ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

Date:

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

“ರಾಜ್ಯೋತ್ಸವ ಆಚರಣೆಯಲ್ಲಿ ಯಾವುದೇ ಲೋಪಗಳಾಗದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಗಳಿಗೆ ವಹಿಸಿರುವ ಜವಾಬ್ದಾರಿಗಳನ್ನು ಅಧಿಕಾರಿಗಳು ಆಸಕ್ತಿಯಿಂದ ನಿರ್ವಹಿಸಬೇಕು. ರಾಜ್ಯೋತ್ಸವದ ಹಿಂದಿನ ದಿನ ಸರ್ಕಾರಿ ಕಚೇರಿಗಳು ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ಸ್ವಚ್ಛತೆ ಕೈಗೊಂಡು, ವಿದ್ಯುತ್ ದೀಪಾಲಂಕಾರ ಮಾಡಬೇಕು” ಎಂದು ಸೂಚಿಸಿದರು.

ನ.1ರಂದು ಬೆಳಿಗ್ಗೆ 7.45ಕ್ಕೆ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು ಹಾಗೂ ಸಂಘ-ಸಂಸ್ಥೆಗಳ ಕಟ್ಟಡಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡಬೇಕು. ಬಳಿಕ ಬೆಳಿಗ್ಗೆ 7.50ಕ್ಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಬಸವೇಶ್ವರ ವೃತ್ತದಲ್ಲಿ ಸೇರಬೇಕು. ಬೆಳಿಗ್ಗೆ 8ಕ್ಕೆ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಮೆರವಣಿಗೆ ಆರಂಭವಾಗಲಿದ್ದು, ಭಗತ್ ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಜನರಲ್ ಕರಿಯಪ್ಪ ವೃತ್ತದ ಮೂಲಕ ನೆಹರು ಕ್ರೀಡಾಂಗಣ ತಲುಪಲಿದೆ. ಮೆರವಣಿಗೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

WhatsApp Image 2026 10 10 at 7.46.08 PM 18
ಜಾಹೀರಾತು

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯನ್ನು ಡಿಡಿಪಿಐ ಮತ್ತು ಡಿಡಿಪಿಯು ನಿರ್ವಹಿಸಬೇಕು. ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ನೆಹರು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆ, ಗೃಹರಕ್ಷಕ ದಳ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಪಥಸಂಚಲನ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ಅಂದು ಸಂಜೆ 5.30ರಿಂದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಲಹೆ ಹಾಗೂ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಸುರೇಖಾ, ಸಹಾಯಕ ಆಯುಕ್ತ ಅಭಿನವ್ ಜೈನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

WhatsApp Image 2026 10 10 at 6.59.31 PM 6
ಜಾಹೀರಾತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ಯಾರಾ ಏಷ್ಯನ್ ಗೇಮ್ಸ್ 2026: ಒಂದೇ ದಿನ ಎರಡು ಚಿನ್ನದ ಪದಕ ಗೆದ್ದು ಬೀಗಿದ ಶೀತಲ್ ದೇವಿ

ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಆರ್ಚರಿ...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ...

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ...

ಈ ದಿನ ಸಂಪಾದಕೀಯ | ನಾಗರಿಕ ಸಭ್ಯತೆ, ಹೊಣೆಗಾರಿಕೆ ಮತ್ತು ಸಾಮಾಜಿಕ ಮಾಧ್ಯಮಗಳು

ತಂತ್ರಜ್ಞಾನ ನಮ್ಮ ಕೈಗೆ ಅಪಾರ ಶಕ್ತಿಯನ್ನು ಕೊಟ್ಟಿದೆ. ಆ ಶಕ್ತಿಯನ್ನು ವಿವೇಚನೆಯಿಂದ...