ದಾವಣಗೆರೆ | ದಕ್ಷಿಣ ಉಪಚುನಾವಣೆ ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಡಿಜಿಟಲ್ ಭದ್ರತೆ

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ದಾವಣಗೆರೆ ನಗರದ ಡಿಆರ್‌ಆರ್ (DRR) ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತವು ಮತ ಎಣಿಕೆಗೆ ಅಗತ್ಯವಿರುವ ತಾಂತ್ರಿಕ ಹಾಗೂ ಭದ್ರತಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಈ ಬಾರಿ ಕ್ಯೂಆರ್ (QR) ಕೋಡ್ ಹೊಂದಿರುವ ಡಿಜಿಟಲ್ ಗುರುತಿನ ಚೀಟಿಗಳನ್ನು ನೀಡಲಾಗಿದೆ” ಎಂದು ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

- Advertisement -

ದಾವಣಗೆರೆ ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಮತ ಎಣಿಕೆ ಪೂರ್ವಸಿದ್ಧತಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಭ್ಯರ್ಥಿಗಳು, ಏಜೆಂಟರು ಹಾಗೂ ಸಿಬ್ಬಂದಿಗಳಿಗೆ ಕ್ಯೂಆರ್ (QR) ಕೋಡ್ ಹೊಂದಿರುವ ಡಿಜಿಟಲ್ ಗುರುತಿನ ಚೀಟಿಗಳನ್ನು ನೀಡಲಾಗಿದೆ. ಸಿಐಎಸ್‌ಎಫ್ (CISF) ಸಿಬ್ಬಂದಿಗಳಿಂದ ಮೊಬೈಲ್ ಆಪ್ ಮೂಲಕ ಕೋಡ್ ಸ್ಕ್ಯಾನ್ ಮಾಡಿ ಗುರುತಿನ ಪರಿಶೀಲನೆ ನಡೆಸಿದ ಬಳಿಕವೇ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಮತ ಎಣಿಕೆ ಕೇಂದ್ರದಲ್ಲಿ ಇವಿಎಂ (EVM) ಮತಗಳ ಎಣಿಕೆಗೆ ಪ್ರತ್ಯೇಕ ಕೊಠಡಿ ಹಾಗೂ ಅಂಚೆ ಮತಪತ್ರಗಳ ಎಣಿಕೆಗೆ ಬೇರೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಮೇ 4ರಂದು ಬೆಳಗ್ಗೆ 7:30ಕ್ಕೆ ಅಭ್ಯರ್ಥಿಗಳು ಹಾಗೂ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗುವುದು. ಬೆಳಗ್ಗೆ 8 ಗಂಟೆಗೆ ಅಂಚೆ ಮತಪತ್ರಗಳ ಎಣಿಕೆ ಆರಂಭವಾಗಲಿದ್ದು, 8:30ಕ್ಕೆ ಇವಿಎಂ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ” ಎಂದು ತಿಳಿಸಿದರು.

“ಒಟ್ಟು 14 ಮತಎಣಿಕೆ ಟೇಬಲ್‌ಗಳನ್ನು ಸಜ್ಜುಗೊಳಿಸಲಾಗಿದ್ದು, ಪೋಸ್ಟಲ್ ಬ್ಯಾಲೆಟ್ ಹಾಗೂ ಇಟಿಪಿಬಿಎಂಎಸ್ (ETPBMS) ಮತಗಳಿಗಾಗಿ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ. 21 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿಯೊಂದು ಟೇಬಲ್‌ಗೆ ಕೌಂಟಿಂಗ್ ಸೂಪರ್‌ವೈಸರ್, ಮೈಕ್ರೋ ಅಬ್ಸರ್ವರ್ ಮತ್ತು ಕೌಂಟಿಂಗ್ ಅಸಿಸ್ಟೆಂಟ್‌ಗಳನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದರು.

