BREAKING NEWS | SSLC ಫಲಿತಾಂಶ ಪ್ರಕಟ: ಶೇ. 94.01 ವಿದ್ಯಾರ್ಥಿಗಳು ಉತ್ತೀರ್ಣ

Date:

2025-26ನೇ ಸಾಲಿನ ಕರ್ನಾಟಕ SSLC ಫಲಿತಾಂಶ ಪ್ರಕಟವಾಗಿದ್ದು, ಶೇ. 94.01 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

- Advertisement -

7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ತೃತೀಯ ಸ್ಥಾನ ಪಡೆದುಕೊಂಡಿವೆ. ಎಂದಿನ ಬಾರಿಯಂತೆ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ.

ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಇಲಾಖೆ ವೆಬ್ ಸೈಟ್ ನಲ್ಲೂ (web: https://karresults.nic.in/) ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಿದೆ. SMS, ವಾಟ್ಸಪ್‌ ಮೂಲಕವೂ ಫಲಿತಾಂಶ ಕಳುಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ವರ್ಷ ಪರೀಕ್ಷೆಗಾಗಿ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು, ಅವರಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ರಾಜ್ಯಾದ್ಯಂತ ಪರೀಕ್ಷೆಗೆ ಹಾಜರಾಗಿದ್ದರು.

ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ರಾಜ್ಯದ ಸುಮಾರು 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಗೆ ಹಾಜರಾಗಿದ್ದ 7,70,209 ವಿದ್ಯಾರ್ಥಿಗಳ ಪೈಕಿ, 7,24,794 ಮಂದಿ ಉತ್ತೀರ್ಣರಾಗಿದ್ದಾರೆ. ಶೇ94.1ರಷ್ಟು ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಬಾರಿ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ಮೇ 18 ರಿಂದ ಮೇ 25 ರ ವರೆಗೆ ಎರಡನೇ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.

ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

ಉಳಿದಂತೆ ಮಂಡ್ಯ 5ನೇ ಸ್ಥಾನ (ಶೇ 97.45), ಶಿರಸಿ 6ನೇ ಸ್ಥಾನ (ಶೇ 97.21), ಹಾವೇರಿ 7ನೇ ಸ್ಥಾನ (ಶೇ 96.87), ಕೊಡಗು 8ನೇ ಸ್ಥಾನ (ಶೇ 96.70), ಶಿವಮೊಗ್ಗ 9ನೇ ಸ್ಥಾನ (ಶೇ 96.56), ವಿಜಯನಗರ 10ನೇ ಸ್ಥಾನ (ಶೇ 96.39), ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ (ಶೇ 95.84), ಧಾರವಾಡ 12ನೇ ಸ್ಥಾನ (ಶೇ 95.59), ಕೋಲಾರ 13ನೇ ಸ್ಥಾನ (ಶೇ 95.50) ಗಳಿಸಿವೆ.

  • ಬಾಗಲಕೋಟೆ 14ನೇ ಸ್ಥಾನ – 95.42%
  • ಬೆಂ.ಉತ್ತರ 15ನೇ ಸ್ಥಾನ – 95.34%
  • ಗದಗ 16ನೇ ಸ್ಥಾನ – 95.24%
  • ಚಿಕ್ಕಮಗಳೂರು 17ನೇ ಸ್ಥಾನ – 94.99%
  • ಬೆಳಗಾವಿ 18ನೇ ಸ್ಥಾನ – 94.75%
  • ದಾವಣಗೆರೆ 19ನೇ ಸ್ಥಾನ – 94.64%
  • ಮೈಸೂರು 20ನೇ ಸ್ಥಾನ – 94.50%
  • ರಾಯಚೂರು 21ನೇ ಸ್ಥಾನ – 94.41%
  • ವಿಜಯಪುರ 22ನೇ ಸ್ಥಾನ – 94.17%
  • ಚಿಕ್ಕೋಡಿ 23ನೇ ಸ್ಥಾನ – 94.09%
  • ಬಳ್ಳಾರಿ 24ನೇ ಸ್ಥಾನ – 93.36%
  • ಕೊಪ್ಪಳ 25ನೇ ಸ್ಥಾನ – ಶೇ.93.10
  • ರಾಮನಗರ 26ನೇ ಸ್ಥಾನ – 92.83%
  • ಚಿತ್ರದುರ್ಗ 27ನೇ ಸ್ಥಾನ – 92.25%
  • ಬೀದರ್ 28ನೇ ಸ್ಥಾನ – 92.18%
  • ತುಮಕೂರು 29ನೇ ಸ್ಥಾನ – 92.04%
  • ಚಾಮರಾಜನಗರ 30ನೇ ಸ್ಥಾನ – 91.89%
  • ಯಾದಗಿರಿ 31ನೇ ಸ್ಥಾನ – 91.89%

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.

ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳು ತಮ್ಮ ರೋಲ್‌ ನಂಬರ್‌ ಮತ್ತು ಜನ್ಮ ದಿನಾಂಕವನ್ನು ತಯಾರಾಗಿಟ್ಟುಕೊಳ್ಳಿ
  • ನಂತರ ಇಲ್ಲಿ ಕ್ಲಿಕ್ ಮಾಡಿ
  • ನಂತರ ಓಪನ್ ಆಗಲಿದೆ.
  • ಅಲ್ಲಿ ರಿಜಿಸ್ಟರ್‌ಡ್‌ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  • ಕರ್ನಾಟಕ SSLC ಫಲಿತಾಂಶ 2026 ಪರದೆಯ ಮೇಲೆ ಕಾಣಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...