ಚಾಮರಾಜನಗರ | ನಮ್ಮ ಸಂವಿಧಾನದಲ್ಲಿ ಸಮಾನತೆಯಿದೆ, ಅದನ್ನು ಉಳಿಸಿಕೊಳ್ಳಬೇಕು : ಎಂ  ಎಸ್.ಮಾದಯ್ಯ

Date:

ನಮ್ಮ ದೇಶದ ಸಂವಿಧಾನ ಬಹಳ ಶ್ರೇಷ್ಠವಾದದ್ದು. ಅದರ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಸಂವಿಧಾನದಲ್ಲಿ ಯಾವುದೇ ಭೇದಭಾವವಿಲ್ಲ ಎಲ್ಲರಿಗೂ ಸಮಾನತೆಯನ್ನು ನೀಡಲಾಗಿದೆ ಎಂದು ಶ್ರೀರಾಮಚಂದ್ರ ವಿದ್ಯಾಸಂಸ್ಥೆ ಅಧ್ಯಕ್ಷರಾದ ಎಂ.ಎಸ್.ಮಾದಯ್ಯ ತಿಳಿಸಿದರು.

- Advertisement -

ನಗರದ ನ್ಯಾಯಾಲಯ ರಸ್ತೆಯಲ್ಲಿ ಇರುವ ಶ್ರೀರಾಮಚಂದ್ರ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಚರಣೆಯನ್ನು ಆಚರಿಸಲಾಯಿತು. ಕಾಯಕ್ರಮದಲ್ಲಿ ಡಾ.ಬಿ.ಆರ್.‌ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ ಅವರು ಮಾತನಾಡಿದರು. ನಮ್ಮ ದೇಶದ ಸಂವಿಧಾನವು ಬೇರೆ ದೇಶಗಳ ಸಂವಿಧಾನಕ್ಕಿಂತ ಉತ್ತಮವಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಅರಿವನ್ನು ಬೆಳೆಸಿಕೊಂಡರೆ ಉತ್ತಮ ಪ್ರಜೆಯಾಗಬಹುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಸಂಸ್ಥೆಯ ಕಾರ್ಯದರ್ಶಿ ಎಂ.ರುದ್ರಮೂರ್ತಿ ಮಾತನಾಡಿ ಸ್ವಾತಂತ್ರ್ಯ ಬಂದ ಮೇಲೆ ಸಂವಿಧಾನ ರಚನೆ ಮಾಡಲಾಯಿತು. 2015ರಲ್ಲಿ ಭಾರತ ಸರ್ಕಾರವು  ನವಂಬರ್ 26 ರನ್ನು   ಸಂವಿಧಾನ ದಿನಾಚರಣೆ ಎಂದು ಘೋಷಣೆ ಮಾಡಿತು.  ಭಾರತದ ಸಂವಿಧಾನದಲ್ಲಿ ಸರ್ವರನ್ನು ಸಮಾನತೆಯಿಂದ ನೋಡಬೇಕು ಎಂಬ ಸಂದೇಶ ಇದೆ. ‌ಈ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕರಾದ ಮಹೇಶ್.ಎಸ್ ಅವರು ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಪಠ್ಯ ಚಟುವಟಿಕೆಗಳ ಜೊತೆಯಲ್ಲಿ ಪುಸ್ತಕಗಳನ್ನು ಓದುವುದರಿಂದ ಜ್ಞಾನದ ಶಕ್ತಿ ಹೆಚ್ಚುತ್ತದೆ. ಸಂವಿಧಾನದ ಪೀಠಿಕೆಗಳಲ್ಲಿ ನಮ್ಮ ದೇಶದ ಕಾನೂನುಗಳ ನಿಯಮಗಳನ್ನು ತಿಳಿಯಬಹುದು ಎಂದರು.

ಶಾಲೆಯ ಮುಖ್ಯ ಶಿಕ್ಷಕರಾದ ಪರಶಿವಮೂರ್ತಿ ಮಾತನಾಡಿ ನಮ್ಮ ಸಂವಿಧಾನವನ್ನು ಉಳಿಸಿಕೊಳ್ಳುವುದು ಭಾರತದ ಪ್ರಜೆಗಳ ಕರ್ತವ್ಯ ಎಂದು ಹೇಳಿದರು.

 ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಕುಮಾರ್,  ಯಶ್ಪಾಲ್, ರತ್ನಮ್ಮ, ದೈಹಿಕ ಶಿಕ್ಷಕ ಎಸ್.ರಂಗಸ್ವಾಮಿ, ಮಂಜುಳ ಇದ್ದರು.
 ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿದಿ ಬೋಧಿಸಲಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಇಪಿ, ಟಿಎಸ್‌ಪಿ ಹಣವನ್ನು ಸಮುದಾಯದ ಅಭಿವೃದ್ದಿ ಕಾರ್ಯಕ್ಕೆ ಬಳಸುವಂತೆ ಸಿಎಂಗೆ ಮನವಿ  

ಪರಿಶಿಷ್ಟ ಜಾತಿ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಎಸ್‌ಇಪಿ, ಟಿಎಸ್‌ಪಿ ಅನುದಾನವನ್ನು ಅನ್ಯ...

ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‌ಡಿಎ ನಾಯಕರಿಗಿಲ್ಲ: ಸಿಎಂ ಡಿ ಕೆ ಶಿವಕುಮಾರ್

“ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‌ಡಿಎ ನಾಯಕರಿಗೆ ಇಲ್ಲ. ಅವರಿಗೆ...

ನ್ಯಾಯಾಂಗ ನೇಮಕಾತಿ | ಎಸ್‌ಸಿ, ಎಸ್‌ಟಿ, ಒಬಿಸಿ ಕಡೆಗಣನೆ; ಒಂದೇ ಸಮುದಾಯಕ್ಕೆ ಆದ್ಯತೆ: ರಾಷ್ಟ್ರಪತಿಗೆ ನಿವೃತ್ತ ಸಿಜೆಐ ಗವಾಯಿ ಪತ್ರ

ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಯಲ್ಲಿ ಸಾಮಾಜಿಕ ವೈವಿಧ್ಯತೆ...

ಮಂಡ್ಯ |”ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ” : ಶಾಸಕ ಪಿ. ರವಿಕುಮಾರ್‌

ಸಂತಶ್ರೇಷ್ಠ ಕನಕದಾಸರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ಜಾತಿ,...