ದೇವಸ್ಥಾನದ ಬಾವಿಗೆ ಬಿದ್ದು ಬಾಲಕ ಸಾವು; ಎಎಸ್‌ಐ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

Date:

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹರಪನಹಳ್ಳಿಯಲ್ಲಿ 9 ವರ್ಷದ ಬಾಲಕನೊಬ್ಬ ತೆರೆದ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ವರದಿಯಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಂರಕ್ಷಿತ ಕಲ್ಲೇಶ್ವರ ದೇವಸ್ಥಾನದಲ್ಲಿ ಈ ದುರಂತ ಸಂಭವಿಸಿದೆ.

- Advertisement -

ಮೃತ ಬಾಲಕನನ್ನು ಹರಪನಹಳ್ಳಿ ತಾಲೂಕಿನ ಬ್ಯಾಡರ ಓಣಿ ನಿವಾಸಿ ವಿಷ್ಣು ವಿನೋದ್ (9) ಎಂದು ಗುರುತಿಸಲಾಗಿದ್ದು, ಬಾಲಕ ರಜೆಯ ದಿನ ತನ್ನ ಪೋಷಕರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ್ದ ಎನ್ನಲಾಗಿದೆ. ಬಾಲಕ ದೇವಾಲಯದ ಆವರಣದಲ್ಲಿ ಚೆಂಡಿನಲ್ಲಿ ಆಡುತ್ತಿದ್ದ ವೇಳೆ ಚೆಂಡು ಕೈತಪ್ಪಿ ಬಾವಿಗೆ ಬಿದ್ದಿದೆ. ಚೆಂಡು ಮೇಲೆತ್ತಲು ಪ್ರಯತ್ನಿಸಿದ ಬಾಲಕ ವಿಷ್ಣು ವಿನೋದ್ ಆಯ ತಪ್ಪಿ ಬಾವಿಗೆ ಬಿದ್ದಿದ್ದಾನೆ. ಕೂಡಲೇ ಸುತ್ತಲಿದ್ದ ಜನರು ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರೂ ಜೀವ ಉಳಿಸಲಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ತೆರೆದ ಬಾವಿಗೆ ಬ್ಯಾರಿಕೇಡ್ ಹಾಕದ ಕಾರಣ ಇಂತಹ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಗ್ರಾಮಸ್ಥರು ಹಲವು ಬಾರಿ ಬಾವಿಗೆ ಬ್ಯಾರಿಕೇಡ್ ಅಳವಡಿಸಲು ಮನವಿ ಮಾಡಿದ್ದರೂ ಇಲಾಖೆ ಈ ಕುರಿತು ಸ್ಪಂದಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ.

ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, “ಘಟನೆ ಸಂಬಂಧಿತ ಕಾರಣವನ್ನು ತನಿಖೆ ಮಾಡಲಾಗುವುದು. ಸಂರಕ್ಷಿತ ಸ್ಮಾರಕದಲ್ಲಿ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಯಾವುದೇ ನಿರ್ಲಕ್ಷ್ಯ ಕಂಡುಬಂದಿದೆಯೇ ಎಂದು ಪರಿಶೀಲಿಸಲಾಗುತ್ತದೆ” ಎಂದು ಪೊಲೀಸ್ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...