ಬೀದರ್‌ | ನೀಟ್ ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಬದುಕಿನೊಂದಿಗೆ ಎನ್‌ಟಿಎ ಚೆಲ್ಲಾಟ

Date:

ಪದೇ ಪದೇ ಮರುಕಳಿಸುತ್ತಿರುವ ನೀಟ್ (ನೀಟ್‌-ಯುಜಿ) ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ ಎಂದು ಎಐಡಿಎಸ್‌ಒ ಜಿಲ್ಲಾ ಸಂಚಾಲಕ ವೆಂಕಟೇಶ ದೇವದುರ್ಗ ಆರೋಪಿಸಿದ್ದಾರೆ.

- Advertisement -

ʼಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ, ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) “ಕೋಚಿಂಗ್ ಮಾಫಿಯಾ”ದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆʼ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ʼಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಕೇವಲ ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವುದನ್ನು ಎಐಡಿಎಸ್‌ಒ ಖಂಡಿಸುತ್ತದೆ. ನಮ್ಮ ವಿದ್ಯಾರ್ಥಿಗಳ ಭವಿಷ್ಯದ ಅಡಿಪಾಯವನ್ನೇ ಭ್ರಷ್ಟಾಚಾರ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯಕ್ಕೆ ಬಲಿ ನೀಡಲಾಗುತ್ತಿದೆʼ ಎಂದು ಹೇಳಿದ್ದಾರೆ.

ʼಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆಯನ್ನಾಗಿ ಮಾಡಿಕೊಂಡಿರುವವರಿಂದ ಇಂತಹ ಸಮಸ್ಯೆಗಳು ಪದೇ ಪದೇ ಹಲವು ಕೇಂದ್ರೀಕೃತ ಪರೀಕ್ಷೆಗಳಲ್ಲಿ ಮರುಕಳಿಸುತ್ತಿವೆ. ಈ ಅನ್ಯಾಯದ ವಿರುದ್ಧ ಹೋರಾಡಲು ಎಐಡಿಎಸ್‌ಒ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಶಿಕ್ಷಣ ಪ್ರೇಮಿ ಸಮುದಾಯಕ್ಕೆ ಕರೆ ನೀಡುತ್ತದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾರದರ್ಶಕವಾಗಿ ಮತ್ತು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ವಿಫಲವಾಗಿ ದೇಶದ ನಂಬಿಕೆಯನ್ನು ಕಳೆದುಕೊಂಡಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು (ಎನ್‌ಟಿಎ) ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ನೀಟ್‌ ಪರೀಕ್ಷೆ ರದ್ದು : ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದೆ ಇರುವ ವ್ಯಕ್ತಿಗಳು ಮತ್ತು “ಕೋಚಿಂಗ್ ಮಾಫಿಯಾ”ವನ್ನು ಪತ್ತೆಹಚ್ಚಲು ಉನ್ನತ ಮಟ್ಟದ ಸ್ವತಂತ್ರ ನ್ಯಾಯಾಂಗ ತನಿಖೆಯಾಗಬೇಕು ಹಾಗೂ ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆಯಾಗಬೇಕು. ಪ್ರವೇಶ ಪರೀಕ್ಷಾ ಪದ್ಧತಿಯನ್ನು ಸಮೂಲಾಗ್ರವಾಗಿ ಬದಲಿಸಿ, ಅದು ಸಾಮಾನ್ಯರಿಗೂ ಲಭ್ಯವಿರುವಂತೆ, ಪಾರದರ್ಶಕವಾಗಿ ಮತ್ತು ಖಾಸಗಿ ವಾಣಿಜ್ಯ ಹಿತಾಸಕ್ತಿಗಳಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...