ಬೀದರ್‌ | ಬೀದಿ ನಾಯಿಗಳ ಹಾವಳಿ: ಕ್ರಮಕ್ಕೆ ಆಗ್ರಹ

Date:

ಬೀದರ್ ನಗರದ ಮೈಲೂರಿನ ಸಿಎಂಸಿ ಕಾಲೊನಿಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ಮಹಾನಗರ ಪಾಲಿಕೆಯನ್ನು ಆಗ್ರಹಿಸಿದ್ದಾರೆ.

- Advertisement -

ಕಾಲೊನಿಯ ಕಾಲಾ ಹನುಮಾನ ಮಂದಿರ ಹಾಗೂ ಹಡಪದ ಅಪ್ಪಣ್ಣ ವೃತ್ತದ ನಡುವಿನ ಪ್ರದೇಶದಲ್ಲಿ ಎರಡು ವಾರದಿಂದ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಮಕ್ಕಳು, ಮಹಿಳೆಯರು ಹಾಗೂ ಹಿರಿಯರು ಮನೆಯಿಂದ ಹೊರ ಬರಲು ಭಯ ಪಡುವ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ನಾಯಿಗಳು ಹಿಂಡು ಹಿಂಡಾಗಿ ಓಡಾಡುತ್ತಿವೆ. ಕೈಯಲ್ಲಿ ತಿಂಡಿ, ತಿನಿಸು ಹಿಡಿದುಕೊಂಡು ಹೋಗುವವರನ್ನು ಹಿಂಬಾಲಿಸುತ್ತಿವೆ. ಹೀಗಾಗಿ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ನಾಯಿಗಳ ಹಾವಳಿಯಿಂದ ಅನೇಕ ಪಾಲಕರು ತಮ್ಮ ಮಕ್ಕಳನ್ನು ಆಟವಾಡಲು ಹೊರಗೆ ಬಿಡುತ್ತಿಲ್ಲ. ಬೆಳಿಗ್ಗೆ ಖುದ್ದು ಶಾಲೆಗೆ ಬಿಡುವುದು ಹಾಗೂ ಸಂಜೆ ಮರಳಿ ಮನೆಗೆ ಕರೆದುಕೊಂಡು ತರುವುದನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಹಾನಗರ ಪಾಲಿಕೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಬೀದಿ ನಾಯಿಗಳನ್ನು ಹಿಡಿದು, ಚಿಕ್ಕಪೇಟೆ ಸಮೀಪದ ಪ್ರಾಣಿಗಳ ಸಂರಕ್ಷಣೆ ಕೇಂದ್ರಕ್ಕೆ ಸಾಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ತೋಟಗಾರಿಕೆ ಇಲಾಖೆ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಮರ್ ಅಬ್ದುಲ್ಲಾ – ನಿಧಿ ರಾಜ್ದಾನ್ ವಿವಾಹದ ವಿರುದ್ಧ ಫತ್ವಾ ಹೊರಡಿಸಿದ ಮೌಲ್ವಿ!

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಹಿರಿಯ ಪತ್ರಕರ್ತೆ...

ಸಮಾಜ ಪ್ರಶ್ನಿಸಲು ಭಯಪಟ್ಟಾಗ, ಸರ್ವಾಧಿಕಾರ ಕವಿಯುತ್ತದೆ- ಸುಪ್ರೀಮ್ ಜಸ್ಟಿಸ್ ಭೂಂಯಾ

ಯಾವ ಸಮಾಜ ಪ್ರಶ್ನಿಸುವುದನ್ನು ನಿಲ್ಲಿಸುತ್ತದೆಯೋ ಅದು ಸುಲಭವಾಗಿ ಸರ್ವಾಧಿಕಾರಕ್ಕೆ ಬಲಿಯಾಗುತ್ತದೆ. ಅಜ್ಞಾನ,...

ಚೈನ್ ಸಾ ದಾಳಿ ಪ್ರಕರಣ: ಆರೋಪಿ ಹೇಮಂತ್‌ಗೆ ಪೊಲೀಸರ ಗುಂಡೇಟು; ಸಂತ್ರಸ್ತ ವಿದ್ಯಾರ್ಥಿನಿ ಸ್ಥಿತಿ ಚಿಂತಾಜನಕ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ‌ ರಾಪ್ತಾಡು ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ‌...