ಬೀದರ್‌ | ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಿ

Date:

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಪದವಿಪೂರ್ವ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಐನಾಪುರೆ ಹೇಳಿದರು.

- Advertisement -

ಬೀದರ್‌ ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಬುಧವಾರ ನಡೆದ ಎಂ.ಎ. ಕನ್ನಡ, ಅರ್ಥಶಾಸ್ತ್ರ, ಎಂ.ಕಾಂ. ಹಾಗೂ ಬಿ.ಎಸ್ಸಿ ಗಣಿತ ವಿಭಾಗದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಹೆಣ್ಣುಮಕ್ಕಳು ತಾವು ಕಲಿತ ವಿದ್ಯೆಯನ್ನು ವ್ಯರ್ಥ ಮಾಡಿಕೊಳ್ಳಬಾರದು. ಅದನ್ನು ಇತರರಿಗೆ ಧಾರೆ ಎರೆಯಬೇಕು” ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಶ್ರೀ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಚಂದ್ರಪ್ಪ ಭತಮುರ್ಗೆ ಮಾತನಾಡಿ, “ಅಕ್ಕ ಮಹಾದೇವಿ ಸಮಾಜದ ಉದ್ಧಾರಕ್ಕೆ ತಮ್ಮ ಬದುಕು ಮೀಸಲಾಗಿಟ್ಟಿದ್ದರು. ವಿದ್ಯಾರ್ಥಿಯರು ಯಾವುದೇ ಕಾಯಕ ಮಾಡಿದರೂ, ಭಕ್ತಿ, ಶ್ರದ್ಧೆಯಿಂದ ಮಾಡಬೇಕು” ಎಂದು ಹೇಳಿದರು.

ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ನಾಗಪ್ಪ ಜಾನಕನೋರ ಮಾತನಾಡಿ, “ಸ್ನಾತಕೋತ್ತರ ಪದವಿ ಪಡೆದ ಹೆಣ್ಣುಮಕ್ಕಳಿಗೆ ಬಹಳಷ್ಟು ಅವಕಾಶಗಳು ಇವೆ. ಮಹಿಳೆಯರು ಅವುಗಳ ಸದುಪಯೋಗ ಪಡೆದು, ಸಮಾಜದಲ್ಲಿ ತಮ್ಮದೇ ಆದ ಛಾಪು ಮೂಡಿಸಬೇಕು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಆರ್.ವಿ.ಗಂಗಶೆಟ್ಟಿ ಮಾತನಾಡಿ, “ಸ್ನಾತಕೋತ್ತರ ಪದವಿ ಪೂರೈಸಿದ ಹೆಣ್ಣುಮಕ್ಕಳಿಗೆ ಸಂಶೋಧನೆಗೆ ಹೆಚ್ಚಿನ ಅವಕಾಶಗಳಿವೆ. ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯುವ ಜತೆಗೆ, ಜ್ಞಾನ ಹಾಗೂ ಕೌಶಲ ಹೆಚ್ಚಿಸಿಕೊಳ್ಳಬೇಕು. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ” ಎಂದು ಹೇಳಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಬರ-ನೆರೆ ಎಂದಾಕ್ಷಣ ಅಧಿಕಾರಸ್ಥರು-ಅಧಿಕಾರಿಗಳು ಎದ್ದು ಕೂರುವುದೇಕೆ?

ಉಪನ್ಯಾಸಕರಾದ ಡಾ.ಪಂಡಿತ, ಡಾ.ಸಂಗಪ್ಪ ತೌಡಿ, ಈಶ್ವರ ರೆಡ್ಡಿ, ಶ್ರೀಲತಾ, ಪ್ರೇಮಲತಾ, ಸಿಬ್ಬಂದಿ ಮನೋಹರ ಶೆಟ್ಟಿ, ಮಹೇಶ, ಲಕ್ಷ್ಮಿ, ಮಲ್ಲಿಕಾರ್ಜುನ ಮತ್ತಿತರರು ಇದ್ದರು. ಧನಲಕ್ಷ್ಮಿ ನಿರೂಪಿಸಿದರು. ಶ್ರುತಿ ಸ್ವಾಗತಿಸಿದರು. ದೀಪಿಕಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ಶಿವಮೊಗ್ಗ | 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆ: ಪರಿಶೀಲನೆಗೆ ಆಗ್ರಹ

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸಂಬಂಧಪಟ್ಟ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ...