೂನು ಜಾರಿ ಹಾಗೂ ಪುನರ್ವಸತಿ ಮೂಲಕ ಬೀದರ್ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತ ಸಮಾಜವನ್ನಾಗಿ ರೂಪಿಸಬಹುದು ಎಂಬ ವಿಶ್ವಾಸ ನಮ್ಮದಾಗಿದೆ. ಈ ಮಹತ್ವದ ಪ್ರಯತ್ನಕ್ಕೆ ನಿಮ್ಮ ಮಾರ್ಗದರ್ಶನ ಹಾಗೂ ಬೆಂಬಲ ನೀಡಬೇಕುʼ ಎಂದು ಕೋರಿದ್ದಾರೆ.

ಇದನ್ನೂ ಓದಿ : ಬೀದರ್‌ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು; ಆರೋಪಿ ಬಂಧನ

ಈ ಸಂದರ್ಭದಲ್ಲಿ ಪ್ರಮುಖತಾದ ಡಾ.ಅಬ್ದುಲ್‌ ಖದೀರ್‌, ಅಶೋಕ ವಡಗಾಂವೆ, ಡಾ.ಶ್ವೇತಾ, ತಾನಾಜಿ, ರಾಜಕುಮಾರ್ ಟಿಳೇಕರ್, ರಫಿಕ್ ಅಹ್ಮದ್‌, ಮೋನೀಸ್ ಕಿರ್ಮಾನಿ, ರಾಮಕೃಷ್ಣ ರೆಡ್ಡಿ, ರಾಜಶೇಖರ್ ಸೇಡಂಕರ್, ಶಂಭುಲಿಂಗ ವಾಲ್ದೊಡ್ಡಿ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...