ದೇಶದ ವಿವಿಧಡೆಯ ಉಪಚುನಾವಣಾ ಟ್ರೆಂಡ್: 4ರಲ್ಲಿ ಬಿಜೆಪಿ, 2 ಕಾಂಗ್ರೆಸ್, 1 ಎನ್‌ಸಿಪಿ ಮುನ್ನಡೆ

Date:

ಐದು ರಾಜ್ಯಗಳ (ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿ) ವಿಧಾನಸಭಾ ಚುನಾವಣೆಗಳ ಮತ ಎಣಿಕೆಯ ಜೊತೆಯಲ್ಲೇ, ದೇಶದ ಇತರ ಐದು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಗಳ ಮತ ಎಣಿಕೆಯನ್ನು ನಡೆಸುತ್ತಿದೆ. ಆಯೋಗದ ಅಧಿಕೃತ ವೆಬ್‌ಸೈಟ್‌ನ ಟ್ರೆಂಡ್‌ಗಳ ಪ್ರಕಾರ, ಒಟ್ಟು ಏಳು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 2 ಮತ್ತು ಎನ್‌ಸಿಪಿ ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

- Advertisement -

ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ಅವರು ಮುನ್ನಡೆ ಸಾಧಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್‌ ಶಾಮನೂರು ಅವರು ಮುನ್ನಡೆಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ತಮಿಳುನಾಡು 234 ಕ್ಷೇತ್ರಗಳ ಆರಂಭಿಕ ಟ್ರೆಂಡ್: 93 ಕ್ಷೇತ್ರಗಳಲ್ಲಿ ‘ಟಿವಿಕೆ’ ಮುನ್ನಡೆ, ಡಿಎಂಕೆಗೆ 3ನೇ ಸ್ಥಾನ

ಮಹಾರಾಷ್ಟ್ರದಲ್ಲಿ ನಡೆದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಸಿಪಿ ಮತ್ತು ಬಿಜೆಪಿ ತಲಾ ಒಂದೊಂದು ಕಡೆ ಮುನ್ನಡೆ ಸಾಧಿಸಿವೆ. ತೀವ್ರ ಕುತೂಹಲ ಕೆರಳಿಸಿರುವ ಬಾರಾಮತಿ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಸಿಪಿ ಅಭ್ಯರ್ಥಿ ಸುನೇತ್ರಾ ಅಜಿತ್ ಪವಾರ್ ಅವರು ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನುಳಿದಂತೆ ಮಹಾರಾಷ್ಟ್ರದ ರಾಹುರಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಅಕ್ಷಯ್ ಶಿವಾಜಿರಾವ್ ಕರ್ಡಿಲೆ ಅವರು ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮುಂದಿದ್ದಾರೆ.

ಗುಜರಾತ್, ನಾಗಾಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿ ನಡೆದ ತಲಾ ಒಂದೊಂದು ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಮೆರೆದಿದೆ. ಗುಜರಾತ್‌ನ ಉಮ್ರೇತ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷದ್‌ಭಾಯ್ ಗೋವಿಂದ್‌ಭಾಯ್ ಪರ್ಮಾರ್ ಮುನ್ನಡೆ ಸಾಧಿಸಿದ್ದಾರೆ. ಅದೇ ರೀತಿ, ನಾಗಾಲ್ಯಾಂಡ್‌ನ ಕೋರಿಡಾಂಗ್ ಕ್ಷೇತ್ರದಲ್ಲಿ ಡಾವೊಚಿಯರ್ ಐ ಇಮ್ಚೆನ್ ಮತ್ತು ತ್ರಿಪುರಾದ ಧರ್ಮನಗರ ಕ್ಷೇತ್ರದಲ್ಲಿ ಜಹರ್ ಚಕ್ರಬರ್ತಿ ಅವರು ಮುನ್ನಡೆಯಲ್ಲಿದ್ದು, ಮೂರೂ ರಾಜ್ಯಗಳ ಕ್ಷೇತ್ರಗಳಲ್ಲಿ ಕಮಲ ಪಾಳಯ ಮುಂಚೂಣಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...