ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

Date:

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ ವತಿಯಿಂದ ದಾದಾಸಾಹೇಬ್ ಕಾನ್ಶಿರಾಂ ಅವರ 20ನೇ ಪರಿನಿರ್ವಾಣ ದಿನದ ಅಂಗವಾಗಿ ಶುಕ್ರವಾರ‌ ಬೀದರ್ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶತಕೋಟಿ ನಮನ ಕಾರ್ಯಕ್ರಮ ನಡೆಯಿತು.

- Advertisement -

ಒಕ್ಕೂಟದ ಪ್ರಮುಖರು ʼಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲಾರರುʼ ಎಂಬ ಸಂದೇಶದೊಂದಿಗೆ ಬಹುಜನ ಸಮಾಜದ ಸ್ವಾಭಿಮಾನ, ಸಾಮಾಜಿಕ ನ್ಯಾಯ ಹಾಗೂ ರಾಜಕೀಯ ಸಬಲೀಕರಣಕ್ಕಾಗಿ ಹೋರಾಡಿದ ದಾದಾಸಾಹೇಬ್ ಕಾನ್ಶಿರಾಂ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಒಕ್ಕೂಟದ ಅಧ್ಯಕ್ಷ ವಿನೋದ ರತ್ನಾಕರ್‌ ಮಾತನಾಡಿ, “ಕಾನ್ಶಿರಾಂ ಅವರು ಬಹುಜನ ಸಮಾಜವನ್ನು ಸಂಘಟಿಸಿ, ರಾಜಕೀಯ ಅಧಿಕಾರದ ಮೂಲಕ ಸಾಮಾಜಿಕ ಬದಲಾವಣೆ ತರುವ ಉದ್ದೇಶದಿಂದ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಹೋರಾಟವು ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಸಂಘಟನಾ ಶಕ್ತಿ ಹಾಗೂ ತಮ್ಮ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ” ಎಂದು ಸ್ಮರಿಸಿದರು.

1006544153
ಜಾಹೀರಾತು

“1984ರ ಏಪ್ರಿಲ್ 14ರಂದು ಬಹುಜನ ಸಮಾಜ ಪಕ್ಷವನ್ನು (ಬಿಎಸ್‌ಪಿ) ಸ್ಥಾಪಿಸಿದ ಕಾನ್ಶಿರಾಂ ಅವರು ಬಹುಜನರ ರಾಜಕೀಯ ಪ್ರಾತಿನಿಧ್ಯಕ್ಕೆ ವಿಶೇಷ ಒತ್ತು ನೀಡಿದ್ದರು. ರಾಜಕೀಯ ಅಧಿಕಾರವನ್ನು ವೈಯಕ್ತಿಕ ಲಾಭಕ್ಕಾಗಿ ಬಳಸದೆ, ಸಮಾಜದ ಹಕ್ಕುಗಳು ಮತ್ತು ಏಳಿಗೆಗಾಗಿ ಬಳಸಬೇಕು ಎಂಬುದು ಅವರ ರಾಜಕೀಯ ಚಿಂತನೆಯ ಪ್ರಮುಖ ಆಶಯವಾಗಿತ್ತು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದರೊಂದಿಗೆ ಸಾಮಾಜಿಕ ನ್ಯಾಯದ ಹೋರಾಟವನ್ನು ಬಲಪಡಿಸಲು ಶ್ರಮಿಸಿದ್ದರು” ಎಂದು ಹೇಳಿದರು.

ಗೌರವಾಧ್ಯಕ್ಷ ಕಪಿಲ್ ಗೋಡಬೋಲೆ ಮಾತನಾಡಿ, “ಸಾಮಾಜಿಕ ನ್ಯಾಯ, ಮೀಸಲಾತಿ, ಸಮಾನತೆ ಹಾಗೂ ರಾಜಕೀಯ ಪ್ರಾತಿನಿಧ್ಯದ ವಿಚಾರಗಳನ್ನು ದೇಶದ ರಾಜಕೀಯ ಚರ್ಚೆಯ ಮುಂಚೂಣಿಗೆ ತರುವಲ್ಲಿ ಬಹುಜನ ಚಳವಳಿಯ ಕೊಡುಗೆ ಅಪಾರವಾಗಿದೆ. ಕಾನ್ಶಿರಾಂ ಅವರ ಜೀವನ ಮತ್ತು ಹೋರಾಟ ಇಂದಿನ ಯುವಜನರಿಗೆ ಪ್ರೇರಣೆಯಾಗಬೇಕು. ಸಮಾಜದಲ್ಲಿ ಸಮಾನತೆ, ಸ್ವಾಭಿಮಾನ ಹಾಗೂ ಸಾಮಾಜಿಕ ನ್ಯಾಯವನ್ನು ಸ್ಥಾಪಿಸಲು ಸಂಘಟಿತ ಪ್ರಯತ್ನ ಅಗತ್ಯವಿದೆ. ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಬಹುಜನ ಸಮಾಜದ ಹಕ್ಕುಗಳಿಗಾಗಿ ನಿರಂತರವಾಗಿ ಶ್ರಮಿಸಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ : ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ಕಾರ್ಯಕ್ರಮದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ರಾಜಕುಮಾರ್ ಶಿಂದೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾವಣ್, ಕಾರ್ಯಾಧ್ಯಕ್ಷ ರಾಹುಲ್ ಖಂದಾರೆ, ಸತ್ಯದೀಪ್ ಹಾವನೂರ್, ರಾಜಶೇಖರ್ ಶೇರಿಕರ್ ಹಾಗೂ ಪ್ರಮುಖರಾದ ಉತ್ತಮ ಸುತ್ತಾರ್, ತಿಪ್ಪಣ್ಣ ವಾಲಿ, ನಿಲೇಶ್, ಸುಧೀರ್, ಸಿದ್ಧಾರ್ಥ್ ಭೋಸಲೆ, ಸಂತೋಷ್ ಶಿಂದೆ, ಕೃಷ್ಣ ದಾಂಡೇಕರ್, ಪ್ರತೀಶ್ ನಾಟೇಕರ್ ಸೇರಿದಂತೆ ವಿವಿಧ ಬಹುಜನ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

ಅವಳ ಕಣ್ಣೋಟ | ಡೊರೊಥಿ- ಸ್ವೀಕಾರದಾಚೆಗೆ, ಒಳಗೊಳ್ಳುವಿಕೆಯ ಕಡೆಗೆ…

ಇದೊಂದು ಪರಿಪೂರ್ಣ ಸಿನಿಮಾ ಅಲ್ಲ. ಕೆಲವು ತಿರುವುಗಳು ಸರಳವಾಗಿವೆ. ಕೆಲವು ಪಾತ್ರಗಳು...

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...