ಚಾಮರಾಜನಗರ | ಮೂರು ದಿನಗಳ ಪೊಲೀಸ್‌ ವಾರ್ಷಿಕ ಕ್ರಿಡಾಕೂಟಕ್ಕೆ ಅದ್ಧೂರಿ ತೆರೆ

Date:

ಶಿಸ್ತು, ಸಹನೆ, ಸಾಹಸ ಮತ್ತು ಸೌಹಾರ್ದತೆಗೆ ಸಾಕ್ಷಿಯಾದ ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2026 ಮೂರು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆದು ಅದ್ಧೂರಿ ಸಮಾರೋಪ ಸಮಾರಂಭದೊಂದಿಗೆ ಕೊನೆಗೊಂಡಿತು. ಜಿಲ್ಲೆಯ ಪೊಲೀಸ್ ಕುಟುಂಬ ಒಂದೇ ವೇದಿಕೆಯಲ್ಲಿ ಸೇರಿ ಆಚರಿಸಿದ ಈ ಕ್ರೀಡಾ ಹಬ್ಬ, ಕೇವಲ ಸ್ಪರ್ಧೆಯಾಗದೆ ಸಿಬ್ಬಂದಿಯ ದೈಹಿಕ ಸಾಮರ್ಥ್ಯ, ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಮತ್ತು ಒಗ್ಗಟ್ಟನ್ನು ಹೆಚ್ಚಿಸುವ ಮಹತ್ವದ ವೇದಿಕೆಯಾಯಿತು.

- Advertisement -

ನಗರದ ಡಿ.ಎ.ಆರ್. ಕೇಂದ್ರ ಸ್ಥಾನದಲ್ಲಿರುವ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನ.23 ರಂದು ಆರಂಭಗೊಂಡಿದ್ದ 28ನೇ ವರ್ಷದ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸಿದ್ದ ಅಧಿಕಾರಿಗಳು, ಸಿಬ್ಬಂದಿ, ಕ್ರೀಡಾಪಟುಗಳು ಭಾಗವಹಿಸಿದ್ದರು. ಮೂರು ದಿನಗಳ ಕಾಲ ಮೈದಾನದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕರಿವರದರಾಜ ತಂಡ, ಮಹದೇಶ್ವರ ತಂಡ, ಬಿಳಿಗಿರಿ ತಂಡ, ಕನಕಗಿರಿ ತಂಡ, ಹಿಮವದ್ ತಂಡ, ಚಾಮರಾಜ ತಂಡ, ಆಪ್ತ ಗೆಳತಿ ತಂಡ ಸೇರಿದಂತೆ ಜಿಲ್ಲೆಯ ವಿವಿಧ ತಂಡಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಶಿಸ್ತುಬದ್ಧವಾಗಿ, ಪ್ರಾಮಾಣಿಕವಾಗಿ ಸ್ಪರ್ಧಿಸಿ ಕ್ರೀಡಾ ಮನೋಭಾವ ಮೆರೆದವು. ಗೆಲುವು-ಸೋಲು ಸಹಜವಾದರೂ, ಪ್ರತಿಯೊಬ್ಬ ಕ್ರೀಡಾಪಟುವೂ ತೋರಿದ ಹೋರಾಟದ ಮನೋಭಾವ, ತಂಡದ ಒಗ್ಗಟ್ಟು ಮತ್ತು ತಾಳ್ಮೆಯೇ ಈ ಕ್ರೀಡಾಕೂಟದ ನಿಜವಾದ ಗೆಲುವಾಯಿತು.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳು ಮತ್ತು ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳ ಶ್ರಮವನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಪ್ರೋತ್ಸಾಹಿಸಲಾಯಿತು.

