ದಾವಣಗೆರೆ | ವೇತನ ಹಿಂಬಾಕಿ, ಬೇಡಿಕೆ ಈಡೇರಿಕೆಗಾಗಿ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಮುಷ್ಕರ

Date:

ಸಾರಿಗೆ ನೌಕರರು ಹಾಗೂ ಕಾರ್ಮಿಕರ ಹಿಂಬಾಕಿ ವೇತನ ಬಿಡುಗಡೆ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದು ಸರ್ಕಾರ ಈಡೇರಿಸಿಲ್ಲ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ ಒತ್ತಾಯಿಸಿ ಮೇ 20, 2026ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದು, ಮುಷ್ಕರಕ್ಕೆ ಸಮಸ್ತ ನಾಗರಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದೆ.

- Advertisement -

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೂನಿಯನ್ ಅಧ್ಯಕ್ಷ ಉಮೇಶ್ ಆವರಗೆರೆ “ಏಪ್ರಿಲ್ 29ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಂಟಿ ಕ್ರಿಯಾ ಸಮಿತಿಯು ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳನ್ನು ಮಂಡಿಸಿತ್ತು. 38 ತಿಂಗಳ ಹಿಂಬಾಕಿ ಹಣದಲ್ಲಿ ಸರ್ಕಾರ ಈಗಾಗಲೇ 26 ತಿಂಗಳ ಬಾಕಿಯನ್ನು ಬಿಡುಗಡೆ ಮಾಡಿದ್ದು, ಉಳಿದ 12 ತಿಂಗಳ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೇ 2024ರ ಜನವರಿ 1ರಿಂದ ನಾಲ್ಕು ವರ್ಷದ ಅವಧಿಗೆ ಮೂಲ ವೇತನದ ಶೇ.25ರಷ್ಟು ವೇತನ ಹೆಚ್ಚಳ ಜಾರಿಗೊಳಿಸಬೇಕೆಂದು ಸಮಿತಿ ಆಗ್ರಹಿಸಿತ್ತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1004347389

“ಸಭೆಯಲ್ಲಿ ಸಾರಿಗೆ ಸಚಿವರು ಕಾರ್ಮಿಕರ ಮಾತುಗಳನ್ನು ಆಲಿಸಿದ್ದರೂ ವೇತನ ಹೆಚ್ಚಳದ ಕುರಿತು ಅಂತಿಮ ನಿರ್ಧಾರ ಪ್ರಕಟಿಸದೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮತ್ತೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಆದರೆ ಮೇ 12ರಂದು ಸರ್ಕಾರ ಏಕಪಕ್ಷೀಯವಾಗಿ ಮೂಲವೇತನದಲ್ಲಿ ಶೇ.12.5ರಷ್ಟು ಹೆಚ್ಚಳವನ್ನು 2025ರ ಏಪ್ರಿಲ್ 1ರಿಂದ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಕ್ರಮವನ್ನು ಜಂಟಿ ಕ್ರಿಯಾ ಸಮಿತಿ ತೀವ್ರವಾಗಿ ಖಂಡಿಸಿದ್ದು, ಇದು ಸಾರಿಗೆ ನೌಕರರಿಗೆ ಆರ್ಥಿಕ ನಷ್ಟ ಉಂಟುಮಾಡುವ ಜೊತೆಗೆ ದೀರ್ಘಕಾಲದಿಂದ ಪಾಲಿಸಿಕೊಂಡು ಬಂದಿದ್ದ ಕಾನೂನುಬದ್ಧ ಹಕ್ಕುಗಳಿಗೆ ಧಕ್ಕೆಯಾಗಿದೆ” ಎಂದು ಆರೋಪಿಸಿದರು.

“ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ಶಿಫಾರಸುಗಳಂತೆ ಶೇ.27.5ರಷ್ಟು ವೇತನ ಹೆಚ್ಚಳ ನೀಡಿರುವ ಸರ್ಕಾರವು ಸಾರಿಗೆ ನೌಕರರ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು ಹೊರಡಿಸಿರುವ ಎರಡು ಆದೇಶಗಳನ್ನು ಹಿಂಪಡೆದು ಜಂಟಿ ಕ್ರಿಯಾ ಸಮಿತಿಯೊಂದಿಗೆ ಚರ್ಚಿಸಿ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕ ಸಂಘಟನೆಗಳು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, 2023ರ ಡಿಸೆಂಬರ್ 31ರಂದು ಜಾರಿಯಲ್ಲಿದ್ದ ಮೂಲ ವೇತನದ ಆಧಾರದಲ್ಲಿ ಶೇ.25ರಷ್ಟು ವೇತನ ಹೆಚ್ಚಳವನ್ನು 2024ರ ಜನವರಿ 1ರಿಂದ ಜಾರಿಗೊಳಿಸಬೇಕು ಎಂದು ಆಗ್ರಹಿಸಿವೆ. ಜೊತೆಗೆ ಶೇ.31ರಷ್ಟು ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಿ, ಬಾಕಿ ಹಣವನ್ನು ಸೇವೆಯಲ್ಲಿರುವ ಹಾಗೂ ನಿವೃತ್ತ ನೌಕರರಿಗೆ ಪಾವತಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪೋಕ್ಸೋ ಪ್ರಕರಣ, ವಚನಾನಂದಶ್ರೀ ವಿಚಾರಣೆ: ವೈದ್ಯಕೀಯ ತಪಾಸಣೆ

“ಬೇಡಿಕೆಗಳಾದ 26 ತಿಂಗಳ ಬಾಕಿ ಹಣವಾದ 1,272 ಕೋಟಿ ರೂಪಾಯಿಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕು, ಬಾಟಾ ಸೇರಿದಂತೆ ವಿವಿಧ ಭತ್ಯೆಗಳನ್ನು ಹೆಚ್ಚಿಸಬೇಕು ಹಾಗೂ ಫಾರಂ-4 ಸೇರಿ ಇತರ ಬೇಡಿಕೆಗಳನ್ನು ಒಂದು ತಿಂಗಳೊಳಗೆ ಚರ್ಚಿಸಿ ಪರಿಹರಿಸಬೇಕು ಎಂದು ಜಂಟಿ ಕ್ರಿಯಾ ಸಮಿತಿ ಮತ್ತು ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ಸರ್ಕಾರವನ್ನು ಆಗ್ರಹಿಸುತ್ತದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಿರ್ಜಾ ರಹಮತ್, ಖಜಾಂಚಿ ಹನುಮಂತ, ಸಂಘಟನಾ ಕಾರ್ಯದರ್ಶಿ ಆನಂದ್ ನಾಯ್ಕ, ಕಾರ್ಮಿಕ ಮುಖಂಡ ರಾಚಪ್ಪ ಸೇರಿದಂತೆ ಇತರರು ಹಾಜರಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...