ಮುಖ್ಯಮಂತ್ರಿಗಳ ಭದ್ರಕೋಟೆಯಲ್ಲಿ ಬಿರುಕು: ಸ್ವಕ್ಷೇತ್ರಗಳಲ್ಲೇ ದೀದಿ, ಸ್ಟಾಲಿನ್ ಮತ್ತು ಪಿಣರಾಯಿಗೆ ಹಿನ್ನಡೆ

Date:

​2026ರ ವಿಧಾನಸಭಾ ಚುನಾವಣಾ ಫಲಿತಾಂಶಗಳ ಆರಂಭಿಕ ಟ್ರೆಂಡ್‌ಗಳು ಹೊರಬೀಳುತ್ತಿದ್ದು, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಹಾಲಿ ಮುಖ್ಯಮಂತ್ರಿಗಳಿಗೆ ಹಿನ್ನಡೆಯಾಗುವ ಮುನ್ಸೂಚನೆ ಲಭಿಸಿದೆ. ವಿಪಕ್ಷಗಳ ಪ್ರಬಲ ಪೈಪೋಟಿಯಿಂದಾಗಿ ಈ ಮೂರೂ ರಾಜ್ಯಗಳ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸುತ್ತಿರುವುದು ಈ ಬಾರಿಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

- Advertisement -

ತಂತಮ್ಮ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸುತ್ತಿರುವ ಈ ಮೂವರೂ ಮುಖ್ಯಮಂತ್ರಿಗಳು, ಅಚ್ಚರಿಯೆಂಬಂತೆ ತಮ್ಮದೇ ಸ್ವಕ್ಷೇತ್ರಗಳಲ್ಲೂ ಕಠಿಣ ಪೈಪೋಟಿ ಎದುರಿಸುತ್ತಿರುವುದು ಚುನಾವಣಾ ಕಣದ ಮತ್ತೊಂದು ಕುತೂಹಲಕಾರಿ ಘಟ್ಟವಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ‘ಭವಾನಿಪುರ’ ಕ್ಷೇತ್ರದಲ್ಲಿ ಅನಿರೀಕ್ಷಿತ ಹಿನ್ನಡೆ ಸಾಧಿಸಿದ್ದು, ಟಿಎಂಸಿ ಪಾಳಯದಲ್ಲಿ ತೀವ್ರ ಆತಂಕ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇತ್ತ ತಮಿಳುನಾಡಿನಲ್ಲಿ ಡಿಎಂಕೆ ಅಧಿನಾಯಕ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಾವು ಸತತವಾಗಿ ಗೆದ್ದುಬರುತ್ತಿದ್ದ ‘ಕೊತ್ತೂರು’ ಕ್ಷೇತ್ರದಲ್ಲಿ ಈ ಬಾರಿ ಭಾರೀ ಪೈಪೋಟಿ ಎದುರಿಸುತ್ತಿದ್ದು, ಪ್ರತಿಪಕ್ಷಗಳ ಮೈತ್ರಿಕೂಟದ ಅಬ್ಬರಕ್ಕೆ ಅವರ ಮತಗಳಿಕೆಯ ಪ್ರಮಾಣ ಗಣನೀಯವಾಗಿ ಕುಸಿದಿರುವ ಟ್ರೆಂಡ್ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಇನ್ನು ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ‘ಧರ್ಮಡಮ್’ ಕ್ಷೇತ್ರದಲ್ಲೂ ಹಿನ್ನಡೆ ಅನುಭವಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ತಮಿಳುನಾಡು: 2ನೇ ಅವಧಿಯ ನಿರೀಕ್ಷೆಯಲ್ಲಿ ಡಿಎಂಕೆ, ಎಲ್ಲರ ಕಣ್ಣು ‘ವಿಜಯ್’ ಮೇಲೆ

​ಪಶ್ಚಿಮ ಬಂಗಾಳದಲ್ಲಿ ಸತತ ನಾಲ್ಕನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯುವ ನಿರೀಕ್ಷೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ನಾಯಕಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಈ ಚುನಾವಣೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ. ಪ್ರತಿಪಕ್ಷವಾದ ಬಿಜೆಪಿ ತೀವ್ರ ಪೈಪೋಟಿ ನೀಡುತ್ತಿದ್ದು, ಆರಂಭಿಕ ಎಣಿಕೆಯಲ್ಲಿ ಟಿಎಂಸಿ ಹಲವು ಪ್ರಮುಖ ಗ್ರಾಮೀಣ ಹಾಗೂ ನಗರ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚಿನ ವಿವಾದಗಳು ದೀದಿ ಪಾಳೆಯದಲ್ಲಿ ಆತಂಕವನ್ನು ಇಮ್ಮಡಿಗೊಳಿಸಿವೆ.

​ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೂ ಮುನ್ನಡೆಯ ಹಾದಿ ಸುಲಭವಾಗಿಲ್ಲ. ನಟ ವಿಜಯ್ ಅವರ ಟಿವಿಕೆ ಹಾಗೂ ಎಐಎಡಿಎಂಕೆ ಪಕ್ಷ ಪ್ರಬಲ ಪೈಪೋಟಿ ನೀಡುತ್ತಿವೆ. ಡಿಎಂಕೆ ತನ್ನ ಹಿಂದಿನ ಅಲೆ ಉಳಿಸಿಕೊಳ್ಳುವಲ್ಲಿ ವಿಫಲವಾದಂತೆ ಕಂಡುಬರುತ್ತಿದೆ. ಪ್ರಮುಖ ಸಚಿವರುಗಳು ಹಿನ್ನಡೆ ಸಾಧಿಸುತ್ತಿರುವುದು ಮತ್ತು ಯುವ ಮತದಾರರು ಪರ್ಯಾಯ ನಾಯಕರತ್ತ ವಾಲುತ್ತಿರುವುದು ಸ್ಟಾಲಿನ್ ಅವರಿಗೆ ದೊಡ್ಡ ಹೊಡೆತ ನೀಡಿದೆ.

​ಇನ್ನು ಕೇರಳದಲ್ಲಿ ಐತಿಹಾಸಿಕ ಮೂರನೇ ಅವಧಿಗೆ ಎಲ್‌ಡಿಎಫ್‌ ಸರ್ಕಾರ ರಚಿಸುವ ವಿಶ್ವಾಸದಲ್ಲಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮತದಾರರು ಆಘಾತ ನೀಡುವ ಸಾಧ್ಯತೆಗಳಿವೆ. ಕಾಂಗ್ರೆಸ್ ನೇತೇತ್ವದ ಯುಡಿಎಫ್‌ ಒಡ್ಡಿದ ಸ್ಪರ್ಧೆ ಎಲ್‌ಡಿಎಫ್‌ಗೆ ತೀವ್ರ ಹಿನ್ನಡೆ ತಂದಿದೆ.

​

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...