ದಾವಣಗೆರೆ | ಬೀಜ ರಸಗೊಬ್ಬರ ಪೂರೈಕೆಗೆ ರೈತಸಂಘ ಆಗ್ರಹ

Date:

ರಸಗೊಬ್ಬರ ಹಾಗೂ ಬಿತ್ತನೆ ಬೀಜ ಕೊರತೆ ಎದುರಾಗಿದ್ದು, ಕೂಡಲೇ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ವಾಸುದೇವ ಮೇಟಿ ಬಣ) 16,ಮೇ 2026 ರಂದು ದಾವಣಗೆರೆ ಜಿಲ್ಲೆ ಜಗಳೂರು ನಗರದ ಪ್ರವಾಸಿ ಮಂದಿರದಿಂದ ಮಹಾತ್ಮ ಗಾಂಧಿ ಸರ್ಕಲ್ ಮೂಲಕ ಹಾಗೂ ಡಾ.ಬಿ ಆರ್ ಅಂಬೇಡ್ಕರ್ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಸಿಲ್ದಾರ್ ಹಾಗೂ ಕೃಷಿ ಸಹಾಯಕ ನಿರ್ದೇಶಕರಿಗೆ ನಮ್ಮ ಮನವಿ ಪತ್ರ ಸಲ್ಲಿಸಿದರು.

- Advertisement -
1004362106

ರೈತ ಸಂಘದ ತಾಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ ಮಾತನಾಡಿ ಜಗಳೂರು ತಾಲೂಕಿನ ರೈತರಿಗೆ ಸಮಯಕ್ಕೆ ಸರಿಯಾಗಿ ರಾಸಾಯನಿಕ ಔಷಧಿ, ರಸಗೊಬ್ಬರ ಮತ್ತು ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಔಷಧಿಗಳನ್ನು ವಿತರಣೆ ಮಾಡಬೇಕು ಹಾಗೂ ಈ ಹಿಂದೆ ನೀಡುತ್ತಿದ್ದಂತೆ ಗೊಬ್ಬರದ ಜೊತೆಗೆ ಯಾವುದೇ ಲಿಂಕ್ ಅನ್ನು ಕೊಡಬಾರದು ಎಂದು ನಮ್ಮ ಸಂಘಟನೆಯಿಂದ ಒತ್ತಾಯಿಸುತ್ತೇವೆ. ತಾಲೂಕಿನಲ್ಲಿ ಮುಂಗಾರು ಬಿತ್ತನೆಗೆ ಡಿಎಪಿ, ಯೂರಿಯಾ ರಸಗೊಬ್ಬರ ಕೊರತೆ ಎದುರಾಗಿದ್ದು
ಕೃಷಿ ಇಲಾಖೆ ಈಗಲೇ ಎಚ್ಚೆತ್ತು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
1004362108

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ “ಭಾರತಕ್ಕೆ ಅಗತ್ಯವಿರುವ ಯೂರಿಯಾ ಮತ್ತು ಡಿ.ಎ.ಪಿ ಗೊಬ್ಬರದ ಕಚ್ಚಾವಸ್ತುಗಳು ಬಹುಪಾಲು ಮಧ್ಯಪ್ರಾಚ್ಯದ ದೇಶಗಳಿಂದ ಬರುತ್ತಿದ್ದು, ಯುದ್ಧದ ಕಾರಣದಿಂದಾಗಿ ಕಚ್ಚಾ ವಸ್ತುಗಳ ಕೊರತೆಯಿಂದ ಉತ್ಪಾದನೆ ಕಡಿಮೆಯಾಗಿದೆ. ಮುಂಗಾರು ಹಂಗಾಮಿಗೆ ದೇಶಕ್ಕೆ ಸುಮಾರು 2 ಕೋಟಿ ಟನ್ ಯೂರಿಯಾ ಅಗತ್ಯವಿದ್ದು, ಪ್ರಸ್ತುತ ಶೇ.40 ರಿಂದ 50 ರಷ್ಟು ಮಾತ್ರ ಗೊಬ್ಬರ ದಾಸ್ತಾನು ಇದೆ. ಲಭ್ಯವಿರುವ ಗೊಬ್ಬರವನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಹೆಚ್ಚುವರಿ ಗೊಬ್ಬರವನ್ನು ಶೀಘ್ರವೇ ತರಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭೂಮಾಪಕರ, ರಸಗೊಬ್ಬರ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ: ಹೆಚ್ ಆರ್ ಬಸವರಾಜಪ್ಪ

