ದಾವಣಗೆರೆ | ಜಿಲ್ಲೆಯ ಕೃಷಿ ಭಾಗ್ಯ ಯೋಜನೆಯ ಉತ್ತಮ ಪ್ರದರ್ಶಿಕೆಗಳಿಗೆ ಪ್ರಥಮ ಸ್ಥಾನ

Date:

ಕೃಷಿ ಇಲಾಖೆಯ ಬೆಂಗಳೂರು ಕೇಂದ್ರ ಕಛೇರಿಯ ಸಂಗಮ ಸಭಾಂಗಣದಲ್ಲಿ 2026ರ ಮೇ 18 ರಿಂದ 19 ರವರೆಗೆ ಆಯೋಜಿಸಲಾಗಿದ್ದ 2026-27ನೇ ಸಾಲಿನ ಕೃಷಿ ಇಲಾಖೆಯ ರಾಜ್ಯ ಮಟ್ಟದ ಮುಂಗಾರು ಹಂಗಾಮು ಕಾರ್ಯಾಗಾರದಲ್ಲಿ, ಕೃಷಿ ಭಾಗ್ಯ ಯೋಜನೆಯಡಿ ಉತ್ತಮ ಪ್ರದರ್ಶಿಕೆಗಳನ್ನು ಪ್ರಸ್ತುತಪಡಿಸಿದ ದಾವಣಗೆರೆ ಜಿಲ್ಲೆಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪುರಸ್ಕಾರ ಲಭಿಸಿದೆ.

- Advertisement -

ಕೃಷಿ ಇಲಾಖೆಯ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ 2025-26ನೇ ಸಾಲಿನ ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾಗಿದ್ದ ಈ ಎರಡು ದಿನಗಳ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಉದ್ಘಾಟಿಸಿದ್ದರು. ಈ ವೇಳೆ ಹಲವು ಜಿಲ್ಲೆಗಳ ಪ್ರದರ್ಶಿಕೆಗಳನ್ನು ಪ್ರದರ್ಶನಕ್ಕಿಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
1004384308

ಈ ವೇಳೆ ಕೃಷಿ ಆಯುಕ್ತರಾದ ವೈ.ಎಸ್. ಪಾಟೀಲ್ ಹಾಗೂ ಕೃಷಿ ನಿರ್ದೇಶಕರಾದ ಡಾ. ಜಿಟಿ ಪುತ್ರ ಅವರು ಉಪಸ್ಥಿತರಿದ್ದು, ಇಲಾಖೆಯು ಸಾಧಿಸಿದ ಭೌತಿಕ ಹಾಗೂ ಆರ್ಥಿಕ ಪ್ರಗತಿ ಮತ್ತು ಮುಂಬರುವ ಮುಂಗಾರು ಹಂಗಾಮಿನ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ‘ಕೃಷಿ ಭಾಗ್ಯ’ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳ ಅನುಷ್ಠಾನದ ಕುರಿತು ದಾವಣಗೆರೆ ಜಿಲ್ಲೆಯು ಅತ್ಯುತ್ತಮ ಪ್ರದರ್ಶಿಕೆಗಳನ್ನು ಪ್ರಸ್ತುತಪಡಿಸಿದ್ದಕ್ಕಾಗಿ ಈ ಗೌರವ ಸಂದಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೀಜ ರಸಗೊಬ್ಬರ ಪೂರೈಕೆಗೆ ರೈತಸಂಘ ಆಗ್ರಹ

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ದಾವಣಗೆರೆ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಜಿಯಾವುಲ್ಲಾ ಕೆ, ಉಪ ಕೃಷಿ ನಿರ್ದೇಶಕರುಗಳಾದ ಶ್ರೀಮತಿ ಭಾರತಮ್ಮ, ರೇವಣಸಿದ್ದನಗೌಡ ಹೆಚ್.ಕೆ., ತಿಪ್ಪೇಸ್ವಾಮಿ ಆ‌ರ್. ಹಾಗೂ ಸಹಾಯಕ ಕೃಷಿ ನಿರ್ದೇಶಕರುಗಳಾದ ಶ್ರೀಧರ ಮೂರ್ತಿ ಡಿ.ಎಂ., ನಟರಾಜ್, ವಿಶ್ವನಾಥ್, ಅರುಣ್ ಕುಮಾ‌ರ್ ಮತ್ತು ಶ್ರೀಮತಿ ಶ್ವೇತಾ ಅವರುಗಳು ಸ್ವೀಕರಿಸಿ ದರು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...