ಪಶ್ಚಿಮ ಬಂಗಾಳ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ; ಸುವೇಂದುನಾ – ಬ್ರಹ್ಮಚಾರಿಯಾ?

Date:

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ 2026ರಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದು, ಇದೀಗ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಅಧಿಕೃತವಾಗಿ ಯಾವುದೇ ಘೋಷಣೆಯಾಗದಿದ್ದರೂ, ಬಿಜೆಪಿಯ ಆಂತರಿಕ ವಲಯದಲ್ಲಿ ಸುವೇಂದು ಅಧಿಕಾರಿಯಲ್ಲದೆ ಪ್ರಮುಖ ಹೆಸರುಗಳು ಮುಂಚೂಣಿಯಲ್ಲಿವೆ. ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾದ ಮೇ 9ರಂದು ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ, “ಬಂಗಾಳದ ಮಣ್ಣಿನ ಮಗ, ಇಲ್ಲಿಯೇ ಶಿಕ್ಷಣ ಪಡೆದ, ನಿರರ್ಗಳವಾಗಿ ಬೆಂಗಾಳಿ ಮಾತನಾಡುವ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನೇ ಮುಖ್ಯಮಂತ್ರಿಯಾಗಲಿದ್ದಾರೆ”. ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸುವೇಂದು ಅಧಿಕಾರಿಯ ಜೊತೆಗೆ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಉತ್ಪಲ್ ಬ್ರಹ್ಮಚಾರಿ (ಉತ್ಪಲ್ ಮಹಾರಾಜ್ ಕೂಡ ಕರೆಯುತ್ತಾರೆ). ಇವರನ್ನು ಪಶ್ಚಿಮ ಬಂಗಾಳದ ಯೋಗಿ ಆದಿತ್ಯನಾಥ್ ಅಂತಲೂ ಕರೆಯುತ್ತಾರೆ. ಧಾರ್ಮಿಕ ಮುಖಂಡರಾಗಿ ಗುರುತಿಸಿಕೊಂಡಿರುವ ಇವರು ಕಲಿಯಾಗಂಜ್ ವಿಧಾನಸಭಾ ಕ್ಷೇತ್ರದಿಂದ ಬರೊಬ್ಬರಿ 76,000ಕ್ಕೂ ಹೆಚ್ಚು ಮತಗಳ ಬೃಹತ್ ಅಂತರದಿಂದ ಜಯಗಳಿಸಿದ್ದಾರೆ. ಹಿಂದೂ ಮತಗಳ ಧ್ರುವೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ ಇವರು, ಆರ್‌ಎಸ್‌ಎಸ್ ವಲಯದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ. ಜೊತಗೆ ಸುತ್ತಮುತ್ತಲಿನ ಹಲವು ಕ್ಷೇತ್ರಗಳನ್ನು ಇವರು ಗೆಲ್ಲಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Utpal Brahmachar
Utpal Brahmachar

ಸುವೇಂದು ಅಧಿಕಾರಿ ಹೆಸರು ಕೂಡ ಮುಖ್ಯವಾಗಿದೆ. ನಂದಿಗ್ರಾಮ ಮತ್ತು ಭವಾನಿಪುರ ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಅವರು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಎದುರಿಸಿ ಜಯ ಸಾಧಿಸಿದ್ದಾರೆ. ನಂದಿಗ್ರಾಮದಲ್ಲಿ 10,000 ಕ್ಕೂ ಹೆಚ್ಚು ಮತ್ತು ಭವಾನಿಪುರದಲ್ಲಿ 15,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಅವರು, ಮಮತಾ ಬ್ಯಾನರ್ಜಿ ಅವರನ್ನು ಎರಡು ಬಾರಿ ಸೋಲಿಸಿದ ಹಿರಿಮೆ ಹೊಂದಿದ್ದಾರೆ. ಈ ಕಾರಣದಿಂದ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುವ ಸಾಧ್ಯತೆ ದಟ್ಟವಾಗಿದೆ.