ಪ್ರತಿಭಟನೆಯಲ್ಲಿ ಪ್ರಗತಿಪರ ಹೋರಾಟಗಾರರಾದ ವಕೀಲ ಓಬಳೇಶ್, ಸತ್ಯಮೂರ್ತಿ, ದಾವಣಗೆರೆ ತಾಲೂಕ್ ಅಧ್ಯಕ್ಷರಾದ ಹನುಮಂತಪ್ಪ, ಭೀಮಣ್ಣ, ಮಲ್ಲಿಕಾಣ್ಣ, ಉಚ್ಚಂಗಪ್ಪ, ಹಾಗೂ ಜಿಲ್ಲಾ ಕಾರ್ಯದರ್ಶಿಯಾದ ಕಿರಣ್ ಕುಮಾರ್, ತಾಲೂಕು ಗೌರವ ಅಧ್ಯಕ್ಷ ಪಾಲನಾಯಕ, ತಾಲೂಕು ಪ್ರಧಾನ ಕಾರ್ಯದರ್ಶಿ ಭರತ್ ನಾಡಿಗಾರ್, ಹಸಿರು ಸೇನೆ ಅಧ್ಯಕ್ಷ ಜಗದೀಶ್, ಹಸಿರು ಸೇನೆ ಉಪಾಧ್ಯಕ್ಷ ಸೂರಪ್ಪ, ಕಸಭಾ ಹೋಬಳಿ ಘಟಕ ಅಧ್ಯಕ್ಷರ ಚನ್ನಬಸಪ್ಪ, ಹೊಸೂರ್ ಗ್ರಾಮ ಘಟಕದ ಅಧ್ಯಕ್ಷ ಪಿಎಂ ಮಾಂತೇಶ್ ದೊಣ್ಣೆ ಹಳ್ಳಿ, ಗ್ರಾಮ ಘಟಕದ ಅಧ್ಯಕ್ಷ ಮಾಂತೇಶ್, ಆಕನೂರು ಗ್ರಾಮ ಘಟಕದ ಅಧ್ಯಕ್ಷ ಕಾಡಪ್ಪ, ಭರಮಸಮುದ್ರ ಗ್ರಾಮ ಘಟಕದ ಅಧ್ಯಕ್ಷ ಚನ್ನಪ್ಪ, ಉಪಾಧ್ಯಕ್ಷ ಚಂದ್ರಪ್ಪ, ಗೌರವ ಅಧ್ಯಕ್ಷ ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಮಧು, ಬೆಣ್ಣೆ ಹಳ್ಳಿ ಗ್ರಾಮ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ದೊಣ್ಣೆ ಹಳ್ಳಿ ಉಪಾಧ್ಯಕ್ಷ ತಿಪ್ಪಣ್ಣ, ಬೋರಪ್ಪ, ನಾಡಿಗರ ಸತೀಶ್, ರಾಚಪ್ಪ ಗೌಡ್ರು, ಗೌಡ್ರು ಬಸವರಾಜಪ್ಪ, ನಾಡಿಗರ ರುದ್ರಪ್ಪ, ಅಂಗಡಿ ರೇವಣ್ಣ, ಎಕೆ ಬಸಣ್ಣ, ಮಂಜಣ್ಣ, ಆರ್ ವಿ ವೀರೇಶ್, ತಿಮ್ಲಾಪುರ ಕರಿಬಸಪ್ಪ, ಹನುಮಂತಪುರ ಗೊಲ್ಲರಟ್ಟಿ ಕೃಷ್ಣಪ್ಪ, ಕ್ಯಾಸೇನಹಳ್ಳಿ ಹಂಪಣ್ಣ ಸೇರಿದಂತೆ ಅನೇಕ ರೈತರು ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...