ಕಾಂಗ್ರೆಸ್‌ನಿಂದ ಮೈತ್ರಿ ಧರ್ಮದ ಉಲ್ಲಂಘನೆ: ‘ಹಳೆಯ ರಾಜಕೀಯ ಚಾಳಿ’ ಖಂಡಿಸಿ ಡಿಎಂಕೆ ಮಹತ್ವದ ನಿರ್ಣಯ

Date:

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಹಾಗೂ ಹೀನಾಯ ಸೋಲನ್ನು ಅನುಭವಿಸಿದ ನಂತರ, ಎಂ ಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವು ತನ್ನ ಹಿಂದಿನ ಮೈತ್ರಿ ಪಕ್ಷವಾದ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನವನ್ನು ಹೊರಹಾಕಿದೆ. ‘ಕಾಂಗ್ರೆಸ್ ಪಕ್ಷವು ತನ್ನ ಹಳೆಯ ರಾಜಕೀಯ ಚಾಳಿಯನ್ನು ಬದಲಾಯಿಸಿಕೊಳ್ಳಲು ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಡಿಎಂಕೆ ತನ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತವಾಗಿ ನಿರ್ಣಯವನ್ನು ಅಂಗೀಕರಿಸಿದೆ.

- Advertisement -

ಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ಕಾಂಗ್ರೆಸ್ ನಡೆಯನ್ನು ತೀವ್ರವಾಗಿ ಖಂಡಿಸಲಾಗಿದೆ. “ಜಾತ್ಯತೀತ ಪ್ರಗತಿಪರ ಮೈತ್ರಿಕೂಟದಿಂದ ಹೊರಬರುವ ಕಾಂಗ್ರೆಸ್ ನಿರ್ಧಾರವು ಅದರ ಹಳೆಯ ರಾಜಕೀಯ ಬುದ್ಧಿಯನ್ನು ತೋರಿಸುತ್ತಿದೆ. ಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿ ಕಾಂಗ್ರೆಸ್ ಒಂದು ರಾಜ್ಯಸಭಾ ಸ್ಥಾನ ಮತ್ತು 28 ವಿಧಾನಸಭಾ ಕ್ಷೇತ್ರಗಳನ್ನು ಪಡೆದಿತ್ತು. ಆದರೆ, ಚುನಾವಣಾ ಫಲಿತಾಂಶದ ಕೆಲವೇ ದಿನಗಳಲ್ಲಿ ಮೈತ್ರಿಕೂಟದ ಕಾರ್ಯಕರ್ತರ ಕಠಿಣ ಪರಿಶ್ರಮದ ವಿಜಯವನ್ನು ಗಾಳಿಗೆ ತೂರಿ, ಪರ್ಯಾಯ ರಂಗದ ಕಡೆಗೆ ವಾಲಿದೆ” ಎಂದು ಡಿಎಂಕೆ ತನ್ನ ನಿರ್ಣಯದಲ್ಲಿ ನೇರವಾಗಿ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ‘118 ಶಾಸಕರ ಸಹಿಯೊಂದಿಗೆ ಬನ್ನಿ’; 2ನೇ ದಿನವೂ ಟಿವಿಕೆ ಮುಖ್ಯಸ್ಥರನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸರ್ಕಾರ ರಚಿಸಲು ಬೇಕಾದ 118 ಸ್ಥಾನಗಳ ಉನ್ನು ದೊರೆಕಿಲ್ಲ. ಕಾಂಗ್ರೆಸ್ ಪಕ್ಷ ಡಿಎಂಕೆ ಜೊತೆಗಿನ ಮೈತ್ರಿ ಕಡಿದುಕೊಂಡು ತನ್ನ 5 ಶಾಸಕರ ಬೆಂಬಲವನ್ನು ಟಿವಿಕೆಗೆ ನೀಡಿದೆ. ಇದು ಮೈತ್ರಿಕೂಟ ಕಡಿದುಕೊಳ್ಳಲು ಪ್ರಮುಖ ಕಾರಣವಾಗಿದೆ.

ಸರ್ಕಾರ ರಚನೆಯ ಕಸರತ್ತು ಮುಂದುವರಿದಿದ್ದು, ಟಿವಿಕೆ ನಾಯಕ ಜೋಸೆಫ್ ವಿಜಯ್ ಅವರು ರಾಜ್ಯಪಾಲ ರಾಜೇಂದ್ರ ಅರಳೇಕರ್ ಅವರನ್ನು ಎರಡು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಆದರೆ, ರಾಜ್ಯಪಾಲರು ವಿಜಯ್ ಅವರಿಗೆ ಬಹುಮತ ಸಾಬೀತುಪಡಿಸುವ ಎಲ್ಲ ಶಾಸಕರ ಪಟ್ಟಿ ನೀಡುವಂತೆ ಸೂಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...