ಬೀದರ್‌ | ನೂತನ ಜಿ.ಪಂ. ಸಿಇಒಗೆ ಸ್ವಾಗತ : ಸಿಇಒ ಗಿರೀಶ ಬದೋಲೆಗೆ ಆತ್ಮೀಯ ಬೀಳ್ಕೊಡುಗೆ

Date:

ಬೀದರ್ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಗಿತ್ತೆ ಮಾಧವ್ ವಿಠ್ಠಲರಾವ್ ಅವರಿಗೆ ಸ್ವಾಗತ ಹಾಗೂ ವರ್ಗಾವಣೆಗೊಂಡ ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಪ್ ಗಿರೀಶ್ ಬದೋಲೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಜರುಗಿತು.

- Advertisement -

ಇದೇ ವೇಳೆ ಸನ್ಮಾನ ಸ್ವೀಕರಿಸಿ ಭಾವುಕರಾಗಿ ಮಾತನಾಡಿದ ನಿರ್ಗಮಿತ ಸಿಇಒ ದಿಲೀಪ್ ಗಿರೀಶ್ ಬದೋಲೆ, “ಬೀದರ್ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದು ಅತ್ಯಂತ ತೃಪ್ತಿದಾಯಕ ಅನುಭವ ನೀಡಿದೆ. ಇ-ಸ್ವತ್ತು, ವಿಬಿ-ಜಿ ರಾಮ ಜಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ನೈರ್ಮಲ್ಯ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿ ನೀಡಿದ ಪೂರ್ಣ ಸಹಕಾರವೇ ನನ್ನ ಯಶಸ್ಸಿಗೆ ಕಾರಣ” ಎಂದು ಕೃತಜ್ಞತೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ವರ್ಗಾವಣೆ ಜೀವನದ ಒಂದು ಹೊಸ ಆಧ್ಯಾಯದ ಆರಂಭವಾಗಿರುತ್ತದೆ. ಆದರೆ, ಉತ್ತಮ ಅಧಿಕಾರಿಯ ಸೇವೆ ಮತ್ತು ನೆನಪು, ಅವರು ಕಾರ್ಯನಿರ್ವಹಿಸಿದ ಸ್ಥಳದಲ್ಲಿ ಸದಾ ಉಳಿಯುತ್ತವೆ. ನೂತನ ಸಿಇಓ ಅವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳು ಹಾಗೂ ವಿವಿಧ ಜನಪರ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲಿವೆ” ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಮಾತನಾಡಿ, “2020ರ ಐಎಎಸ್ ಬ್ಯಾಚ್‌ನ ಅಧಿಕಾರಿ ಕರ್ನಾಟಕ ಕೇಡರ್‌ನಲ್ಲಿ ಸಾರ್ವಜನಿಕ ಸೇವೆಗೆ ಸಿಕ್ಕಿರುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ” ಎಂದು ಹೇಳಿದರು.‌

WhatsApp Image 2026 09 01 at 6.41.43 PM
ನಿರ್ಗಮಿತ ಸಿಇಒ ಡಾ.ಗಿರೀಶ ಬದೋಲೆ ಮಾತನಾಡಿದರು.

“ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ನೀಡುವುದರ ಜೊತೆಗೆ ಕೆಳಹಂತದ ಸಿಬ್ಬಂದಿ ಹಾಗೂ ಅಧಿಕಾರಿಗಳ ಕುಂದು-ಕೊರತೆಗಳಿಗೂ ಸ್ಪಂದಿಸಲಾಗುವುದು. ಜನಪರ ಕೆಲಸ ಮಾಡುವುದರೊಂದಿಗೆ, ಆಡಳಿತದ ಭಾಗವಾಗಿರುವ ಅಧಿಕಾರಿ, ಸಿಬ್ಬಂದಿಯ ಕಷ್ಟ-ಸುಖ ಹಾಗೂ ಕ್ಷೇಮವನ್ನು ಕಾಪಾಡುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಎಲ್ಲರೂ ಟೀಂ ವರ್ಕ್ ಆಗಿ ಕೆಲಸ ಮಾಡಿ ಗ್ರಾಮೀಣ ಜನರಿಗೆ ಮೂಲಭೂತ ಸೌಕರ್ಯಗಳು ಕಲ್ಪಿಸುವ ರೀತಿಯಲ್ಲಿ ಕೆಲಸ ನಿರ್ವಹಿಸೋಣ. ಯಾವುದೇ ಒತ್ತಡಗಳಿದ್ದರೂ ನನ್ನ ಗಮನಕ್ಕೆ ಧಾರಾಳವಾಗಿ ತರಬಹುದು” ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಮಾತನಾಡಿ, “ನಿರ್ಗಮಿತ ಸಿಇಒ ದಿಲೀಪ್ ಗಿರೀಶ್ ಬದೋಲೆ ಅವರು ಕಳೆದ ಎರಡು ವರ್ಷಗಳಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವೇದಿಕೆ ಕಾರ್ಯಕ್ರಮಗಳನ್ನು ಆಯೋಜಿಸಿ, ಮಹಿಳಾ ಸಿಬ್ಬಂದಿಯಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಬೀದರ್ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸಲು ಶ್ರಮಿಸಿದ ಅವರ ಸೇವೆ ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ಸುಮ್ಮನೇಕೆ ದಿನಕಳೆವಿರಿ, ಸುಮ್ಮನೇಕೆ ಹೊತ್ತುಗಳೆವಿರಿ?

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದರ, ಸಿಎಒ ಶ್ರೀಕಾಂತ, ಮುಖ್ಯ ಪಶು ವೈದ್ಯಾಧಿಕಾರಿ ಗೌತಮ ಅರಳಿ, ಹುಮನಾಬಾದ್ ಇಒ ದೀಪಿಕಾ ನಾಯ್ಕರ್ ಸೇರಿದಂತೆ ಜಿಲ್ಲಾ ಹಾಗೂ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ಜಿ.ಪಂ. ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2026 08 29 at 3.48.01 PM 5
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...