ಇದನ್ನು ಓದಿದ್ದೀರಾ? ಗಲ್ಲಾಪೆಟ್ಟಿಗೆಯಿಂದ ಮತಪೆಟ್ಟಿಗೆ; ಜೋಸೆಫ್ ವಿಜಯ್ ಎಂಬ ಹೀರೋವಿನ ಸೂಪರ್ ಡ್ಯೂಪರ್ ಹಿಟ್ ರಾಜಕೀಯ ಪ್ರವೇಶ!

ಇವರಲ್ಲದೆ ಇತರ ಮೂವರ ಹೆಸರುಗಳು ಕೂಡ ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ.

ಸಮೀಕ್ ಭಟ್ಟಾಚಾರ್ಯ: ರಾಜ್ಯ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಅವರ ಹೆಸರು ಕೂಡ ಬಲವಾಗಿ ಕೇಳಿಬರುತ್ತಿದೆ. ಬೆಂಗಾಳಿ ಶಿಕ್ಷಿತ ಮಧ್ಯಮ ವರ್ಗದವರನ್ನು ಪ್ರತಿನಿಧಿಸುವ ಇವರು, ಪಕ್ಷದ ಹಳೆಯ ಮತ್ತು ಹೊಸ ಕಾರ್ಯಕರ್ತರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್‌ಎಸ್‌ಎಸ್ ಹಿನ್ನೆಲೆಯ ಇವರು, ಬಂಗಾಳದ ಸಂಸ್ಕೃತಿಯ ಬಗ್ಗೆ ಆಳವಾದ ಜ್ಞಾನ ಹೊಂದಿದ್ದು, ಸಂಘಟನಾತ್ಮಕವಾಗಿ ಪಕ್ಷವನ್ನು ಭದ್ರಪಡಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

samik bhattacharya
samik bhattacharya

ಇದನ್ನು ಓದಿದ್ದೀರಾ? ಗಲ್ಲಾಪೆಟ್ಟಿಗೆಯಿಂದ ಮತಪೆಟ್ಟಿಗೆ; ಜೋಸೆಫ್ ವಿಜಯ್ ಎಂಬ ಹೀರೋವಿನ ಸೂಪರ್ ಡ್ಯೂಪರ್ ಹಿಟ್ ರಾಜಕೀಯ ಪ್ರವೇಶ!

ಸ್ವಪನ್ ದಾಸ್‌ಗುಪ್ತ: ಪ್ರಸಿದ್ಧ ಪತ್ರಕರ್ತ ಮತ್ತು ವಿದ್ವಾಂಸರಾದ ಸ್ವಪನ್ ದಾಸ್‌ಗುಪ್ತ ಅವರು ರಾಶ್‌ಬೆಹರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಇತಿಹಾಸದಲ್ಲಿ ಪಿಎಚ್‌ಡಿ ಪಡೆದಿರುವ ಇವರು ಬೆಂಗಾಲಿ ಬುದ್ಧಿಜೀವಿಗಳ ವಲಯದಲ್ಲಿ ಉತ್ತಮ ಹೆಸರು ಹೊಂದಿದ್ದಾರೆ.

Swapan Dasgupta.
Swapan Dasgupta.

ಇವರೊಂದಿಗೆ ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿಯ ಸದಸ್ಯರಾದ ಸಂಜೀವ್ ಸನ್ಯಾಲ್ ಅವರ ಹೆಸರೂ ಕೇಳಿಬರುತ್ತಿದೆ.

Sanjay sanyal
Sanjay sanyal

ಬಿಜೆಪಿ ರಾಷ್ಟ್ರೀಯ ನಾಯಕರು ಯಾವ ಕ್ಷಣದಲ್ಲಾದರೂ ಅಚ್ಚರಿಯ ಹೆಸರನ್ನು ಘೋಷಿಸುವ ಸಾಧ್ಯತೆಯೂ ಇದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೋಲ್ಕತ್ತಾಕ್ಕೆ ಆಗಮಿಸಿ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. 2017 ರಿಂದಲೇ ಆರ್‌ಎಸ್‌ಎಸ್ ಬಂಗಾಳದಲ್ಲಿ ನಡೆಸಿದ ಭೂಗತ ಕೆಲಸಗಳು ಈ ಭರ್ಜರಿ ಗೆಲುವಿಗೆ ಬುನಾದಿ ಹಾಕಿಕೊಟ್ಟಿವೆ ಎಂದು ವಿಶ್ಲೇಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...