ದಾವಣಗೆರೆ | ಜಗಳೂರು ರೈತರ ಕುಂದುಕೊರತೆ ಸಭೆ; ನಿಗದಿತ ದರದಲ್ಲಿ ಬೀಜ ಗೊಬ್ಬರ ಮಾರಾಟಕ್ಕೆ ಸೂಚನೆ

Date:

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ ಅಧ್ಯಕ್ಷತೆಯಲ್ಲಿ ರೈತರ ಕುಂದುಕೊರತೆ ಸಭೆ ಮಾಡಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳ ನೇತೃತ್ವದಲ್ಲಿ ಸರ್ಕಾರ ನಿಗದಿಪಡಿಸಿದ ಬೆಲೆಯಲ್ಲಿ ರೈತರಿಗೆ ಬೀಜ ರಸಗೊಬ್ಬರ ಮಾರಾಟ ಮಾಡಬೇಕು ಎಂದು ಸೂಚಿಸಲಾಯಿತು..‌

- Advertisement -

ಜಿಲ್ಲೆ ಹಾಗೂ ತಾಲೂಕಿನಲ್ಲಿ ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಬಿತ್ತನೆಗೆ ರೈತರಿಗೆ ಬೀಜ ಮತ್ತು ರಸಗೊಬ್ಬರಗಳ ಕೊರತೆ, ಅಕ್ರಮ ಮತ್ತು ಹೆಚ್ಚಿನ ಬೆಲೆಗೆ ಮಾರಾಟ, ಬೆಲೆ ಏರಿಕೆಯಂತಹ ಸಮಸ್ಯೆ ಉಂಟಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಮೇ16, 2026 ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಾಸುದೇವ ಮೇಟಿ ಬಣ ಜಗಳೂರು ತಾಲ್ಲೂಕು ಘಟಕದ ವತಿಯಿಂದ ತಾಲ್ಲೂಕು ದಂಡಾಧಿಕಾರಿ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ರೈತರ ಕುಂದುಕೊರತೆಗಳ ಬಗ್ಗೆ ಹಾಗು ರಸ ಗೊಬ್ಬರ ಅಂಗಡಿ ಮಾಲೀಕರ ಸಭೆ ನಡೆಸುವಂತೆ ಹೋರಾಟದ ಮೂಲಕ ಮನವಿಯನ್ನು ಸಲ್ಲಿಸಿತ್ತು. ಹಲವು ಇತರ ಸಂಘಟನೆಗಳು ಕೂಡ ಮನವಿ ಸಲ್ಲಿಸಿದ್ದವು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಂಘಟನೆಗಳ ಹೋರಾಟದ ಫಲವಾಗಿ ಮಂಗಳವಾರ ಮೇ 26ರಂದು ಜಗಳೂರು ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕಿನ ರೈತರ ಕುಂದುಕೊರತೆ ಸಭೆಯನ್ನು ನಡಸಲಾಯಿತು.

ಶಾಸಕ ದೇವೇಂದ್ರಪ್ಪ ರೈತರ ಸಮಸ್ಯೆಗಳನ್ನು ಆಲಿಸಿ ಮಾತನಾಡಿ “ಮುಂಗಾರು ಮಳೆ ಆರಂಭವಾಗಿದ್ದು, ತಾಲೂಕಿನಲ್ಲಿ ರೈತರು ಈಗಾಗಲೇ ಬಿತ್ತನೆಗೆ ಉಳುಮೆ ಜೊತೆಗೆ ತಯಾರಿ ನಡೆಸಿದ್ದಾರೆ.‌ ಕೆಲವು ದಿನಗಳಲ್ಲಿ ಬಿತ್ತನೆ ಕಾರ್ಯ ಪ್ರಾರಂಭವಾಗಲಿದ್ದು, ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ, ತಾಲೂಕಿಗೆ ಅಗತ್ಯವಿರುವ ಬೀಜ, ರಸಗೊಬ್ಬರ, ಔಷಧ ದಾಸ್ತಾನು ಇರಿಸಿಕೊಳ್ಳಬೇಕು. ಗೊಬ್ಬರ ಅಂಗಡಿ, ವ್ಯಾಪಾರಸ್ಥರು ಕೂಡ ರೈತರು, ಇಲಾಖೆಗೆ ಸಹಕಾರ ನೀಡಬೇಕು. ಸರ್ಕಾರ ನಿಗದಿಪಡಿಸಿದ ಬೆಲೆಯಲ್ಲಿ ರೈತರಿಗೆ ಬೀಜ ರಸಗೊಬ್ಬರ ಸಿಗಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.‌

ಸದರಿ ರೈತರ ಕುಂದು ಕೊರತೆಗಳ ಸಭೆಯಲ್ಲಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ಹಾಗು ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸುವ ಬಗ್ಗೆ, ರೈತರಿಗೆ ಯೂರಿಯ ಗೊಬ್ಬರದ ಜೊತೆ ಒತ್ತಾಯವಾಗಿ ಲಿಂಕ್ ಔಷಧಿಗಳನ್ನು ನೀಡಬಾರದು, ರೈತರಿಗೆ ನಿಗದಿ ಪಡಿಸಿದ (MRP) ದರಕ್ಕಿಂತ ಹೆಚ್ಚಿನ ದರದಲ್ಲಿ ಗೊಬ್ಬರವನ್ನು ಮಾರಾಟ ಮಾಡಬಾರದು, ರಸಗೊಬ್ಬರದ ಅಂಗಡಿ ಮುಂಬಾಗ ಗೊಬ್ಬರದ ದರಗಳ ಪಟ್ಟಿಯನ್ನು ಹಾಕಬೇಕೆಂದು ಸೂಚನೆ ಮಂಡಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತೀರ್ಥಹಳ್ಳಿಯ ಸಮೃದ್ಧಿ, ಸಹ್ಯಾದ್ರಿ, ಶರಾವತಿ ಸಹಕಾರ ಸಂಘಗಳಲ್ಲಿ ಅವ್ಯವಹಾರ ಆರೋಪ

ಸಭೆಯಲ್ಲಿ ದಾವಣಗೆರೆ ಜಿಲ್ಲಾ ಕೃಷಿ ಜಂಟಿ ನಿರ್ದೇಶಕರು ಜಿಯಾವುಲ್ಲಾ, ಜಿಲ್ಲಾ ಕೃಷಿ ಇಲಾಖೆ ಡಿಡಿ ಭಾರತಮ್ಮ ಹಾಗು ಜಗಳೂರು ತಾಲೂಕಿನ ಗ್ರೇಡ್ 2 ತಹಶೀಲ್ದಾರ್ ಮಂಜಾನಂದ ಜಿ ಕೆ ಹಾಗೂ ಜಗಳೂರು ತಾಲ್ಲೂಕಿನ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಗೊಬ್ಬರದ ಅಂಗಡಿ ಮಾಲೀಕರು, ಕೃಷಿ ಪತ್ತಿನ ಸಹಕಾರ ಸಂಘದ ಸೊಸೈಟಿ ಅಧಿಕಾರಿಗಳು, ರೈತ ಸಂಘದ ಪದಾಧಿಕಾರಿಗಳು, ರೈತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...