ಬೀದರ್‌ | ಉದ್ಯೋಗಾರ್ಹತೆ ಹೆಚ್ಚಿಸಲು ಐಸಿಟಿ ಅಕಾಡೆಮಿ ತರಬೇತಿ ಸಹಕಾರಿ

Date:

ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಇಂತಹ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ.ವಿನಿತಾ ಪಾಟೀಲ್ ಹೇಳಿದರು.

- Advertisement -

ಇನ್ಫೋಸಿಸ್ ಫೌಂಡೇಶನ್ ಸಹಯೋಗದಲ್ಲಿ ಐಸಿಟಿ ಅಕಾಡೆಮಿ ವತಿಯಿಂದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಫಿನಿಶಿಂಗ್ ಸ್ಕೂಲ್ ಫಾರ್ ಎಂಪ್ಲಾಯಬಿಲಿಟಿ’ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ಸಂವಹನ ಕೌಶಲ್ಯ ಹಾಗೂ ಉದ್ಯೋಗಾರ್ಹತೆಗೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಅವಕಾಶ ದೊರೆಯಿತು. ವಿಶೇಷವಾಗಿ ಡೇಟಾ ಅನಾಲಿಟಿಕ್ಸ್ ಕ್ಷೇತ್ರದಲ್ಲಿ ಪ್ರಾಯೋಗಿಕ ಜ್ಞಾನ ಮತ್ತು ಅನುಭವ ಪಡೆಯಲು ತರಬೇತಿ ಸಹಕಾರಿಯಾಯಿತು. ತಂತ್ರಜ್ಞಾನ ಆಧಾರಿತ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಲು ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

WhatsApp Image 2026 10 10 at 7.46.08 PM 3
ಜಾಹೀರಾತು

ಸಮಾರಂಭದಲ್ಲಿ ಮುಖ್ಯ ಅತಿಥಿಗಳು, ಸಂಪನ್ಮೂಲ ವ್ಯಕ್ತಿ ಹಾಗೂ ಐಸಿಟಿ ಅಕಾಡೆಮಿಯ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಚನ್ನಬಸಮ್ಮ ಬಿಸಿಎ, ಬಿಕಾಂ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಪ್ರತಾಪುರ ಆಗಮಿಸಿದ್ದರು. ದತ್ತಾಂಶ ವಿಶ್ಲೇಷಣೆ (ಡೇಟಾ ಅನಾಲಿಟಿಕ್ಸ್) ವಿಷಯದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಸಂಪನ್ಮೂಲ ವ್ಯಕ್ತಿ ಹಿಮಾಂಶು ಮಿಂಡೋಲಾ, ಐಸಿಟಿ ಅಕಾಡೆಮಿಯ ಹಿರಿಯ ಸಹವರ್ತಿ ಪ್ರವೀಣ್ ಗಸ್ತಿ, ಸಂಬಂಧ ನಿರ್ವಾಹಕ ಪವನ್, ತರಬೇತಿ ಮತ್ತು ಉದ್ಯೋಗ ನಿಯೋಜನಾಧಿಕಾರಿ ವಿವೇಕಾನಂದ ಬಿರಾದಾರ್, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

WhatsApp Image 2026 10 10 at 6.59.09 PM 2
ಜಾಹೀರಾತು

ಇದನ್ನೂ ಓದಿ : ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮಳೆ ಆರ್ಭಟ; 15 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹಿಂಗಾರು ಮಳೆಯ ಆರಂಭದ ಹಿನ್ನೆಲೆಯಲ್ಲಿ...

ವಾಟ್ಸಾಪ್‌ನಲ್ಲಿ ಹೊಸ ಫೀಚರ್‌; ಆಫ್‌ಲೈನ್‌ನಲ್ಲಿದ್ದರೂ ನಿಗದಿತ ಸಮಯಕ್ಕೆ ಮೆಸೇಜ್‌ ಡೆಲಿವರಿ!

ವಾಟ್ಸಾಪ್ ತನ್ನ ಆಂಡ್ರಾಯ್ಡ್ ಬೀಟಾ ಅಪ್ಲಿಕೇಶನ್‌ನಲ್ಲಿ ಬಹುನಿರೀಕ್ಷಿತ ಮೆಸೇಜ್ ಶೆಡ್ಯೂಲಿಂಗ್ ಫೀಚರ್...

ಜಾಗತಿಕ ಆರ್ಥಿಕತೆಗೆ ಸ್ಥಿರ ಸಿದ್ಧಾಂತ ನೀಡಿದ ಇಬ್ಬರು ಅಮೆರಿಕನ್‌ ಅರ್ಥಶಾಸ್ತ್ರಜ್ಞರಿಗೆ ‌’ನೊಬೆಲ್’ ಗೌರವ

ಮೂಲ ಆರ್ಥಿಕ ನೀತಿಗಳ ಆಧಾರದ ಮೇಲೆ ಜಾಗತಿಕ ಮಾರುಕಟ್ಟೆಯ ಸ್ಥಿರತೆಯನ್ನು ಕಾಪಾಡುವಲ್ಲಿ...