ಟ್ರ್ಯಾಫಿಕ್ ಜಾಮ್ ಪ್ರಶ್ನಿಸುವುದು ಅಪರಾಧವೇ? ಬಿಜೆಪಿ ಸಚಿವರ ಬೆವರಿಳಿಸಿದ್ದ ಮಹಿಳೆ ವಿರುದ್ಧ ದೂರು

Date:

ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಮುಂಬೈನ ವರ್ಲಿ ಪ್ರದೇಶದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ರ‍್ಯಾಲಿಯಿಂದ ಉಂಟಾದ ಸಂಚಾರ ದಟ್ಟಣೆ (ಟ್ರ್ಯಾಫಿಕ್ ಜಾಮ್) ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಮಹಿಳೆಯ ವಿರುದ್ಧ ಇದೀಗ ಪೊಲೀಸರಿಗೆ ದೂರು ಸಲ್ಲಿಕೆಯಾಗಿದೆ.

- Advertisement -

ವಕೀಲ ಗುಣರತ್ನ ಸದಾವರ್ತೆ ಅವರ ಪುತ್ರಿ ಝೆನ್ ಸದಾವರ್ತೆ ಎಂಬುವವರು ಆ ಮಹಿಳೆಯ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದಾರೆ. “ಗುರುವಾರ ಸಂಜೆ 7.00 ರಿಂದ 7.30ರ ಸುಮಾರಿಗೆ ಅವರು ಈ ಅರ್ಜಿ ಸಲ್ಲಿಸಿದ್ದು, ಸ್ಥಳೀಯ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ಟೈಮ್ಸ್ ಆಫ್ ಇಂಡಿಯಾ’ಗೆ ಸ್ಪಷ್ಟಪಡಿಸಿದ್ದಾರೆ. ಆದರೆ ದೂರಿನಲ್ಲಿ ಉಲ್ಲೇಖಿಸಿರುವ ನಿರ್ದಿಷ್ಟ ಅಂಶಗಳ ಬಗ್ಗೆ ಸದ್ಯಕ್ಕೆ ತಮಗೆ ಮಾಹಿತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯನ್ನು ತ್ವರಿತವಾಗಿ ಜಾರಿಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆ ಸೋಲನ್ನು ಮುಂದಿಟ್ಟುಕೊಂಡು, ಪ್ರತಿಪಕ್ಷಗಳನ್ನು ಟೀಕಿಸುವ ಉದ್ದೇಶದಿಂದ ಬಿಜೆಪಿ ಮಂಗಳವಾರ ಮುಂಬೈನ ವರ್ಲಿ ಪ್ರದೇಶದಲ್ಲಿ ಈ ರ‍್ಯಾಲಿಯನ್ನು ಆಯೋಜಿಸಿತ್ತು.

ಇದನ್ನು ಓದಿದ್ದೀರಾ? ಕ್ಯಾಂಪಸ್ ರಾಜಕೀಯಕ್ಕೆ ಶಿಸ್ತಿನ ಕಡಿವಾಣ: ಲಿಂಗ್ಡೋ ಸಮಿತಿ ವರದಿಯ ಆಶಯ ಮತ್ತು ವಾಸ್ತವ

ರ‍್ಯಾಲಿಯ ಹಿನ್ನೆಲೆಯಲ್ಲಿ ರಸ್ತೆಗಳನ್ನು ಮುಚ್ಚಿದ್ದರಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿತ್ತು. ಇದೇ ವೇಳೆ ಸಚಿವ ಗಿರೀಶ್ ಮಹಾಜನ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಏಕಾಏಕಿ ಅಲ್ಲಿಗೆ ಬಂದ ಆಕ್ರೋಶಗೊಂಡ ಮಹಿಳೆಯೊಬ್ಬರು, “ಇಲ್ಲಿಂದ ಹೊರಡಿ. ನೀವು ಸಂಚಾರ ದಟ್ಟಣೆಗೆ ಕಾರಣವಾಗಿದ್ದೀರಿ” ಎಂದು ನೇರವಾಗಿ ಸಚಿವರನ್ನೇ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ, ಈ ಕಾರ್ಯಕ್ರಮವನ್ನು ಹತ್ತಿರದ ತೆರೆದ ಮೈದಾನದಲ್ಲಿ ಏಕೆ ನಡೆಸಬಾರದು ಎಂದು ಸಾರ್ವಜನಿಕವಾಗಿ ಪ್ರಶ್ನಿಸಿದ್ದರು.

ರ‍್ಯಾಲಿಯ ವೇಳೆ ಈ ಮಹಿಳೆ ಗದ್ದಲ ಸೃಷ್ಟಿಸಿದ್ದಾರೆ, ನಿಂದನಾತ್ಮಕ ಭಾಷೆ ಬಳಸಿದ್ದಾರೆ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ತಂದಿದ್ದಾರೆ ಎಂದು ದೂರುದಾರರಾದ ಝೆನ್ ಸದಾವರ್ತೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...