ಬಾಗಲಕೋಟೆ | ಜಿಲ್ಲಾಡಳಿತದಿಂದ ಸಂವಿಧಾನ ದಿನ ಆಚರಣೆ : ಸಾಮೂಹಿಕ ಸಂವಿಧಾನ ಪೀಠಿಕೆ ಬೋಧನೆ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಯ ಮುಂಭಾಗ ಗುರುವಾರ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.

- Advertisement -

ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಬಾಗಲಕೋಟೆ ಶಾಸಕ ಉಮೇಶ ಮೇಟಿ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಡಗೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಅನೀಲ ದಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರು ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ನಂತರ ಜಿಲ್ಲಾಧಿಕಾರಿ ಸಂಗಪ್ಪ ಅವರ ನೇತೃತ್ವದಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು. ಈ ಸಂದರ್ಭದಲ್ಲಿ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಎಲ್ಲರಿಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಕಲ್ಪಿಸುವ ಸಂವಿಧಾನದ ಮಹತ್ವವನ್ನು ಸ್ಮರಿಸಲಾಯಿತು.

ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.
ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕು. ನಮ್ಮ ಸಂವಿಧಾನ ಸಭೆಯಲ್ಲಿ 1949ನೇ ನವೆಂಬರ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಎಸ್.ಎಂ.ರಾಂಪೂರ, ಅಪರ ಜಿಲ್ಲಾಧಿಕಾರಿ ಮಂಜುನಾಥ ಡೊಂಬರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮ ಉಕ್ಕಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಜನರಲ್ ಮೀಸಲಾತಿ ರದ್ದುಗೊಳಿಸಿ, ಪರಿಶಿಷ್ಟ ಜಾತಿಗೆ ಮೀಸಲಾತಿ ಕೊಡಿ; ದಸಂಸ 

ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿ ಬಿ. ಕಣಬೂರು ಗ್ರಾಮದ ಜಿಲ್ಲಾ...

ಪಶುಸಂಗೋಪನೆ ಸಾಲ ವಿತರಣೆ ವಿಳಂಬಕ್ಕೆ ರೈತರ ಆಕ್ರೋಶ: 15 ದಿನಗಳ ಗಡುವು

ಪಶುಸಂಗೋಪನೆ ಸಾಲ ವಿತರಣೆಯಲ್ಲಿ ಎದುರಾಗಿರುವ ತಾಂತ್ರಿಕ ಗೊಂದಲ ಹಾಗೂ ವಿಳಂಬ ನೀತಿಯನ್ನು...

ಚಿಕ್ಕಮಗಳೂರು | ಸಂವಿಧಾನ ದಿನ: SIR ವಿರೋಧಿಸಿ ಜಾತ್ಯತೀತ ಪಕ್ಷ, ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ 

ಚುನಾವಣಾ ಆಯೋಗ ನಡೆಸುತ್ತಿರುವ ಅಕ್ರಮ ರೀತಿಯ ಮತದಾರರ ಪಟ್ಟಿಯ ಪರಿಷ್ಕರಣೆಗೆ ಕೊನೆ...

ಭದ್ರಾವತಿ | ಬಾಲ್ಯವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಘಟಿತ ಪ್ರಯತ್ನ ಅಗತ್ಯ: ಗಣ್ಯರ ಅಭಿಮತ

ಆಶ್ರಿತ ಸಂಸ್ಥೆ, ಶಿವಮೊಗ್ಗ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು...