ದಾವಣಗೆರೆ | ಎಸ್‌ಐಆರ್ ಪ್ರಜಾತಂತ್ರ, ಸಂವಿಧಾನದ ಆಶಯಗಳ ವಿರೋಧಿ: ಜನಪರ ಸಂಘಟನೆಗಳು ಧರಣಿ

Date:

ದೇಶದ ಪ್ರಜಾತಂತ್ರದ ಅಡಿಪಾಯವನ್ನು ದುರ್ಬಲಗೊಳಿಸುವ ಹಾಗೂ ಸಂವಿಧಾನದ ಆಶಯಗಳಿಗೆ ವಿರೋಧಿಯಾಗಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಕ್ಷಣ ತಡೆಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

- Advertisement -

ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, “ಪ್ರಸ್ತುತ ಜಾರಿಯಲ್ಲಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಕೊರತೆ ಕಂಡುಬರುತ್ತಿದ್ದು, ಲಕ್ಷಾಂತರ ಅರ್ಹಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯ ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1004462823

ಈ ವೇಳೆ ಮಾತನಾಡಿದ ಕೋಮು ಸೌಹಾರ್ದ ವೇದಿಕೆ ಮುಖಂಡ, ವಕೀಲರಾದ ಅನೀಸ್ ಪಾಷಾ “ಲಕ್ಷಾಂತರ ನಾಗರೀಕರ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಮೂಲಕ ಪೌರತ್ವ ಕಿತ್ತುಕೊಳ್ಳುವ ಎಸ್ ಐ ಆರ್ ಪ್ರಕ್ರಿಯೆಯನ್ನು ತಿರಸ್ಕರಿಸಿ, ಪ್ರಸ್ತುತ ಸ್ವರೂಪದ ಎಸ್‌ಐಆರ್ ಪ್ರಕ್ರಿಯೆಯನ್ನು ಒಪ್ಪುವುದಿಲ್ಲ ಎಂಬ ತನ್ನ ನಿಲುವನ್ನು ಚುನಾವಣಾ ಆಯೋಗಕ್ಕೆ ಸ್ಪಷ್ಟವಾಗಿ ತಿಳಿಸಬೇಕು. ಸ್ಪೆಲ್ಲಿಂಗ್ ಅಥವಾ ಜನ್ಮ ದಿನಾಂಕದಂತಹ ಸಣ್ಣಪುಟ್ಟ ವ್ಯತ್ಯಾಸಗಳನ್ನು ಆಧರಿಸಿ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಕ್ರಮವನ್ನು ನಿಲ್ಲಿಸಬೇಕು. ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರು ಸುಲಭವಾಗಿ ಪರಿಶೀಲಿಸಬಹುದಾದ ಕಂಪ್ಯೂಟರ್ ರೀಡಬಲ್ ಸ್ವರೂಪದಲ್ಲಿ ಪ್ರಕಟಿಸಬೇಕು” ಎಂದು ಆಗ್ರಹಿಸಿದರು.

“ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಕರಡು ಪಟ್ಟಿಯನ್ನು ಬಹಿರಂಗಪಡಿಸಿ, ಸಾರ್ವಜನಿಕರ ಸಮ್ಮುಖದಲ್ಲಿ ತಿದ್ದುಪಡಿ ಪ್ರಕ್ರಿಯೆ ನಡೆಸಬೇಕು. ಸಂಪೂರ್ಣ ಪರಿಷ್ಕರಣೆ ಪ್ರಕ್ರಿಯೆಗೆ ಕನಿಷ್ಠ ಒಂದು ವರ್ಷದ ಅವಧಿ ನಿಗದಿಪಡಿಸಿ, ಪರಿಶೀಲನೆ ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸಮರ್ಪಕ ಸಮಯಾವಕಾಶ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

1004462821

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎಸ್ ಡಿ ಪಿ ಐ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ “ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಅಲೆಮಾರಿಗಳು, ಆದಿವಾಸಿಗಳು, ದಲಿತರು ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ಹಾಗೂ ಸರಳ ವಿಧಾನಗಳನ್ನು ರೂಪಿಸಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪ್ರತ್ಯೇಕವಾಗಿ ವೈಜ್ಞಾನಿಕ ಮತ್ತು ಜನಸ್ನೇಹಿ ಮಾದರಿಯಲ್ಲಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು. ಗ್ರಾಮಸಭೆ ಮತ್ತು ವಾರ್ಡ್ ಸಭೆಗಳ ಮೂಲಕ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ರಾಜ್ಯದ ಸಮಗ್ರ ಮತದಾರರ ದಾಖಲೆ ರೂಪಿಸಬೇಕು” ಎಂದು ಒತ್ತಾಯಿಸಿದರು.