ಬಹುಮಾನ ವಿತರಿಸಿ ಮಾತನಾಡಿದ ದಕ್ಷಿಣ ವಲಯದ ಡಿಐಜಿಪಿ ಪುಟ್ಟಮಾದಯ್ಯ ಅವರು, ಪೊಲೀಸ್ ಇಲಾಖೆಯಲ್ಲಿ ದೈಹಿಕ ಸಾಮರ್ಥ್ಯ, ಮಾನಸಿಕ ಸ್ಥೈರ್ಯ ಮತ್ತು ಶಿಸ್ತು ಅತ್ಯಂತ ಮುಖ್ಯ. ಕಾನೂನು ಸುವ್ಯವಸ್ಥೆ ಕಾಪಾಡುವ, ಜನರ ರಕ್ಷಣೆ ಮಾಡುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ. ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಸಿಬ್ಬಂದಿ ದೈಹಿಕವಾಗಿ ಸದೃಢರಾಗಿರಬೇಕು, ಮಾನಸಿಕವಾಗಿ ಸ್ಥಿರವಾಗಿರಬೇಕು. ಅದಕ್ಕಾಗಿ ಪ್ರತಿದಿನ ವ್ಯಾಯಾಮ, ಶಿಸ್ತುಬದ್ಧ ಜೀವನ, ಕ್ರೀಡೆಯಲ್ಲಿ ತೊಡಗಿಕೊಳ್ಳುವುದು ಅತ್ಯಂತ ಅಗತ್ಯ. ಕರ್ತವ್ಯದ ಒತ್ತಡವನ್ನು ಕಡಿಮೆ ಮಾಡಲು ಕ್ರೀಡೆ ಉತ್ತಮ ಮಾರ್ಗ. ಕ್ರೀಡೆಯಿಂದ ಬರುವ ಒಗ್ಗಟ್ಟು, ಶಿಸ್ತು ಕರ್ತವ್ಯದಲ್ಲೂ ಪ್ರತಿಫಲಿಸಲಿ. ಪೊಲೀಸ್ ಎಂದರೆ ಕೇವಲ ಸಮವಸ್ತ್ರವಲ್ಲ, ಅದು ಸೇವೆ, ತ್ಯಾಗ ಮತ್ತು ಜನರ ನಂಬಿಕೆ” ಎಂದು ಕರೆ ನೀಡಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜ್ ಮಾತನಾಡಿ “ಜಿಲ್ಲೆಯ ಪೊಲೀಸ್ ಕುಟುಂಬ ಒಂದೇ ವೇದಿಕೆಯಲ್ಲಿ ಸೇರಿರುವುದು ಹೆಮ್ಮೆಯ ವಿಷಯ. ಕರ್ತವ್ಯದ ಒತ್ತಡದ ನಡುವೆಯೂ ಮೂರು ದಿನಗಳ ಕಾಲ ಎಲ್ಲರೂ ಕ್ರೀಡೆಯಲ್ಲಿ ತೊಡಗಿಸಿಕೊಂಡು, ಒಗ್ಗಟ್ಟು ಪ್ರದರ್ಶಿಸಿದ್ದು ಸಂತೋಷ ತಂದಿದೆ. ನಮ್ಮ ಸಿಬ್ಬಂದಿ ಕುಟುಂಬದವರಿಗೆ ಸರಿಯಾಗಿ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ ಎಂಬುದು ನಮಗೆ ಗೊತ್ತಿದೆ. ಆದರೆ ಈ ರೀತಿಯ ಕ್ರೀಡಾಕೂಟಗಳು ಕುಟುಂಬದ ಜೊತೆ ಸಮಯ ಕಳೆಯಲು, ಮನಸ್ಸಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಉತ್ತಮ ಅವಕಾಶ ಎಂದರು.

ನಂತರ ವಂದನಾರ್ಪಣೆ ಮಾಡಿದ ಡಿವೈಎಸ್‌ಪಿ ಸ್ನೇಹರಾಜ್  “ಮೂರು ದಿನಗಳ ಕಾಲ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ, ಸಂಘಟಕರು, ಕ್ರೀಡಾಪಟುಗಳು ಹಾಗೂ ಕುಟುಂಬಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳು. ಈ ಕ್ರೀಡಾಕೂಟದಿಂದ ಬಂದ ಒಗ್ಗಟ್ಟು, ಶಿಸ್ತು ನಮ್ಮ ಕರ್ತವ್ಯದಲ್ಲೂ ಮುಂದುವರೆಯಲಿ” ಎಂದು ಹೇಳಿದರು.

ಸಮಾರೋಪ ಸಮಾರಂಭದಲ್ಲಿ ಡಿವೈಎಸ್‌ಪಿಗಳಾದ ಸ್ನೇಹರಾಜ್, ಮೋಹನ್, ಸೋಮಣ್ಣ, ಆರ್‌ಪಿಐ ಸತೀಶ್, ಪಿ.ಎನ್. ಶೇಷಾದ್ರಿ ಸೇರಿದಂತೆ ಜಿಲ್ಲೆಯ ಎಲ್ಲಾ ಠಾಣೆಗಳ ಸಬ್ ಇನ್ಸ್‌ಪೆಕ್ಟರ್‌ಗಳು, ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು, ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಲ್ಲಾಧಿಕಾರಿಯಿಂದ ಅಗೌರವ ಆರೋಪ : ಸಭೆಯಲ್ಲಿ ನೆಲದ ಮೇಲೆ ಕುಳಿತ ಭೀಮಶಕ್ತಿ ಸಂಘಟನೆ ಸದಸ್ಯರು

ಭೀಮಶಕ್ತಿ ಸಂಘಟನೆ ಪದಾಧಿಕರಿಗಳಿಗೆ ಜಿಲ್ಲಾಧಿಕಾರಿಯಿಂದ ಅಗೌರವ ತೋರಿಸಲಾಗಿದೆ ಎಂದು ವಿರೋಧಿಸಿ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ ಅನರ್ಹಗೊಂಡರೆ ಮಸೂದೆಯ ಗತಿ ಏನು?

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ...

ಸಂಸತ್ ವಿಶೇಷ ಅಧಿವೇಶನ: ಜಂಟಿ ಕಾರ್ಯತಂತ್ರ ರೂಪಿಸಲು ಖರ್ಗೆ ನಿವಾಸದಲ್ಲಿ ‘ಇಂಡಿಯಾ’ ಸಭೆ!

ಕೇಂದ್ರ ಸರ್ಕಾರ ಸೋಮವಾರ (ನವೆಂಬರ್ 30) ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು...

12 ದಿನಗಳಿಂದ ಆಶಾ ಹೋರಾಟ; ಸರ್ಕಾರದ ನಿರ್ಲಕ್ಷ್ಯಕ್ಕೆ ಖಂಡನೆ: ಮೈಸೂರಿನಲ್ಲಿ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಹಾಗೂ ಕನಿಷ್ಠ ಮಾಸಿಕ...