ಬೀದರ್‌ | ಹಳ್ಳಕ್ಕೆ ವಿಷಯುಕ್ತ ರಾಸಾಯನಿಕ ತ್ಯಾಜ್ಯ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

Date:

ಹುಮನಾಬಾದ್‌ನ ಮಾಣಿಕನಗರದ ಹಳ್ಳಕ್ಕೆ ಹಾಗೂ ಗುರುಗಂಗಾ ಮತ್ತು ಮೀರಜಾ ನದಿಗೆ ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳಿಂದ ವಿಷಯುಕ್ತ ರಾಸಾಯನಿಕ ತ್ಯಾಜ್ಯ ಹರಿಸಲಾಗುತ್ತಿರುವ ಕುರಿತಂತೆ ಪರಿಶೀಲಿಸಿ ನಿಯಮಾನುಸಾರ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

- Advertisement -

ಈ ಸಂಬಂಧ ಜಿಲ್ಲಾಧಿಕಾರಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮಾಣಿಕನಗರ, ಹುಮನಾಬಾದ್, ಗಡವಂತಿ, ಮೊಳಕೇರಾ, ಧುಮ್ಮನಸೂರ್ ಹಾಗೂ ಹುಡುಗಿ ಸೇರಿದಂತೆ ಸುತ್ತಮುತ್ತಲಿನ ಅಂತರ್ಜಲ ಸಂಪೂರ್ಣ ಮಲಿನಗೊಂಡಿದೆ ಎಂಬ ಮಾಧ್ಯಮ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಾಣಿಕಪ್ರಭು ದೇವಸ್ಥಾನಕ್ಕೆ ರಾಜ್ಯ ಮತ್ತು ಹೊರರಾಜ್ಯದಿಂದ ಕೂಡ ಸಾವಿರಾರು ಭಕ್ತರು ಆಗಮಿಸಿ ನಂದಿಯಲ್ಲಿ ಸ್ನಾನ ಮಾಡುವುದರ ಜೊತೆಗೆ ತೀರ್ಥ ಎಂದು ನೀರನ್ನು ಸೇವಿಸುತ್ತಾರೆ. ಜಲ ಮೂಲಗಳಿಗೆ ಈ ರೀತಿ ವಿಷಯುಕ್ತ ತ್ಯಾಜ್ಯ ಸೇರ್ಪಡೆಯಾದರೆ ಕುಡಿಯುವ ನೀರೂ ವಿಷವಾಗುತ್ತದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ನೀರಿನ ಪರೀಕ್ಷೆ ಮಾಡಿಸಿ, ತ್ಯಾಜ್ಯ ಹರಿಸುತ್ತಿರುವ ಕೈಗಾರಿಕೆಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಜರುಗಿಸಿ, ಜಲ ಮೂಲ ಸಂರಕ್ಷಿಸಲು ಮತ್ತು 48 ಗಂಟೆಗಳ ಒಳಗಾಗಿ ಕೈಗೊಂಡ ಕ್ರಮದ ವರದಿ ಸಲ್ಲಿಸಲು ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಕಾರ್ಖಾನೆಗಳ ವಿಷಕಾರಿ ತ್ಯಾಜ್ಯ ಹಳ್ಳದ ಒಡಲಿಗೆ: ಜನ-ಜಾನುವಾರು ಜೀವಕ್ಕೆ ಆಪತ್ತು!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...