1004462804
Oplus_131072

“ಪರಿಶೀಲನೆಗೊಂಡ ಮತದಾರರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವುದು, ದಾಖಲೆಗಳಿಲ್ಲದವರಿಗೆ ತಕ್ಷಣ ವಾಸ ದೃಢೀಕರಣ ಪತ್ರ ನೀಡುವುದು ಹಾಗೂ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್‌ನಲ್ಲಿ “ಮತದಾರರ ನೆರವು ಕೇಂದ್ರ”ಗಳನ್ನು ತೆರೆಯಬೇಕು. ಜನರಿಗೆ ಅಗತ್ಯ ದಾಖಲೆಗಳನ್ನು ತ್ವರಿತವಾಗಿ ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು. ರಾಜ್ಯದ ಯಾವುದೇ ಅರ್ಹ ಮತದಾರ ತನ್ನ ಮೂಲಭೂತ ಪ್ರಜಾತಾಂತ್ರಿಕ ಹಕ್ಕನ್ನು ಕಳೆದುಕೊಳ್ಳದಂತೆ ಸರ್ಕಾರ ಜವಾಬ್ದಾರಿಯುತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನ ಬದಲಾವಣೆಯ ಉದ್ದೇಶದಿಂದ ಚುನಾವಣೆಗಳಲ್ಲಿ ಬಹುಮತ ಪಡೆಯಲು ಅರ್ಹ ಮತದಾರರನ್ನು ಹೊರಗಿಟ್ಟು ಚುನಾವಣೆ ನಡೆಸಲು ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲಿ ಹೋಯಿತು ನಿಮ್ಮ ‘ಅಚ್ಛೆ ದಿನ್’, ನೀವು ಭರವಸೆಯ ಕೊಟ್ಟ ಕಪ್ಪು ಹಣ ಎಲ್ಲಿದೆ.‌ ನುಸುಳುಕೋರರ ಹಿಡಿಯುವ ಸಲುವಾಗಿ ಎಫ್ಐಆರ್ ನಡೆಸುತ್ತಿದ್ದೇವೆ ಎನ್ನುತ್ತೀರಿ, ನಿಮ್ಮ ಅಧಿಕಾರದ 12 ವರ್ಷಗಳಲ್ಲಿ ಒಬ್ಬೇ ಒಬ್ಬ ನುಸುಳುಕೋರ ಈಗ ಸಿಕ್ಕಿ ಬಿದ್ದರೂ ನಿಮ್ಮ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯ ಮತ್ತು ಗೃಹ ಸಚಿವಾಲಯದ ಸಚಿವರು ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಾವಣಗೆರೆ ಸೂಕ್ತ ಸ್ಥಳ: ವಕೀಲ ಅರುಣಕುಮಾರ್

ಮುಖಂಡರಾದ ಸಲ್ಮಾ ಮಾತನಾಡಿ “ಜನರಿಗೆ ಅಗತ್ಯ ದಾಖಲೆಗಳನ್ನು ತ್ವರಿತವಾಗಿ ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು. ರಾಜ್ಯದ ಯಾವುದೇ ಅರ್ಹ ಮತದಾರ ತನ್ನ ಮೂಲಭೂತ ಪ್ರಜಾತಾಂತ್ರಿಕ ಹಕ್ಕನ್ನು ಕಳೆದುಕೊಳ್ಳದಂತೆ ಸರ್ಕಾರ ಜವಾಬ್ದಾರಿಯುತ ಕ್ರಮ ಕೈಗೊಳ್ಳಬೇಕು” ಎಂದು ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅನಿಷ್ ಬಾಷಾ, ಕೆ.ಎಚ್.ಹನೀಪ್ ಬಾಷಾ, ದಾದಾಪೀರ್, ಈರಣ್ಣ, ಇಸ್ಮಾಯಿಲ್ ಸಾಬ್, , ಸಮೀವುಲ್ಲಾ, ತಾಹೀರ್ ಹುಸೇನ್ ಹಾಗೂ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ವೇದಿಕೆ ಸೇರಿದಂತೆ ಶಶಿ ಅನೇಕ ಪ್ರಗತಿಪರ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...