ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಕಾಂಗ್ರೆಸ್‌ಗೆ ಮರಳುವುದಿಲ್ಲ: ಚರಣ್‌ಜಿತ್‌ ಸಿಂಗ್‌ ಚನ್ನಿ

Date:

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ವಿರುದ್ಧ ಹಲವಾರು ಇ.ಡಿ. ಪ್ರಕರಣಗಳಿದ್ದು, ಅವರು ಕಾಂಗ್ರೆಸ್‌ ಪಕ್ಷಕ್ಕೆ ಮರಳುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್‌ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಹೇಳಿದ್ದಾರೆ.

- Advertisement -

ಸೋನಿಯಾ ಗಾಂಧಿ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಅಮರಿಂದರ್‌ ಸಿಂಗ್‌ ಭಾಗವಹಿಸಿರುವುದು, 2027ರ ಪಂಜಾಬ್‌ ಚುನಾವಣೆ ಹಿನ್ನೆಲೆ ರಾಜಕೀಯದ ಹೊಸ ಚರ್ಚೆಗಳಿಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಅವರು ಕಾಂಗ್ರೆಸ್‌ಗೆ ಮರುಳುತ್ತಾರೆ ಎಂದು ಅನಿಸುವುದಿಲ್ಲ. ಯಾಕೆಂದರೆ ಅವರ ವಿರುದ್ಧ ಇ.ಡಿ.ಯ ಹಲವು ಪ್ರಕರಣಗಳಿವೆ. ಆದರೆ, ಕಾರ್ಯಕ್ರಮಕ್ಕೆ ಆಗಮಿಸುವ ಮೂಲಕ ಅವರು ಪಕ್ಷದ ಮೇಲಿನ ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ತೋರಿಸಿದ್ದಾರೆ. ಇದಕ್ಕಾಗಿ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು.

ಸೋಮವಾರ ನಡೆದ ಸೋನಿಯಾ ಗಾಂಧಿ ಅವರ ಆತ್ಮಕಥನ ʻA Journey of Love’ ಬಿಡುಗಡೆ ಸಮಾರಂಭದಲ್ಲಿ ಅಮರಿಂದರ್‌ ಸಿಂಗ್‌ ಭಾಗವಹಿಸಿ, ಹಲವು ನಾಯಕರೊಂದಿಗೆ ಮುಂದಿನ ಸಾಲಿನಲ್ಲಿ ಕುಳಿತಿದ್ದರು. 2021ರಲ್ಲಿ ಕಾಂಗ್ರೆಸ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲ್ಪಟ್ಟ ಬಳಿಕ ಅವರು ಕಾಂಗ್ರೆಸ್‌ ತೊರೆದಿದ್ದರು. ಅನಂತರ ಕಾಂಗ್ರೆಸ್‌ಗೆ ಮರಳುವ ಬಗ್ಗೆ ಚರ್ಚೆಗಳು ಬಂದಾಗಲೆಲ್ಲಾ, ಅಮರಿಂದರ್‌ ಸಿಂಗ್‌ ಅದನ್ನು ತಳ್ಳಿಹಾಕುತ್ತಲೇ ಬಂದಿದ್ದಾರೆ. ಕೆಲವು ಸಂದರ್ಭಗಳಲ್ಲಿ ಅವರು ಬಿಜೆಪ ಕಾರ್ಯಕ್ರಮಗಳಿಗೂ ಗೈರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಅಮರಿಂದರ್‌ ಸಿಂಗ್‌ ಭಾಗವಹಿಸಿರುವುದು ಸಹಜವಾದದ್ದು, ಅದರಲ್ಲಿ ವಿಶೇಷತೆಯೇನಿಲ್ಲ. ಎರಡೂ ಕುಟುಂಬಗಳ ನಡುವಿನ ದೀರ್ಘಕಾಲದ ವೈಯಕ್ತಿಕ ಸಂಬಂಧಗಳಿಂದಾಗಿ ಭಾಗವಹಿಸಿದ್ದಾರೆ ಎಂದು ಬಿಜೆಪಿಯ ರಾಣಾ ಗುರ್ಮೀತ್‌ ಸಿಂಗ್‌ ಸೋಧಿ ಸಮರ್ಥಿಸಿಕೊಂಡಿದ್ದಾರೆ.

