ಬೀದರ್‌ | ಮಳೆ ಕೊರತೆ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತರು, ಬರಪೀಡಿತ ಜಿಲ್ಲೆ ಘೋಷಿಸಲು ಸಿಎಂಗೆ ಮನವಿ

Date:

ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಆರ್ಥಿಕ ಸಂಕಟಕ್ಕೆ ಸಿಲುಕಿದ ರೈತರು ಈ ಬಾರಿ ಮತ್ತೆ ಅನಾವೃಷ್ಟಿಯಿಂದಾಗಿ ಬಿತ್ತನೆ ಸಂಪೂರ್ಣ ಕುಂಠಿತಗೊಂಡಿದೆ. ಸಾಲಶೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ರೈತರು ಮಳೆಯಿಲ್ಲದೆ ಚಿಂತೆಗೀಡಾಗಿದ್ದಾರೆ. ಕೂಡಲೇ ಬೀದರ್ ಜಿಲ್ಲೆಯನ್ನು‌ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

- Advertisement -

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸೋಮವಾರ ಬೀದರ್‌ ಜಿಲ್ಲೆಗೆ ಭೇಟಿ ನೀಡಿದ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಳೆದ ಹಲವು ವರ್ಷಗಳಿಂದ ಬಾಧಿಸುತ್ತಿರುವ ಬರ-ನೆರೆಯಿಂದಾಗಿ ರೈತ ಸಮೂಹ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಆತ್ಮಹತ್ಯೆ ಹಾಗೂ ವಲಸೆ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ಸುಮಾರು ಶೇ 85ರಷ್ಟು ಮಳೆಯಾಶ್ರಿತ ಬೇಸಾಯ ಇರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕಳೆದ ಸಾಲಿನಲ್ಲಿ ತೊಗರಿ ಬೆಳೆ ವಿಮೆ ಪಾವತಿಸಿದ ರೈತರಿಗೆ ಕೆಲ ತಾಲೂಕುಗಳಲ್ಲಿ ಮಾತ್ರ ವಿಮೆ ಪರಿಹಾರ ದೊರೆತಿದ್ದು, ಉಳಿದ ತಾಲೂಕುಗಳ ರೈತರಿಗೆ ಪರಿಹಾರ ದೊರೆತಿಲ್ಲ. ಈ ಕುರಿತು ತನಿಖೆ ನಡೆಸಿ ಅರ್ಹ ರೈತರಿಗೆ ತಕ್ಷಣ ವಿಮೆ ಪರಿಹಾರ ವಿತರಿಸಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

“ಬೀದರ್ ಜಿಲ್ಲೆಯ ಏಕೈಕ ಹಳೆಯ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹಾಗೂ ಉಳಿದ ಎರಡು ಸಹಕಾರಿ ಸಕ್ಕರೆ ಕಾರ್ಖಾನೆಗಳು ಸಾಲದ ಸಂಕಷ್ಟದಲ್ಲಿ‌ ಇರುವುದರಿಂದ ಒನ್ ಟೈಮ್ ಸೆಟಲ್‌ಮೆಂಟ್ (ಒಟಿಎಸ್) ಮೂಲಕ ಸಾಲ ಮನ್ನಾ ಮಾಡಿ ಕಾರ್ಖಾನೆಗಳನ್ನು ಸದೃಢಗೊಳಿಸಬೇಕು. ಬರುವ ಹಂಗಾಮಿನಲ್ಲಿ ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ಪುನರಾರಂಭಿಸಬೇಕು” ಎಂದು ಮನವಿ ಮಾಡಿದರು.

“ಬಚಾವತ್ ಆಯೋಗದ ಶಿಫಾರಸಿನಂತೆ ಗೋದಾವರಿ ಜಲಾನಯನ ಪ್ರದೇಶದ 20 ಟಿಎಂಸಿ ನೀರಿನ ಬಳಕೆಗಾಗಿ ₹1,000 ಕೋಟಿ ಅನುದಾನ ಮೀಸಲಿಟ್ಟು ಜಿಲ್ಲೆಯ ಶಾಶ್ವತ ಬರ ಪರಿಹಾರ ಯೋಜನೆ ಜಾರಿಗೊಳಿಸಬೇಕು. ಹೊಲ, ತೋಟದ ಮನೆಗಳು ಹಾಗೂ ದನದ ಕೊಟ್ಟಿಗೆಗಳಿಗೆ ಸಿಂಗಲ್ ಫೇಸ್ ವಿದ್ಯುತ್ ಸಂಪರ್ಕ ನೀಡುವ ಸರ್ಕಾರದ ಘೋಷಣೆಯನ್ನು ತಕ್ಷಣ ಜಾರಿಗೊಳಿಸಬೇಕು. ಕಾರಂಜಾ ಜಲಾಶಯದಿಂದ ಭೂಮಿ ಕಳೆದುಕೊಂಡ ರೈತರಿಗೆ ತ್ವರಿತವಾಗಿ ಸಮರ್ಪಕ ಪರಿಹಾರ ನೀಡಬೇಕು” ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇದನ್ನೂ ಓದಿ : ಕಲಬುರಗಿ | ವರದಿಯ ನಂತರ ಬರಗಾಲ ಘೋಷಣೆ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ ಸಂಗಮಕರ, ಸಂಘಟನಾ ಕಾರ್ಯದರ್ಶಿ ಸಂತೋಷ ಗುದಗೆ, ಬೀದರ್ ತಾಲೂಕಾಧ್ಯಕ್ಷ ರಾಜಕುಮಾರ ಸ್ವಾಮಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಂತಮ್ಮ ಮೂಲಗೆ ಸೇರಿದಂತೆ ರೈತ ಸಂಘದ ಶಿವರಾಯ ಮುದಾಳೆ, ಖಾಸೀಂ ಅಲಿ, ನಾಗಶೆಟ್ಟಪ್ಪ ಲಂಜವಾಡೆ, ವಿಠಲರಾವ ಮೇತ್ರೆ, ಅನ್ನಪೂರ್ಣೇಶ್ವರಿ ಬಿರಾದಾರ, ವಿಠಲರೆಡ್ಡಿ ಅಣದೂರ, ಬಸವರಾಜ ಅಷ್ಟೂರ, ಧೂಳಪ್ಪ ಸೋರಳಿ, ವಿಶ್ವನಾಥ ಧರಣೆ, ರುದ್ರಯ್ಯ ಸ್ವಾಮಿ, ಸನ್ಮುಖಪ್ಪ ಅಣದೂರ, ಭವರಾವ ನೆಲವಾಡೆ, ಮುಖಿಮೊದ್ದೀನ್ ಪಟೇಲ್ ನಂದಗಾಂವ, ವಿಜಯಕುಮಾರ ಬಾವಗಿ, ವೀರಾರೆಡ್ಡಿ ಪಾಟೀಲ್‌, ಖಾನ್‌ಸಾಬ್ ನಾರಾಯಣಪುರ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

2036ರ ಒಲಿಂಪಿಕ್ಸ್ ಆತಿಥ್ಯ: ಕಣದಲ್ಲಿರುವ 7 ರಾಷ್ಟ್ರಗಳಲ್ಲಿ ಭಾರತವೂ ಭಾಗಿ

2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸಲು ಅಧಿಕೃತವಾಗಿ ಆಸಕ್ತಿ ತೋರಿರುವ ಏಳು...