ವಾಣಿಜ್ಯ ಸಿಲಿಂಡರ್ ಬೆಲೆ 993 ರೂ. ಏರಿಕೆ: ಪ್ರಧಾನಿ ಮೋದಿ ‘ಇನ್‌ಫ್ಲೇಷನ್ ಮ್ಯಾನ್’ ಎಂದು ಕಾಂಗ್ರೆಸ್ ವಾಗ್ದಾಳಿ

Date:

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಭಾರಿ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಯವರನ್ನು ‘ಇನ್‌ಫ್ಲೇಷನ್ ಮ್ಯಾನ್’ (ಹಣದುಬ್ಬರದ ಮನುಷ್ಯ) ಎಂದು ಜರೆದಿದೆ. ಈ ನಿರಂತರ ಬೆಲೆ ಏರಿಕೆಯು ಸಣ್ಣ ಉದ್ಯಮಿಗಳ ಮೇಲೆ ತೀವ್ರ ಆರ್ಥಿಕ ಹೊರೆ ಹಾಕುತ್ತಿದೆ ಎಂದು ಪಕ್ಷ ಆರೋಪಿಸಿದೆ.

- Advertisement -

19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 993 ರೂ. ಹೆಚ್ಚಿಸಿರುವುದರಿಂದ, ನವದೆಹಲಿಯಲ್ಲಿ ಈಗ ಒಂದು ಸಿಲಿಂಡರ್ ಬೆಲೆ 3,071.50 ರೂ. ಗೆ ತಲುಪಿದೆ. ಇದರೊಂದಿಗೆ 5 ಕೆಜಿ ಮುಕ್ತ ವ್ಯಾಪಾರದ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕೂಡ ಪ್ರತಿ ಯೂನಿಟ್‌ಗೆ 261 ರೂ. ರಷ್ಟು ಹೆಚ್ಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

‘ಎಕ್ಸ್’ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಕಳೆದ ನಾಲ್ಕು ತಿಂಗಳುಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಆಗಿರುವ ನಿರಂತರ ಏರಿಕೆಯ ಅಂಕಿಅಂಶಗಳನ್ನು ಬಿಚ್ಚಿಟ್ಟಿದೆ. ‘ಇನ್‌ಫ್ಲೇಷನ್ ಮ್ಯಾನ್ ಮೋದಿ’ ಮತ್ತೆ ತಮ್ಮ ಚಾಟಿ ಬೀಸಿದ್ದಾರೆ ಎಂದು ಟೀಕಿಸಿರುವ ಪಕ್ಷವು, ಜನವರಿ 1 ರಂದು 111 ರೂ., ಫೆಬ್ರವರಿ 1 ರಂದು 50 ರೂ., ಮಾರ್ಚ್ 1 ರಂದು 31 ರೂ., ಮಾರ್ಚ್ 7 ರಂದು 115 ರೂ., ಏಪ್ರಿಲ್ 1 ರಂದು 218 ರೂ. ಹಾಗೂ ಮೇ 1 ರಂದು 993 ರೂ. ಬೆಲೆ ಹೆಚ್ಚಿಸಲಾಗಿದೆ ಎಂದು ವಿವರಿಸಿದೆ. ಈ ಮೂಲಕ ಕೇವಲ ನಾಲ್ಕು ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಒಟ್ಟು 1,518 ರೂ. ದುಬಾರಿ ಏರಿಕೆಯಾಗಿದೆ. ವರ್ಷದಲ್ಲಿ ಇನ್ನೂ ಎಂಟು ತಿಂಗಳುಗಳು ಬಾಕಿ ಉಳಿದಿದ್ದು, ಮೋದಿಯವರ ಸುಲಿಗೆ ಹೀಗೆಯೇ ಮುಂದುವರಿಯುತ್ತಿದೆ ಎಂದು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ಇದನ್ನು ಓದಿದ್ದೀರಾ? ತಮಿಳುನಾಡಿನ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಕ್ರಿಕೆಟ್ ಅಂಪೈರ್ ರಿತಿಕಾ ಶ್ರೀ

ಚುನಾವಣಾ ಮತದಾನ ಮುಗಿದ ಬೆನ್ನಲ್ಲೇ ಈ ಬೆಲೆ ಏರಿಕೆ ಮಾಡಿರುವ ಸರ್ಕಾರದ ನಡೆಯನ್ನು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ಪ್ರಶ್ನಿಸಿದ್ದಾರೆ. ಏಪ್ರಿಲ್ 29 ರಂದು ಮತದಾನ ಮುಗಿದಿದ್ದು, ತಕ್ಷಣವೇ ಅಂದರೆ ಮೇ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 990 ರೂ. ಜಿಗಿತವಾಗಿದೆ. ಚುನಾವಣೆಗೆ ಮೊದಲು ಮೌನವಾಗಿದ್ದ ಸರ್ಕಾರ, ಮತದಾನ ಮುಗಿದ ಮರುದಿನವೇ ಬೆಲೆ ಹೆಚ್ಚಿಸಿದೆ. ಇದರಿಂದ ಸಣ್ಣ ಹೋಟೆಲ್‌ಗಳು, ಟೀ ಅಂಗಡಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಗ್ರಾಹಕರಿಗೆ ಬೆಲೆ ಹೆಚ್ಚಿಸುವ ಅನಿವಾರ್ಯತೆಗೆ ಸಿಲುಕಲಿದ್ದಾರೆ. ಆದರೆ ಅದಾನಿ ಸಾಮ್ರಾಜ್ಯ ಮಾತ್ರ ನಿರಂತರವಾಗಿ ಬೆಳೆಯುತ್ತಲೇ ಇದೆ, ಇದೊಂದು ಆಕಸ್ಮಿಕವಲ್ಲ ಬದಲಾಗಿ ಇದೊಂದು ವ್ಯವಸ್ಥಿತ ತಂತ್ರ ಎಂದು ಅವರು ಆರೋಪಿಸಿದ್ದಾರೆ.

ಈ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿರುವ ತೈಲ ಮಾರಾಟ ಕಂಪನಿಗಳು ಮತ್ತು ಅಧಿಕಾರಿಗಳು, ಜಾಗತಿಕ ಇಂಧನ ಮಾರುಕಟ್ಟೆಯ ಟ್ರೆಂಡ್‌ಗಳಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಶ್ಚಿಮ ಏಷ್ಯಾದ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 126 ಡಾಲರ್ ವರೆಗೆ ಏರಿಕೆಯಾಗಿದ್ದು, ಇಂತಹ ಜಾಗತಿಕ ಬೆಲೆ ಏರಿಳಿತಗಳ ಕಾರಣದಿಂದಾಗಿ ವಾಣಿಜ್ಯ ಸಿಲಿಂಡರ್ ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...