ರಾಜೀವ್‌ ಗಾಂಧಿ ಮತ್ತು ಅವರ ಕುಟುಂಬದೊಂದಿಗೆ ಅಮರಿಂದರ್‌ ಸಿಂಗ್‌ ಹಾಗೂ ಅವರ ಕುಟುಂಬ ಹೊಂದಿದ್ದ ದೀರ್ಘಕಾಲದ ಆತ್ಮೀಯತೆ ಹಾಗೂ ಒಡನಾಟದಿಂದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಸೋಧಿ ತಿಳಿಸಿದ್ದಾರೆ.

ಕಾಂಗ್ರೆಸ್‌ಗೆ ಮರಳುವ ವಿಚಾರವಾಗಿ ಅಮರಿಂದರ್‌ ಸಿಂಗ್‌ ಅವರನ್ನು ಪ್ರಶ್ನಿಸಿದಾಗ ಅವರು ಸ್ಪಷ್ಟವಾಗಿ “ಇಲ್ಲ” ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿರುವುದರ ಬಗ್ಗೆ ಮಾತನಾಡಿದ ಅವರು, “ನಾವು ಇಲ್ಲಿಗೆ ಬಂದಿರುವುದು ಒಂದು ಸಾಮಾಜಿಕ ಕಾರ್ಯಕ್ರಮಕ್ಕಾಗಿ, ಇಲ್ಲಿ ರಾಜಕೀಯ ವಿಚಾರಗಳು ಹೇಗೆ ಬರುತ್ತವೆ? ಎಂದು ಪ್ರಶ್ನಿಸಿದರು. ಸೋನಿಯಾ ಗಾಂಧಿ ಅವರು ತಮ್ಮ ಮೂರು ಪುಸ್ತಕಗಳ ಬಿಡುಗಡೆ ಸಮಾರಂಭಗಳಲ್ಲಿ ಭಾಗವಹಿಸಿದ್ದನ್ನು ಸ್ಮರಿಸಿಕೊಂಡರು.

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕೂಡ ತಮ್ಮ ತಂದೆ-ತಾಯಿ ಹಾಗೂ ಅಮರಿಂದರ್‌ ಸಿಂಗ್‌ ಅವರ ಒಡನಾಟವನ್ನು ಸ್ಮರಿಸಿದರು.
ಅಮರಿಂದರ್‌ ಸಿಂಗ್‌ ಅವರ ಭಾಗವಹಿಸುವಿಕೆಯಿಂದ ಕಾಂಗ್ರೆಸ್‌ ನಾಯಕರೊಂದಿಗೆ ಅವರ ಸಂಪರ್ಕ ಮುಂದುವರಿದಿರುವುದರ ಕುರಿತ ಹಿಂದಿನ ಹೇಳಿಕೆಗಳು ಮತ್ತೆ ಮುನ್ನೆಲೆಗೆ ಬರುತ್ತಿವೆ.
ಕಳೆದ ತಿಂಗಳು ಕಾಂಗ್ರೆಸ್‌ನ ಪಂಜಾಬ್‌ ಉಸ್ತುವಾರಿ ಸಚಿನ್‌ ಪೈಲಟ್‌ ಅವರು, “ರಾಜಕೀಯದಲ್ಲಿ ಏನೂ ಬೇಕಾದರೂ ಸಾಧ್ಯ” ಎಂದು ಅಮರಿಂದರ್‌ ಅವರ ರಾಜಕೀಯ ಪ್ರಭಾವ ಮತ್ತು ನಾಯಕತ್ವವನ್ನು ಉಲ್ಲೇಖಿಸಿದ್ದರು.

ಇತ್ತೀಚೆಗೆ ಅಮರಿಂದರ್‌ ಸಿಂಗ್‌ ಅವರು ಪ್ರಧಾನಿ ನರೇಂದ್ರ ಮೋಡಿ ಅವರನ್ನು ಭೇಟಿಯಾದ ಬೆನ್ನಲ್ಲೇ ಅವರು ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿರುವುದು ಪಂಜಾಬ್‌ ವಿಧಾನಭಾ ಚುನಾವಣೆಗೆ ಮುನ್ನ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯ: 2027ರ ಆವೃತ್ತಿಗೆ ಸಿಎಸ್‌ಕೆ ತಂಡದ ಮೆಂಟರ್ ಆಗಿ ನೇಮಕ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನೆಚ್ಚಿನ ನಾಯಕ, ಹಾಗೂ ವಿಶ್ವ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ಎಸ್ ರಾವ್

ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು,...