ಬೀದರ್‌ | ಕನೇರಿ ಸ್ವಾಮೀಜಿ ಬಸವಕಲ್ಯಾಣ ಪ್ರವೇಶ ತಡೆಯಿರಿ : ಮಹೇಶ್ ಗೋರನಾಳಕರ್

Date:

ಜೂನ್ 28 ರಂದು ಬಸವಕಲ್ಯಾಣದಲ್ಲಿ ನಡೆಸಲು ಉದ್ದೇಶಿಸಿರುವ “ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ”ದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬುದ್ಧ, ಬಸವ, ಅಂಬೇಡ್ಕರ್ ಯುವ ಸಂಘಟನೆಯ ಅಧ್ಯಕ್ಷ ಮಹೇಶ್ ಗೋರನಾಳಕರ್ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, “ಬಸವ ಭಕ್ತರನ್ನು ʼಬಸವ ತಾಲಿಬಾನಿʼ ಎಂದು ಉಲ್ಲೇಖಿಸಿರುವುದು ಹಾಗೂ ಬಸವ ತತ್ವ ಮತ್ತು ಸಂಸ್ಕೃತಿಯ ಪ್ರಚಾರದಲ್ಲಿ ತೊಡಗಿರುವ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ. ಕನೇರಿ ಸ್ವಾಮೀಜಿಯವರ ಕೆಲವು ಹೇಳಿಕೆಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಹೀಗಾಗಿ ಕನೇರಿ ಶ್ರೀಗಳಿಗೆ ಬಸವಕಲ್ಯಾಣ ಪ್ರವೇಶಕ್ಕೆ ಅವಕಾಶ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಹಿಂದೂ ಸಮಾವೇಶವನ್ನು ಬಸವಾದಿ ಶಿವಶರಣರ ತತ್ವಗಳೊಂದಿಗೆ ಹೋಲಿಸುವುದು ಸರಿಯಲ್ಲ. ಹಿಂದೂ ಸಮಾವೇಶ ಅಥವಾ ಬಸವಾದಿ ಶಿವಶರಣರ ಸಮಾವೇಶ ಪ್ರತ್ಯೇಕವಾಗಿ ನಡೆಸಿದರೆ ಯಾರಿಗೂ ಅಭ್ಯಂತರ ಇರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಬೀದರ್‌ | ಜೂ.28ರಂದು ಕನೇರಿ ಶ್ರೀ ಪ್ರವೇಶ ವಿರೋಧಿಸಿ ಬೃಹತ್‌ ಪ್ರತಿಭಟನೆ : ಭಿತ್ತಿಪತ್ರ ಬಿಡುಗಡೆ

ಸರ್ಕಾರ ಮತ್ತು ಜಿಲ್ಲಾಡಳಿತವು ಬಸವ ಭಕ್ತರ ಭಾವನೆಗಳು ಹಾಗೂ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಸೂಕ್ತ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಅನುಮತಿ ನೀಡಿ, ಕನೇರಿ ಸ್ವಾಮೀಜಿಯವರು ಬಸವಕಲ್ಯಾಣ ಪ್ರವೇಶಿಸಿದರೆ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅನುಯಾಯಿಗಳ ನೇತ್ರತ್ವದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ, ಬರ ಕುರಿತು ಗಂಭೀರ ಚರ್ಚೆ, ಪರಿಷತ್ತಿನಲ್ಲಿ ಗದ್ದಲ

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರ ಇತ್ತೀಚೆಗೆ...

ಗಗನಕ್ಕೇರಿದ ದಿನಬಳಕೆ ವಸ್ತುಗಳ ದರ: ‘ಕ್ಯಾ ಹುವಾ ತೇರಾ ವಾದಾ’ – ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ದೇಶದಲ್ಲಿ ಪ್ರಮುಖ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿರುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...