ದಾವಣಗೆರೆ | ಗೋಹತ್ಯೆ ತಡೆಯಲು ಸರ್ಕಾರ ರಾಷ್ಟ್ರೀಯ ಪಶು ಎಂದು ಘೋಷಿಸಲಿ: ವಿಶ್ವ ಮುಸ್ಲಿಂ ಪರಿಷತ್

Date:

ಗೋವನ್ನು ರಾಷ್ಟ್ರೀಯ ಪಶು ಎಂಬುದಾಗಿ ಘೋಷಿಸುವ ಮೂಲಕ ದೇಶದಲ್ಲಿ ಗೋ ಹತ್ಯೆ ತಡೆಯಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ದಾವಣಗೆರೆಯಲ್ಲಿ ವಿಶ್ವ ಮುಸ್ಲಿಂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸುಭಾನ್ ಖಾನ್‌ ಒತ್ತಾಯಿಸಿದ್ದಾರೆ.

- Advertisement -

ದಾವಣಗೆರೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಮುಸ್ಲಿಂ ಪರಿಷತ್ ಮುಖಂಡ ಸುಭಾನ್ ಖಾನ್‌, “ಗೋ ರಕ್ಷಣೆ ಹೆಸರಿನಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾಚಾರ, ಅಪರಾಧ ಹಾಗೂ ಅನಾಹುತಗಳನ್ನು ತಡೆಯಲು ಕೇಂದ್ರ ಸರ್ಕಾರ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದು ಘೋಷಿಸಿರುವಂತೆ ಹಸುವಿಗೂ ರಾಷ್ಟ್ರೀಯ ಪಶುವಿನ ಸ್ಥಾನಮಾನ ನೀಡಬೇಕು.‌ ಗೋ ಹತ್ಯೆ ಮಾಡುವವರಿಗೆ ಕನಿಷ್ಠ 5ರಿಂದ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

“ಪ್ರತಿದಿನ ಸುಮಾರು 100ರಿಂದ 150 ಗೋವುಗಳ ವಧೆ ನಡೆಯುತ್ತಿದೆ. ಈ ಬಗ್ಗೆ ಮುಸ್ಲಿಂ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಭಿಯಾನ ಆರಂಭಿಸಲಾಗಿದೆ. ಅಕ್ರಮ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಕಾನೂನು ಚೌಕಟ್ಟಿನಡಿ ಬಂದ್ ಮಾಡಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪಾಲಿಕೆಗಳು ಕ್ರಮ ಕೈಗೊಳ್ಳಬೇಕು. ದಾವಣಗೆರೆಯ ಆಜಾದ್ ನಗರ, ಭಾಷಾ ನಗರ ಹಾಗೂ ಕೆಟಿಜೆ ನಗರ ಭಾಗಗಳಲ್ಲಿ ಹಲವಾರು ಅಕ್ರಮ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ಬಹುತೇಕಕ್ಕೆ ಲೈಸೆನ್ಸ್ ಇಲ್ಲ” ಎಂದು ಆರೋಪಿಸಿದರು.

“ಗೋಹತ್ಯೆ ತಡೆಯುವ ಹೆಸರಿನಲ್ಲಿ ಕೆಲವರು ಹಲ್ಲೆ ನಡೆಸುವುದು, ಹಣ ವಸೂಲಿ ಮಾಡುವುದು ಮತ್ತು ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಹಾಸಭೆಯ ವತಿಯಿಂದ ಮನವಿ ಸಲ್ಲಿಸಲಾಗುವುದು. ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆಗೆ ಅವಕಾಶ ಕೊಡದೆ, ಕಾನೂನುಬದ್ಧ ರೀತಿಯಲ್ಲಿ ಸಮಸ್ಯೆ ಪರಿಹರಿಸಬೇಕು” ಎಂದು ಅಭಿಪ್ರಾಯಪಟ್ಟರು.

“ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆ ತಡೆಯಲು ನಾವು ಸ್ವತಃ ಕಾರ್ಯನಿರ್ವಹಿಸುತ್ತೇವೆ. ಮುಸ್ಲಿಂ ಸಮುದಾಯದವರಿಗೆ ಮನವಿ ಮಾಡುತ್ತೇನೆ.‌ ಹಬ್ಬಗಳಲ್ಲಿಯೂ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಗೋ ಹತ್ಯೆ ಮಾಡಬಾರದು. ಕೆಲವು ಮುಸ್ಲಿಂ ಧಾರ್ಮಿಕ ಮುಖಂಡರು ಹಾಗೂ ಮೌಲ್ವಿಗಳು ಸಹ ಗೋ ಮಾಂಸ ಸೇವನೆ ಮತ್ತು ಹಸು ಖರೀದಿಸದಂತೆ ಫತ್ವಾ ಹೊರಡಿಸಿದ್ದಾರೆ. ಅದನ್ನು ಎಲ್ಲರೂ ಪಾಲಿಸಬೇಕು” ಎಂದು ಕರೆ ನೀಡಿದರು.

