ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

Date:

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ಬೀದರ್ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ಡೀನ್ ಡಾ.ಜಯಕುಮಾರ ಶಿಂಧೆ ಹೇಳಿದರು.

- Advertisement -

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗ ಹಾಗೂ ಸಂಶೋಧನಾ ಕೇಂದ್ರದಲ್ಲಿ ಮಂಗಳವಾರ ನಡೆದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ವಿದ್ಯಾರ್ಥಿಗಳು ಸಾಧಿಸುವ ಛಲ ಬೆಳೆಸಿಕೊಳ್ಳಬೇಕು. ನಿರಂತರ ಪರಿಶ್ರಮ ವಹಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಬೀದರ್ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಚಾರ್ಯ ಪ್ರೊ.ಮನೋಜಕುಮಾರ ಮಾತನಾಡಿ, “ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಬದುಕಿನ ಗುರಿ ತಲುಪಲು ಸಾಧ್ಯ” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಶಂಕರ ಗಣಗೊಂಡ ಮಾತನಾಡಿ, “ವಿದ್ಯಾರ್ಥಿಗಳು ಪಾಲಕರು ಹಾಗೂ ಕಾಲೇಜಿಗೆ ಕೀರ್ತಿ ತರುವಂಥ ಸಾಧನೆ ಮಾಡಬೇಕು. ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು” ಎಂದು ತಿಳಿಸಿದರು.

ಬೀದರ್ ವಿಶ್ವವಿದ್ಯಾಲಯದ ಕಲಾ ಡೀನ್ ಡಾ.ರುತಾ, ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುಚಿತಾನಂದ ಮಲ್ಕಾಪುರೆ, ಐಕ್ಯೂಎಸಿ ಸಂಚಾಲಕ ಡಾ. ಸಂಗಶೆಟ್ಟಿ ಮಾತನಾಡಿದರು.

ಅರ್ಥಶಾಸ್ತ್ರ ವಿಭಾಗದ ಅಂತಿಮ ವರ್ಷದ ಪರೀಕ್ಷೆಯಲ್ಲಿ ಬೀದರ್ ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿ ಚಿನ್ನದ ಪದಕ ಪಡೆದ ಪಲ್ಲವಿ ಹಾಗೂ ದ್ವಿತೀಯ ರ‍್ಯಾಂಕ್ ಪಡೆದು ಬೆಳ್ಳಿ ಪದಕ ಗಳಿಸಿದ ಪೂಜಾ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.

ಇದನ್ನೂ ಓದಿ : ಬೀದರ್‌ | ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಿಕೊಳ್ಳಲು ʼಅನ್ನ ಸೇವೆʼ ಮೊಬೈಲ್ ಆ್ಯಪ್

ಡಾ.ಸುನೀಲಕುಮಾರ ಮೂಲಗೆ, ಡಾ. ಬಸವರಾಜ ಕೋರಿಕೋಟಿ, ಡಾ. ಶ್ರೀಕಾಂತ ಮಲ್ಲಪ್ಪ, ಅರುಣಕುಮಾರ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತಿತರರು ಇದ್ದರು. ಅಂಬಿಕಾ, ಪ್ರತಿಭಾ ನಿರೂಪಿಸಿದರು. ಡಾ. ಜೈ ಭಾರತ ಮಂಗೇಶ್ಕರ್ ಸ್ವಾಗತಿಸಿದರು. ಅರುಣಕುಮಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹಾಫ್ ಹೆಲ್ಮೆಟ್’ ನಿಷೇಧ: ಇನ್ಮುಂದೆ ನಿಯಮ ಮೀರಿದರೆ ಭಾರೀ ದಂಡ; ಸಂಚಾರ ಪೊಲೀಸರ ಬಿಗಿ ಕ್ರಮ

ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ...

ದೆಹಲಿಯಲ್ಲಿ ಮತ್ತೆ ನೆಲಕ್ಕುರುಳಿದ ಕಟ್ಟಡ; ಅವಶೇಷಗಳಡಿ ಜೀವಗಳಿಗಾಗಿ ಶೋಧ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕಟ್ಟಡ ಕುಸಿತದ ಆತಂಕ ಎದುರಾಗಿದೆ. ಈಶಾನ್ಯ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...