“ಭದ್ರತಾ ದೃಷ್ಟಿಯಿಂದ ಮತ ಎಣಿಕೆ ಕೇಂದ್ರದ ಸುತ್ತ ಮೂರು ಹಂತದ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಕೇಂದ್ರದ ಸುತ್ತಲಿನ 100 ಮೀಟರ್ ಪ್ರದೇಶವನ್ನು ಪಾದಚಾರಿ ವಲಯವನ್ನಾಗಿ ಘೋಷಿಸಿ ವಾಹನ ಸಂಚಾರ ನಿಷೇಧಿಸಲಾಗಿದೆ. ಎರಡನೇ ಹಂತದಲ್ಲಿ ಡಿಎಆರ್ (DAR) ಪೊಲೀಸರು ತಪಾಸಣೆ ನಡೆಸಲಿದ್ದು, ಮೂರನೇ ಹಂತದಲ್ಲಿ ಸಿಐಎಸ್‌ಎಫ್ ಸಿಬ್ಬಂದಿಗಳು ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಿದ್ದಾರೆ” ಎಂದು ವಿವರಿಸಿದರು.

“ಪ್ರಸ್ತುತ ಉಪಚುನಾವಣೆಯಲ್ಲಿ 25 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಪ್ರತಿ ಟೇಬಲ್‌ಗೆ ಒಬ್ಬರಂತೆ ಅಭ್ಯರ್ಥಿಗಳು ಏಜೆಂಟ್ ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಧಿಕೃತ ಪಾಸ್ ಇಲ್ಲದೆ ಯಾರಿಗೂ ಮತ ಎಣಿಕೆ ಕೇಂದ್ರ ಪ್ರವೇಶ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳಿಗಾಗಿ ಪ್ರತ್ಯೇಕ ಮೀಡಿಯಾ ಸೆಂಟರ್ ತೆರೆಯಲಾಗಿದ್ದು, ಅಲ್ಲಿ ಇಂಟರ್ನೆಟ್ ಹಾಗೂ ಫಲಿತಾಂಶ ವೀಕ್ಷಣೆಗೆ ಸ್ಮಾರ್ಟ್ ಟಿವಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
85 ವರ್ಷ ಮೇಲ್ಪಟ್ಟ ಮತದಾರರು ಹಾಗೂ ವಿಶೇಷ ಮತದಾರರಿಂದ 217 ಮತಪತ್ರಗಳು ಮತ್ತು 10 ಅಂಚೆ ಮತಗಳನ್ನು ಸ್ವೀಕರಿಸಲಾಗಿದೆ. ಪ್ರತಿ ಸುತ್ತಿನ ಎಣಿಕೆಯ ನಂತರ ಫಲಿತಾಂಶದ ವಿವರಗಳನ್ನು ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಹಾಗೂ ಆನ್‌ಲೈನ್ ಮೂಲಕ ಮಾಧ್ಯಮಗಳಿಗೆ ತಕ್ಷಣವೇ ಪ್ರಕಟಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಸ್ಲಿಂ ರಾಜಕೀಯ ಹಕ್ಕಿನ ಬೇಡಿಕೆಗೆ ಶಿಸ್ತುಕ್ರಮ ದುರದೃಷ್ಟಕರ; ಅಲ್ಪಸಂಖ್ಯಾತರ ಜಾಗೃತಿ ವೇದಿಕೆ

“ಚುನಾವಣಾ ನೀತಿ ಸಂಹಿತೆ (MCC) ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಿಜಯೋತ್ಸವ ಅಥವಾ ಮೆರವಣಿಗೆಗಳಿಗೆ ಅವಕಾಶ ಇರುವುದಿಲ್ಲ” ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಾವಣಗೆರೆ ತಹಶೀಲ್ದಾರ್ ಗುರುಬಸವರಾಜ್ ಹಾಗೂ ಹರಿಹರ ತಹಶೀಲ್ದಾರ್ ಸಂತೋಷ್ ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...