“ಕಳೆದ 15 ವರ್ಷಗಳಿಂದ ವಿಶ್ವ ಮುಸ್ಲಿಂ ಪರಿಷತ್ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಸಂಘಟನೆಯನ್ನು ಮತ್ತಷ್ಟು ಸಕ್ರಿಯಗೊಳಿಸಲಾಗಿದೆ. ಮುಸ್ಲಿಮರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವುದು, ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸುವುದು ಹಾಗೂ ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ಗೋಹತ್ಯೆ ನಿಷೇಧ ಅಭಿಯಾನ ಆರಂಭಿಸಲಾಗಿದೆ. ಮುಸ್ಲಿಂ ಸಮುದಾಯ ಈ ದೇಶದ ಕಾನೂನನ್ನು ಗೌರವಿಸುತ್ತದೆ ಮತ್ತು ಅದನ್ನು ಪಾಲಿಸುತ್ತದೆ” ಎಂದು ಸ್ಪಷ್ಟಪಡಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಗಳೂರು ರೈತರ ಕುಂದುಕೊರತೆ ಸಭೆ; ನಿಗಧಿತ ದರದಲ್ಲಿ ಬೀಜ ಗೊಬ್ಬರ ಮಾರಾಟಕ್ಕೆ ಸೂಚನೆ

“ದಾವಣಗೆರೆಯಲ್ಲಿಯೂ ಗೋವುಗಳ ವಿಚಾರವಾಗಿ ಉದ್ವಿಗ್ನ ಘಟನೆಗಳು ನಡೆದಿವೆ. ಕೆಲವರು ಭಾಷಾ ನಗರ ಭಾಗಕ್ಕೂ ನುಗ್ಗಿ ಗೋ ಹತ್ಯೆ ವಿರೋಧಿಸಿ ಎಚ್ಚರಿಕೆ ನೀಡಿದ್ದ ಘಟನೆ ನಡೆದಿದೆ. ಯಾರ ಭಾವನೆಗೂ ಧಕ್ಕೆ ತರುವ ರೀತಿಯಲ್ಲಿ ಗೋ ಹತ್ಯೆ ಮಾಡಬಾರದು ಎಂದು ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡುತ್ತಿದ್ದು, ದೇಶದಲ್ಲಿ ಸರ್ವಧರ್ಮೀಯರು ಸಹೋದರರಂತೆ ಬದುಕಬೇಕು. ಬಕ್ರೀದ್ ಸೇರಿದಂತೆ ಯಾವುದೇ ಹಬ್ಬದ ಸಂದರ್ಭದಲ್ಲೂ ಗೋ ಹತ್ಯೆ ಮಾಡದೇ, ಅಹಿಂಸೆ, ಶಾಂತಿ ಮತ್ತು ಸಾಮರಸ್ಯದ ದಾರಿಯಲ್ಲಿ ಸಾಗೋಣ” ಎಂದು ಕರೆ ನೀಡಿದರು.

ಪರಿಷತ್ ಮುಖಂಡರಾದ ಅಲ್ಲಾಬಕ್ಷಿ, ನೂರುಲ್ಲಾ, ಶೇಕ್ ಅಹಮ್ಮದ್, ಫರ್ವೇಜ್ ಇತರರು ಇದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಇನ್ಮುಂದೆ ಪ್ರತಿಭಟನೆಗೆ ಅವಕಾಶವಿಲ್ಲ: ಧರಣಿಗೆ ದೆಹಲಿ ಪೊಲೀಸರಿಂದ 3 ಪರ್ಯಾಯ ಸ್ಥಳಗಳ ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿಯ ಪ್ರಮುಖ ಐತಿಹಾಸಿಕ ಪ್ರತಿಭಟನಾ ಸ್ಥಳವಾಗಿದ್ದ ಜಂತರ್ ಮಂತರ್...

ಬಂಗಾಳದ ನವರಾತ್ರಿ- ತಾಯಿ ದುರ್ಗೆಯ ಕೇಶ ತಯಾರಕರು ಮುಸ್ಲಿಮರು- ಕೋಮು ಸೌಹಾರ್ದಕ್ಕೊಂದು ನಿದರ್ಶನ

ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಹಾಗೂ ದುರ್ಗಾಪೂಜೆಯೆಂದರೆ ಕೇವಲ ಒಂದು ಧಾರ್ಮಿಕ ಹಬ್ಬವಲ್ಲ,...

ಪಾತ್ರಕ್ಕಾಗಿ 14 ಕೆ.ಜಿ. ತೂಕ ಹೆಚ್ಚಿಸಿಕೊಂಡ ನಿಮಿಷಾ ಸಜಯನ್: ಅಭಿನಯವನ್ನೇ ಉಸಿರಾಗಿಸಿಕೊಂಡ ಅಪರೂಪದ ಕಲಾವಿದೆ

ಭಾರತೀಯ ಚಿತ್ರರಂಗದಲ್ಲಿ ನಾಯಕಿಯೊಬ್ಬಳು ಯಶಸ್ವಿಯಾಗಬೇಕಾದರೆ ಹೇಗಿರಬೇಕು ಎಂಬುದಕ್ಕೆ ಬಹುಕಾಲದಿಂದ ಕೆಲವು ಅಲಿಖಿತ...