ಸೋಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಎಲ್ಲಾ 22 ಆರೋಪಿಗಳ ಖುಲಾಸೆ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

Date:

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ 2005ರ ಸೋಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ, ಎಲ್ಲಾ 22 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್ ಗುರುವಾರ(ಮೇ.7) ಎತ್ತಿಹಿಡಿದಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಹಾಗೂ ನ್ಯಾಯಮೂರ್ತಿ ಗೌತಮ್ ಅನ್ಖಾದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ನೀಡಿದ್ದು, ಆರೋಪಿಗಳ ಖುಲಾಸೆಯನ್ನು ಪ್ರಶ್ನಿಸಿ ಸೋಹ್ರಾಬುದ್ದೀನ್ ಸಹೋದರರಾದ ರುಬಾಬುದ್ದೀನ್ ಮತ್ತು ನಯಾಬುದ್ದೀನ್ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನವೆಂಬರ್ 2005ರಲ್ಲಿ ಗುಜರಾತ್ ಮತ್ತು ರಾಜಸ್ಥಾನ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಸೋಹ್ರಾಬುದ್ದೀನ್ ಶೇಖ್ ಮತ್ತು ಆತನ ಪತ್ನಿ ಕೌಸರ್ ಬಿ ಅವರನ್ನು ಗಾಂಧಿನಗರದ ಬಳಿ ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ ಎಂಬುದು ಆರೋಪವಾಗಿತ್ತು. ಇದರ ಏಕೈಕ ಸಾಕ್ಷಿಯಾಗಿದ್ದ ಅವರ ಸಹಚರ ತುಳಸಿರಾಮ್ ಪ್ರಜಾಪತಿಯನ್ನು ಸಹ 2006ರ ಡಿಸೆಂಬರ್‌ನಲ್ಲಿ ಇದೇ ರೀತಿ ಹತ್ಯೆ ಮಾಡಲಾಗಿತ್ತು ಎಂದು ಪ್ರಕರಣ ದಾಖಲಾಗಿತ್ತು.

ಇದನ್ನು ಓದಿದ್ದೀರಾ? ‘118 ಶಾಸಕರ ಸಹಿಯೊಂದಿಗೆ ಬನ್ನಿ’; 2ನೇ ದಿನವೂ ಟಿವಿಕೆ ಮುಖ್ಯಸ್ಥರನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯವು, ಡಿಸೆಂಬರ್ 21, 2018 ರಂದು ತನ್ನ ತೀರ್ಪು ಪ್ರಕಟಿಸಿತ್ತು. ಹತ್ಯೆಗಳ ಹಿಂದೆ ಪಿತೂರಿ ನಡೆದಿದೆ ಎಂಬುದನ್ನು ಯಾವುದೇ ಸಂಶಯಕ್ಕೆ ಎಡೆಮಾಡಿಕೊಡದಂತೆ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಲಯವು, ಎಲ್ಲಾ 22 ಆರೋಪಿಗಳನ್ನು ದೋಷಮುಕ್ತಗೊಳಿಸಿತ್ತು. ಖುಲಾಸೆಗೊಂಡವರಲ್ಲಿ ಗುಜರಾತ್ ಮತ್ತು ರಾಜಸ್ಥಾನದ 21 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಗುಜರಾತ್‌ನ ಫಾರ್ಮ್‌ಹೌಸ್ ಮಾಲೀಕರೊಬ್ಬರು ಸೇರಿದ್ದರು.

ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಸೋಹ್ರಾಬುದ್ದೀನ್ ಸಹೋದರರು 2019ರ ಏಪ್ರಿಲ್‌ನಲ್ಲಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನ್ಯಾಯಯುತವಾಗಿ ನಡೆದಿಲ್ಲ ಹಾಗೂ ಪ್ರಮುಖ ಸಾಕ್ಷಿಗಳ ಹೇಳಿಕೆಗಳನ್ನು ಸರಿಯಾಗಿ ಪರಿಗಣಿಸಿಲ್ಲ ಎಂದು ಅವರು ವಾದಿಸಿದ್ದರು. ಒಟ್ಟು 210 ಸಾಕ್ಷಿಗಳ ಪೈಕಿ 92 ಮಂದಿ ಪ್ರತಿಕೂಲ ಸಾಕ್ಷಿಗಳಾಗಿದ್ದನ್ನು ಮೇಲ್ಮನವಿಯಲ್ಲಿ ಪ್ರಸ್ತಾಪಿಸಲಾಗಿತ್ತು.

ಆದರೆ, ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, 2018ರ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ತಾನು ಒಪ್ಪಿಕೊಂಡಿರುವುದಾಗಿ ಹಾಗೂ ತಾನು ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಹೈಕೋರ್ಟ್‌ಗೆ ಸ್ಪಷ್ಟಪಡಿಸಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠವು, ಆರೋಪಿಗಳ ವಿರುದ್ಧದ ಆರೋಪಗಳನ್ನು ದೃಢೀಕರಿಸಲು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇರುವುದನ್ನು ಗಮನಿಸಿ ಕೆಳ ನ್ಯಾಯಾಲಯದ ಆದೇಶವನ್ನು ಇದೀಗ ಎತ್ತಿಹಿಡಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...