ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಮಹಿಳೆಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಜಾಲತಾಣಗಳಲ್ಲಿ ಹಂಚಿದ ಆರೋಪದಡಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಯಲೋದಹಳ್ಳಿಯಲ್ಲಿ ನಡೆದಿದ್ದು , ಈ ಘಟನೆ ಸಂಬಂಧ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಚನ್ನಗಿರಿ ತಾಲ್ಲೂಕಿನ ಯಲೋದಹಳ್ಳಿ ಗ್ರಾಮದ ಚಟಾಕಿ ನಾಗರಾಜ, ಇಸ್ತ್ರೀ ನಾಗರಾಜ, ಮಧು, ಅರ್ಜುನ, ಬಸವಂತ, ಕುಂದೂರ ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನಿಲ್ ಹಾಗೂ ಪ್ರದೀಪ್ ಬಂಧಿತ ಆರೋಪಿಗಳು.
41 ವರ್ಷದ ಮಹಿಳೆಯೊಬ್ಬರು ನೀಡಿದ ಬಸವಾಪಟ್ಟಣ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 88/2026 ದಾಖಲಿಸಲಾಗಿದೆ. ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ 70, 77 ರೆ/ವಿ 190 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 67(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೂರಿನ ಪ್ರಕಾರ, “ಜೂನ್ 3ರಂದು ಸಂಜೆ ಕುಟುಂಬದ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತಮ್ಮ ತವರೂರು ಯಲೋದಹಳ್ಳಿ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಗ್ರಾಮದ ಸಮೀಪ ಕೆಲ ಯುವಕರು ಮಾತನಾಡಿಸಿ, ತಂಪು ಪಾನೀಯ ನೀಡಿದ್ದು, ಬಳಿಕ ಬೈಕ್‌ನಲ್ಲಿ ಜಮೀನೊಂದಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ನಂತರ ಮಹಿಳೆಗೆ ಎಚ್ಚರವಾದಾಗ ಅವರು ಸಂಬಂಧಿಕರ ಮನೆಗೆ ತೆರಳಿದ್ದು, ಕೆಲವು ದಿನಗಳ ಬಳಿಕ ನಗ್ನ ಫೋಟೋ ಮತ್ತು ವಿಡಿಯೋಗಳು ಮೊಬೈಲ್‌ಗಳಲ್ಲಿ ಹರಿದಾಡುತ್ತಿರುವ ವಿಚಾರ ತಿಳಿದು ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ವಿಚಾರಿಸಿದಾಗ, ಯಲೋದಹಳ್ಳಿ ಗ್ರಾಮದ ಚಟಾಕಿ ನಾಗರಾಜ, ಇಸ್ತ್ರೀ ನಾಗರಾಜ, ಮಧು, ಅರ್ಜುನ, ಬಸವಂತ, ಕುಂದೂರ ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ ಹಾಗೂ ಪ್ರದೀಪ ವಿರುದ್ಧ ಆರೋಪ ಕೇಳಿ ಬಂದಿದ್ದು, ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಂತ್ರಸ್ತೆಯ ಗುರುತು ಹಾಗೂ ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿರಿಸಲಾಗಿದೆ.






