ದಾವಣಗೆರೆ | ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಸೂಚನೆ

Date:

“ಜಿಲ್ಲೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪ್ರಸ್ತುತ ಕೇವಲ 4 ರಿಂದ 5 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಿ ರೈತರಿಗೆ ನಿರಂತರವಾಗಿ 7 ಗಂಟೆಗಳ ಕಾಲ  ವಿದ್ಯುತ್ ಸರಬರಾಜು ಮಾಡಲು ಕ್ರಮವಹಿಸಬೇಕು” ಎಂದು ಕಾಂಗ್ರೆಸ್ ಮುಖಂಡ, ದಾವಣಗೆರೆ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ  ಅಧ್ಯಕ್ಷರಾದ ಶಾಮನೂರು ಬಸವರಾಜಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -
1004323149

ದಾವಣಗೆರೆಯ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ  ‘ಪಂಚ ಗ್ಯಾರಂಟಿ’ ಯೋಜನೆಗಳ ಪ್ರಗತಿ ಪರಿಶೀಲನಾ 
ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ “ರೈತರಿಗೆ ಸರದಿ ಸಾಲು ಪದ್ದತಿಯಡಿ ವಿದ್ಯುತ್‌ ಸರಬರಾಜು ಮಾಡಲಾಗುತ್ತಿದ್ದು, ಕೃಷಿ  ಚಟುವಟಿಕೆಗಳಿಗೆ  ತೊಂದರೆಯಾಗದಂತೆ ನಿಗದಿತ ಅವಧಿಯವರೆಗೆ ಗುಣಮಟ್ಟದ ವಿದ್ಯುತ್ ನೀಡಲು ಆದ್ಯತೆ ನೀಡಬೇ̧ಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

“ರೈತರು ರಾತ್ರಿ ಹಗಲೆನ್ನದೆ ದುಡಿಯುವುದರಿಂದ,  ಅವರಿಗೆ ನಿಗದಿತ ಅವಧಿಯಲ್ಲಿ ಅಡಚಣೆಯಿಲ್ಲದ ವಿದ್ಯುತ್ ಸಿಕ್ಕರೆ ಮಾತ್ರ ಕೃಷಿ ಲಾಭದಾಯಕವಾಗಲು 
ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಂಚಕರ ಆನ್‌ಲೈನ್‌ ಟ್ರೇಡಿಂಗ್‌ ಆಮಿಷಕ್ಕೆ ಹಣ ಕಳೆದುಕೊಂಡ ಉಪನ್ಯಾಸಕ

ಜಗಳೂರು ತಾಲ್ಲೂಕಿನಲ್ಲಿ 30×40 ವಿಸ್ತೀರ್ಣ ಮತ್ತು ಅದಕ್ಕಿಂತ ಕಡಿಮೆ ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾದ ಸುಮಾರು 156 ಮನೆಗಳಿಗೆ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಮತಿ ನೀಡುತ್ತಿಲ್ಲ ಎಂಬ ವಿಷಯವನ್ನು ಗ್ಯಾರಂಟಿ ಸಮಿತಿಯ ಸದಸ್ಯರು ಸಭೆಯ ಗಮನಕ್ಕೆ ತಂದರು. ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ, ನಿಯಮಾನುಸಾರ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮವಹಿಸುವುದಾಗಿ ಬೆಸ್ಕಾಂ ಅಧಿಕಾರಿಗಳು ಸಭೆಗೆ ಭರವಸೆ ನೀಡಿದರು.

.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...