ದಾವಣಗೆರೆ | ಜಗಳೂರಿನಲ್ಲಿ ಬಕ್ರೀದ್ ಹಬ್ಬದ ಶಾಂತಿ-ಸಾಮರಸ್ಯ ಕಾಪಾಡಲು ಶಾಂತಿ ಸಭೆ

Date:

ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಪೊಲೀಸ್ ಠಾಣೆಯಲ್ಲಿ ಇಲಾಖೆ ವತಿಯಿಂದ ವಿವಿಧ ಮುಖಂಡರ ಶಾಂತಿ ಸಭೆ ನಡೆಸಲಾಯಿತು.

- Advertisement -

ಸಭೆಯಲ್ಲಿ ಮಾತನಾಡಿದ ಜಗಳೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಿದ್ರಾಮಯ್ಯ “ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವು ಶಾಂತಿ, ಸಂಭ್ರಮ ಹಾಗೂ ಸಾಮರಸ್ಯತೆಯ ಸಂಕೇತವಾಗಬೇಕು” ಎಂದು ತಿಳಿಸಿದರು. .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

“ಜಗಳೂರು ತಾಲ್ಲೂಕಿನಲ್ಲಿ ಹಿಂದೂ-ಮುಸ್ಲಿಂ ಬಾಂಧವ್ಯ ಉತ್ತಮವಾಗಿದ್ದು, ಧರ್ಮ ಸಂಘರ್ಷಗಳಿಗೆ ಯಾವುದೇ ಆಸ್ಪದ ಇಲ್ಲ ಎಂದು ತಿಳಿಸಿದರು. ಎಲ್ಲ ಧರ್ಮಗಳ ಹಬ್ಬಗಳನ್ನು ಧರ್ಮಾತೀತವಾಗಿ ಆಚರಿಸುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದರು.

“ಹಬ್ಬಗಳ ಆಚರಣೆಯ ವೇಳೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಉದ್ದೇಶದಿಂದ ಶಾಂತಿ ಸಭೆ ನಡೆಸಲಾಗುತ್ತಿದೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆಗೆ ತೆರಳುವ ಮೆರವಣಿಗೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ರಸ್ತೆ ಅಗಲೀಕರಣ ಕಾಮಗಾರಿ ಹಾಗೂ ಮಳೆಗಾಲದ ಹಿನ್ನೆಲೆ ಯಾವುದೇ ಅಡೆತಡೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ನಾಯಕ ಸಮಾಜದ ಮುಖಂಡ ಬಿ. ಲೋಕೇಶ್ ಮಾತನಾಡಿ, “ತಾಲ್ಲೂಕಿನಲ್ಲಿ ಎಲ್ಲಾ ಸಮುದಾಯದ ಜನರು ಸಾಮರಸ್ಯದಿಂದ ಬದುಕುತ್ತಿದ್ದು, ದಶಕಗಳಿಂದ ಹಿಂದೂ-ಮುಸ್ಲಿಂ ಬಾಂಧವರು ಅನ್ಯೋನ್ಯತೆಯಿಂದ ಹಬ್ಬಗಳನ್ನು ಆಚರಿಸಿಕೊಂಡು ಬಂದಿದ್ದಾರೆ ಎಂದರು. ಮುಂದೆಯೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಮಾಜಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಇಕ್ಬಾಲ್ ಖಾನ್ ಮಾತನಾಡಿ, “ಪಟ್ಟಣದ ಎಂಟು ಮಸೀದಿಗಳಲ್ಲದೆ ಗ್ರಾಮೀಣ ಭಾಗಗಳಲ್ಲಿಯೂ ಮೂರು ದಿನಗಳ ಕಾಲ ಬಕ್ರೀದ್ ಹಬ್ಬದ ಅಂಗವಾಗಿ ದಾನ, ಧರ್ಮ ಹಾಗೂ ಖುರ್ಬಾನಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. ಬೆಳಿಗ್ಗೆ 9 ಗಂಟೆಯಿಂದ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದ್ದು, ಯುವಕರಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಲಾಗಿದೆ ಎಂದು ಹೇಳಿದರು. ಯಾರ ಭಾವನೆಗಳಿಗೂ ಧಕ್ಕೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಿಲ್ಲೆಯ ಕೃಷಿ ಭಾಗ್ಯ ಯೋಜನೆಯ ಉತ್ತಮ ಪ್ರದರ್ಶಿಕೆಗಳಿಗೆ ಪ್ರಥಮ ಸ್ಥಾನ

ಸಭೆಯಲ್ಲಿ ಎಎಸ್‌ಐ ನಟರಾಜ್, ಮುಸ್ಲಿಂ ಮುಖಂಡರಾದ ದಾದಾಪೀರ್, ರಹಮತ್ ಉಲ್ಲಾ, ಜಿಲ್ಲಾ ಅಲ್ಪಸಂಖ್ಯಾತರ ಉಪಾಧ್ಯಕ್ಷ ಶಫಿವುಲ್ಲಾ, ಲುಕ್ಮಾನ್ ಖಾನ್, ಹಫೀಜ್ ಉಲ್ಲಾಖಾನ್, ವಕೀಲ ಹನುಮಂತಪ್ಪ, ರಾಜನಹಟ್ಟಿ ಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...